ಕೋವಿಡ್ ಹಗರಣ: ಈ ಕಾರಣಕ್ಕೆ ಬಿಜೆಪಿ ನಾಯಕರಿಗೆ ಶುರುವಾಯ್ತು ಢವಢವ
ಕೋವಿಡ್ ಹಗರಣದ ವಿಷಯದಲ್ಲಿ ಬಿಜೆಪಿಗೆ ಬಿಸಿಮುಟ್ಟಿಸಲು ಕಾಂಗ್ರೆಸ್ ಕೊನೆಗೂ ಮುಂದಾಗಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಕೋವಿಡ್ ಹಗರಣ ನಡೆದಿತ್ತು ಎನ್ನುವ ಆರೋಪ ಇದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಕೋವಿಡ್ ಹಗರಣವನ್ನು ತನಿಖೆ ನಡೆಸುವುದಾಗಿ ಕಾಂಗ್ರೆಸ್ ಹೇಳಿತ್ತು. ಇದಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಜಾನ್ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದ ಆಯೋಗವನ್ನೂ ಕಾಂಗ್ರೆಸ್ ರಚನೆ ಮಾಡಿದೆ. ಇದೀಗ ಕಾಂಗ್ರೆಸ್ ಈ ವಿಷಯಲ್ಲಿ ಮುಂದಡಿ ಇರಿಸಿದೆ.
ಮುಡಾ ಹಗರಣದ ಕಾವು ಹೆಚ್ಚಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವು ಬಿಜೆಪಿಗೂ ಬಿಸಿ ಮುಟ್ಟಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಕೋವಿಡ್ ಬಂದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿ ಇತ್ತು. ಈ ಸಂದರ್ಭದಲ್ಲಿ ಕೋವಿಡ್ ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ಹಾಗೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಇವೆ. ಇದೀಗ ಕಾಂಗ್ರೆಸ್ ಬಿಜೆಪಿಗೆ ಸರಿಯಾಗಿಯೇ ಬಿಸಿ ಮುಟ್ಟಿಸಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಕೋವಿಡ್ ಅಕ್ರಮಗಳ ವರದಿಯನ್ನೇ ಕಾಂಗ್ರೆಸ್ ಅಸ್ತ್ರವನ್ನಾಗಿಸಿಕೊಳ್ಳುತ್ತಿದೆ ಎನ್ನಲಾಗುತ್ತಿದೆ. ಕೋವಿಡ್ ಹೆಸರಿನಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿತ್ತು. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರವು ಜಸ್ಟೀಸ್ ಜಾನ್ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದ ಆಯೋಗವನ್ನು ರಚಿಸಿದೆ. ಈ ಆಯೋಗವು ಈಚೆಗಷ್ಟೇ ತನ್ನ ಮಧ್ಯಂತರ ವರದಿಯನ್ನು ಸಲ್ಲಿಕೆ ಮಾಡಿದೆ. ಅಲ್ಲದೇ ಮಧ್ಯಂತರ ವರದಿ ಅಧ್ಯಯನ ಮಾಡುವುದಕ್ಕಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮತ್ತೊಂದು ಸಮಿತಿಯನ್ನೂ ಸಹ ರಚಿಸಲಾಗಿದೆ. ಇದೀಗ ರಾಜ್ಯ ಸರ್ಕಾರವು ಕೋವಿಡ್ ಹಗರಣದ ಅಸ್ತ್ರವನ್ನು ಹಿಡಿದು ಬಿಜೆಪಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಕೋವಿಡ್ ಹಗರಣ ಅಧಿಕಾರಿ ಸಸ್ಪೆಂಡ್
ರಾಜ್ಯ ಕಾಂಗ್ರೆಸ್ ಸರ್ಕಾರವು ಕೋವಿಡ್ ಕಾಲದಲ್ಲಿ ನಡೆದಿತ್ತು ಎನ್ನಲಾಗಿರುವ ಹಗರಣಗಳ ತನಿಖೆಯನ್ನು ಚುರುಕುಗೊಳಿಸಿದೆ. ಈ ನಡುವೆ ಒಬ್ಬ ಅಧಿಕಾರಿಯನ್ನೂ ಕೋವಿಡ್ ಅಕ್ರಮ ನಡೆಸಿದ ಆರೋಪದ ಮೇಲೆ ಸಸ್ಪೆಂಡ್ ಮಾಡಲಾಗಿದೆ. ಬೆಂಗಳೂರುಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಆರ್ಥಿಕ ಸಲಹೆಗಾರ ಜಿ.ಟಿ.ರಘು ಅವರನ್ನು ಸಸ್ಪೆಂಡ್ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಹಿಂದೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಜಿ.ಟಿ ರಘು ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಮತ್ತು ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಹೀಗಾಗಿ, ಇವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಬೆಂಗಳೂರು ಇದರ ಆರ್ಥಿಕ ಸಲಹೆಗಾರರಾಗಿರುವ ಜಿ.ಟಿ.ರಘು ಅವರು ಈ ಹಿಂದೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಮತ್ತು ಟೆಂಡರ್… pic.twitter.com/ltoFKal2ou
— CM of Karnataka (@CMofKarnataka) October 7, 2024
ನಾಪತ್ತೆ: ರಾಜ್ಯದಲ್ಲಿ ಕೋವಿಡ್ ಸಂದರ್ಭದಲ್ಲಿ ಹಗರಣಗಳು ನಡೆದಿವೆ ಎನ್ನುವ ಆರೋಪಗಳ ಇವೆ. ಇದರ ನಡುವೆ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಫೈಲ್‌ಗಳೇ ನಾಪತ್ತೆ ಆಗಿರುವ ಗಂಭೀರ ಆರೋಪವೂ ಇದೆ. ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಕೋವಿಡ್ ವೇಳೆ ನೂರಾರು ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ ಎನ್ನುವುದು ಹಾಗೂ ಈ ಸಂಬಂಧದ ಫೈಲ್‌ಗಳೇ ನಾಪತ್ತೆ ಆಗಿದೆ ಎನ್ನುವ ಗಂಭೀರವಾದ ಅಂಶಗಳು ವರದಿಯಲ್ಲಿ ಸ್ಪಷ್ಟವಾಗಿದೆ ಎಂದಿದ್ದರು. ಅಲ್ಲದೇ ಈ ವರದಿಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯರ್ಶಿ ಎಲ್.ಕೆ.ಅತೀಕ್ ನೇತೃತ್ವದ ಸಮಿತಿಗೆ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸಿದ್ದೇವೆ ಎಂದಿದ್ದರು. ಅಲ್ಲದೇ ವಿಚಾರಣಾ ಆಯೋಗದ ಅವಧಿಯನ್ನು ಆರು ತಿಂಗಳು ಮುಂದುವರಿಸುವುದಾಗಿಯೂ. ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಈ ಆಯೋಗದ ವರದಿ ಮಂಡನೆಯಾಗಲಿದೆ ಎಂದದಿದ್ದರು.
ಬಿಜೆಪಿ ನಾಯಕರಿಗೆ ಆತಂಕವೇಕೆ: ಕೋವಿಡ್ ಸಂದರ್ಭದಲ್ಲಿ ನಡೆದಿತ್ತು ಎನ್ನಲಾಗಿರುವ ಹಗರಣಗಳ ವಿಷಯ ಚರ್ಚೆಯಾಗುತ್ತಿದ್ದಂತೆಯೇ ಕೆಲವು ಬಿಜೆಪಿ ನಾಯಕರು ಬೆವರುತ್ತಿದ್ದಾರೆ ಎಂದು ಹೇಳಲಾಗಿದೆ. ಕೋವಿಡ್ ಮಧ್ಯಂತರ ವರದಿ ಪ್ರಕಟವಾದ ಸಂದರ್ಭದಲ್ಲೇ ಹಲವು ಬಿಜೆಪಿ ನಾಯಕರು ಕಾನೂನು ಸಮರದ ಮಾತನಾಡಿದ್ದರು. ಇನ್ನು ಕೋವಿಡ್ ಬಂದಾಗ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇತ್ತು. ಈ ಅವಧಿಯಲ್ಲಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು. ಡಾ.ಕೆ ಸುಧಾಕರ್ ಅವರು ಆರೋಗ್ಯ ಸಚಿವರಾಗಿದ್ದರು.












Click it and Unblock the Notifications