ಕೇರಳದಿಂದ ಕರ್ನಾಟಕಕ್ಕೆ ಬರಲು ಹೊಸ ಮಾರ್ಗಸೂಚಿ
ಬೆಂಗಳೂರು, ಜುಲೈ 01; ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯಕ್ಕೆ ಕೇರಳದಿಂದ ಆಗಮಿಸುವ ವ್ಯಕ್ತಿಗಳ ಕುರಿತು ವಿಶೇಷ ಕಣ್ಗಾವಲು ವಹಿಸಬೇಕು ಎಂದು ಸೂಚನೆ ನೀಡಿದೆ.
ಕೇರಳದಲ್ಲಿ 24 ಗಂಟೆಯಲ್ಲಿ 12,868 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 124 ಜನರು ಮೃತಪಟ್ಟಿದ್ದು, 11,564 ಜನರು ಗುಣಮುಖಗೊಂಡಿದ್ದಾರೆ. ಕೇರಳದ ಕೆಲವು ಜಿಲ್ಲೆಗಳಲ್ಲಿ ಡೆಲ್ಟಾ ವೈರಸ್ ರೂಪಾಂತರಿ ಕೋವಿಡ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.
ಕರ್ನಾಟಕದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ವಿಶೇಷ ಕಣ್ಗಾವಲು ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿರುತ್ತದೆ ಎಂದು ಸರ್ಕಾರ ಹೇಳಿದೆ. ಆದ್ದರಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಕೇರಳದಿಂದ ವಿಮಾನ, ರೈಲು, ಬಸ್, ಟ್ಯಾಕ್ಸಿ, ಸ್ವಂತ ವಾಹನ ಇತ್ಯಾದಿಗಳ ಮೂಲಕ ಕರ್ನಾಟಕಕ್ಕೆ ಆಗಮಿಸುವ ಜನರು 72 ಗಂಟೆಗಳ ಮೊದಲ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು. ಕೇರಳದಿಂದ ರಾಜ್ಯಕ್ಕೆ ಬರುವ ಎಲ್ಲಾ ವಿಮಾನ ಪ್ರಯಾಣಿಕರಿಗೂ ಇದು ಅನ್ವಯವಾಗುತ್ತದೆ.
ವಿಮಾನಯಾನ ಸಂಸ್ಥೆಗಳು 72 ಗಂಟೆಗಳ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರುವ ಜನರಿಗೆ ಮಾತ್ರ ಬೋರ್ಡಿಂಗ್ ಪಾಸ್ ನೀಡತಕ್ಕದ್ದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ರೈಲಿನಲ್ಲಿ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳುವುದು ರೈಲ್ವೆ ಪ್ರಾಧಿಕಾರದ ಜವಾಬ್ದಾರಿಯಾಗಿದೆ.
ಬಸ್‌ಗಳ ಮೂಲಕ ಬರುವವರು ಸಹ 72 ಗಂಟೆಗಳ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಹೊಂದಿರುವುದನ್ನು ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು ಎಂದು ಮಾರ್ಗಸೂಚಿ ಹೇಳಿದೆ.
Special surveillance measures for persons arriving from Kerala-reg.
— K'taka Health Dept (@DHFWKA) July 1, 2021
ಕೇರಳದಿಂದ ಆಗಮಿಸುವ ವ್ಯಕ್ತಿಗಳ ಕುರಿತು ವಿಶೇಷ ಕಣ್ಗಾವಲು ಕ್ರಮಗಳನ್ನು ಅನುಸರಿಸುವ ಬಗ್ಗೆ.@CMofKarnataka @mla_sudhakar @drashwathcn @GovindKarjol @laxmansavadi @siddaramaiah @hd_kumaraswamy @DKShivakumar @BSBommai pic.twitter.com/Rp66Pq6tri
ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮೂಲಕ ರಾಜ್ಯಕ್ಕೆ ಪ್ರವೇಶಿಸಿಸುವ ವಾಹನಗಳಿಗೆ (ಚಾಲಕರು, ಪ್ರಯಾಣಿಕರು, ಸಹಾಯಕರು, ಕ್ಲೀನರ್) ನಿಯಮಪಾಲನೆಗೆ ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲು ಸೂಚನೆ ನೀಡಲಾಗಿದೆ.












Click it and Unblock the Notifications