ಓಮಿಕ್ರಾನ್ ಪ್ರಭಾವ: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಎಲ್ಲ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು, ನವೆಂಬರ್ 29: ಕೊರೊನಾವೈರಸ್ ಹೊಸ ರೂಪಾಂತರ ತಳಿ ಓಮಿಕ್ರಾನ್ ಪತ್ತೆಯಾಗುತ್ತಿರುವುದರ ಹಿನ್ನೆಲೆ ಕರ್ನಾಟಕದಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಯಾವುದೇ ರೀತಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಅಕಾಡೆಮಿ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ಹೊರಡಿಸಲಾಗಿದೆ.

ನೆರೆಯ ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಪ್ರಯಾಣಿಕರು, ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾ ವಹಿಸುವುದು. ವೈದ್ಯಕೀಯ ಮತ್ತು ಅರೆವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಕೊವಿಡ್-19 ಸೋಂಕು ತಪಾಸಣೆ ನಡೆಸುವುದು, ಸೋಂಕು ಕಂಡು ಬಂದಲ್ಲಿ ಶಿಷ್ಟಾಚಾರದ ಪ್ರಕಾರ ಚಿಕಿತ್ಸೆ ನೀಡುವುದಕ್ಕೆ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಆದೇಶಿಸಿದೆ.

ಬೆಂಗಳೂರು, ಮೈಸೂರು ಮತ್ತು ಧಾರವಾಡ ಜಿಲ್ಲೆಯಲ್ಲಿನ ಕಾಲೇಜುಗಳಲ್ಲಿ ಇತ್ತೀಚೆಗೆ ಕೊವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗಿ ವರದಿಯಾದ ಹಿನ್ನೆಲೆ ಶಿಸ್ತುಕ್ರಮಕ್ಕೆ ಸೂಚಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಕೊರೊನಾವೈರಸ್ ಶಿಷ್ಟಾಚಾರ ಪಾಲನೆ ಕುರಿತು ಸರ್ಕಾರ ಮತ್ತೊಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಕರ್ನಾಟಕದಲ್ಲಿ ಕೊವಿಡ್-19 ಹೊಸ ರೂಪಾಂತರ ತಳಿ ಓಮಿಕ್ರಾನ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಎರಡು ಆದೇಶಗಳಲ್ಲಿ ಉಲ್ಲೇಖಿಸಿದ ಅಂಶಗಳನ್ನು ಮುಂದೆ ಓದಿ.

Covid Scare: Karnataka Govt. advises schools, colleges to postpone all events and SOP Released

ಕರ್ನಾಟಕದಲ್ಲಿ ಓಮಿಕ್ರಾನ್ ನಿಯಂತ್ರಣಕ್ಕೆ ಶಿಸ್ತುಕ್ರಮ:

* ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳಿಗೂ ಮೊದಲು ನಡೆಸಿದ RT-PCR ಪರೀಕ್ಷೆಯ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿರುತ್ತದೆ.

* ಕೇರಳದಿಂದ 15 ದಿನಗಳ ಹಿಂದೆ ( ನವೆಂಬರ್ 12 ರಿಂದ ನವೆಂಬರ್ 27) ಕರ್ನಾಟಕದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹಾಗೂ ಇತರೆ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಲು ಆಗಮಿಸಿರುವ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ RT-PCR ಪರೀಕ್ಷೆಗೆ ಒಳಪಡಿಸುವುದು.

* ಕರ್ನಾಟಕದಲ್ಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹಾಗೂ ಇತರೆ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಲು ಕೇರಳದಿಂದ ರಾಜ್ಯಕ್ಕೆ ಆಗಮಿಸಿದ 7ನೇ ದಿನ ಅಂಥ ವಿದ್ಯಾರ್ಥಿಗಳನ್ನು RT-PCR ಪರೀಕ್ಷೆಗೆ ಒಳಪಡಿಸುವುದು.

* ಒಂದು ವೇಳೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟರೆ, ಅಂಥ ವಿದ್ಯಾರ್ಥಿಗಳಿಗೆ ಶಿಷ್ಟಾಚಾರದ ಪ್ರಕಾರ ಚಿಕಿತ್ಸೆ ನೀಡಲಾಗುವುದು. ಇದರ ಜೊತೆಗೆ ಕೊವಿಡ್-19 ನೆಗೆಟಿವ್ ವರದಿಯನ್ನು ಪಡೆದರೆ, ಅಂಥ ವಿದ್ಯಾರ್ಥಿಗಳು 7 ದಿನಗಳವರೆಗೂ ಕ್ವಾರೆಂಟೈನ್ ನಲ್ಲಿ ಇರಬೇಕು, ಇದರ ಜೊತೆಗೆ 7ನೇ ದಿನ ಮತ್ತೊಮ್ಮೆ RT-PCR ಪರೀಕ್ಷೆಗೆ ಒಳಗಾಗಬೇಕು.

* ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಕೇರಳದಿಂದ ಆಗಮಿಸುವ ಶೇ.100ರಷ್ಟು ಪ್ರಯಾಣಿಕರನ್ನು ಕೊವಿಡ್-19 ಶಿಷ್ಟಾಚಾರದ ಪ್ರಕಾರ ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

* ಶಿಕ್ಷಣ, ವ್ಯಾಪಾರ ಮತ್ತು ಇತರೆ ಕಾರಣಗಳಿಗೆ ಪ್ರತಿನಿತ್ಯ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ RT-PCR ವರದಿಯನ್ನು ಈಗಾಗಲೇ ಕಡ್ಡಾಯಗೊಳಿಸಲಾಗಿದೆ.

ಕಾಲೇಜುಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ:

* ಎಲ್ಲಾ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಸ್ಕ್ರೀನಿಂಗ್ ಪರೀಕ್ಷೆ ನಡೆಸುವುದು. ಕೊರೊನಾವೈರಸ್ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಪರೀಕ್ಷೆ ನಡೆಸಿ, ಶಿಷ್ಟಾಚಾರದ ಪ್ರಕಾರ ಚಿಕಿತ್ಸೆ ನೀಡುವುದಕ್ಕೆ ಕ್ರಮ ಕೈಗೊಳ್ಳುವುದು.

* ಶೈಕ್ಷಣಿಕ ಸಂಸ್ಥೆಗಳಲ್ಲಿ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎರಡು ತಿಂಗಳವರೆಗೂ ಮುಂದೂಡುವುದು.

* ಶೈಕ್ಷಣಿ ಸಂಸ್ಥೆಗಳಲ್ಲಿ ನಡೆಯುವ ಕಾನ್ಫರೆನ್ಸ್, ಸೆಮಿನಾರ್ ಸೇರಿದಂತೆ ಯಾವುದೇ ರೀತಿ ಅಕಾಡೆಮಿಕ್ ಕಾರ್ಯಕ್ರಮಗಳನ್ನು ಕೂಡ ಮುಂದೂಡಿಕೆ ಮಾಡುವುದು. ತರಗತಿಗಳಿಗೆ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗುವಂತೆ ನೋಡಿಕೊಳ್ಳಬೇಕು, ಸಾಧ್ಯವಾದಷ್ಟು ಆನ್ ಲೈನ್ ಮೂಲಕ ಶಿಕ್ಷಣಕ್ಕೆ ಒತ್ತು ನೀಡುವುದು.

* ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಕ್ಯಾಂಪಸ್ ನಲ್ಲಿ ಯಾವುದೇ ರೀತಿ ಕಾರ್ಯಕ್ರಮಗಳು ನಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೊವಿಡ್-19 ಮಾರ್ಗಸೂಚಿಗಳು ಪಾಲನೆ ಆಗುವಂತೆ ಮುತುವರ್ಜಿ ವಹಿಸಬೇಕು.

* ಆರೋಗ್ಯ ಇಲಾಖೆಯು ಸಹ ಕಾನ್ಫರೆನ್ಸ್, ಸೆಮಿನಾರ್ ಮತ್ತು ಸಿಎಂಇ ಕಾರ್ಯಾಗಾರ ಸೇರಿದಂತೆ ಎಲ್ಲ ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ನಡೆಸಬೇಕು. ಆ ಮೂಲಕ ಇತರೆ ವಲಯಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಯಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಹಾಗೂ ಉತ್ತಮ ಸಂದೇಶವನ್ನು ರವಾನಿಸುವ ಕೆಲಸ ಮಾಡಬೇಕು.

* ಎಲ್ಲಾ ಶಿಕ್ಷಣ ಸಂಸ್ಥೆಗಳು ತಮ್ಮ ಸಿಬ್ಬಂದಿ ಹಾಗೂ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವಿದ್ಯಾರ್ಥಿಯು ಕೊವಿಡ್-19 ಲಸಿಕೆಯನ್ನು ಪಡೆದುಕೊಂಡಿದ್ದಾರೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+