ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಪರಿಸ್ಥಿತಿ; ಸರ್ವಪಕ್ಷಗಳ ಸಭೆ ಕರೆದ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಏಪ್ರಿಲ್ 13; "ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಬಸವಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, "ಮೇ 2ರ ತನಕ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ" ಎಂದರು.

ಕರ್ನಾಟಕದಲ್ಲಿ ರಾತ್ರಿ ಕರ್ಫ್ಯೂ; ಮಾರ್ಗಸೂಚಿ ಪ್ರಕಟ,ಯಾವುದಕ್ಕೆ ಅನುಮತಿ? ಕರ್ನಾಟಕದಲ್ಲಿ ರಾತ್ರಿ ಕರ್ಫ್ಯೂ; ಮಾರ್ಗಸೂಚಿ ಪ್ರಕಟ,ಯಾವುದಕ್ಕೆ ಅನುಮತಿ?

ತಾಂತ್ರಿಕ ಸಹಲಾ ಸಮಿತಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಸಲಹೆ ನೀಡಿದೆ ಎಂಬ ವರದಿಯನ್ನು ಮುಖ್ಯಮಂತ್ರಿಗಳು ತಳ್ಳಿ ಹಾಕಿದ್ದಾರೆ. "ನಾನೂ ಕೂಡ ಸಮಿತಿಯಲ್ಲಿದ್ದೇನೆ, ಯಾರೂ ಲಾಕ್ ಡೌನ್‌ಗೆ ಸಲಹೆ ನೀಡಿಲ್ಲ, ಸದ್ಯಕ್ಕೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ" ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಕೋವಿಡ್ 2ನೇ ಅಲೆ; ಕರ್ನಾಟಕ ಸರ್ಕಾರದ ಮಾರ್ಗಸೂಚಿ ಕೋವಿಡ್ 2ನೇ ಅಲೆ; ಕರ್ನಾಟಕ ಸರ್ಕಾರದ ಮಾರ್ಗಸೂಚಿ

COVID Situation Yediyurappa Calls All Party Meeting On April 18

"ಕೋವಿಡ್ ಹರಡುವಿಕೆ ತಡೆಯಲು ಜನರು ಸಹಕಾರ ನೀಡಬೇಕು. ಕೋವಿಡ್ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ಸಲಹೆ ಪಡೆದು ತೀರ್ಮಾನ ಮಾಡುತ್ತೇನೆ" ಎಂದು ಯಡಿಯೂರಪ್ಪ ತಿಳಿಸಿದರು.

ಭಾರತದಲ್ಲಿ 24 ಗಂಟೆಯಲ್ಲಿ 1,61,736 ಹೊಸ ಕೋವಿಡ್ ಪ್ರಕರಣ ಭಾರತದಲ್ಲಿ 24 ಗಂಟೆಯಲ್ಲಿ 1,61,736 ಹೊಸ ಕೋವಿಡ್ ಪ್ರಕರಣ

ಸಭೆಗೆ ಬರುವುದು ಅವರಿಗೆ ಬಿಟ್ಟಿದ್ದು; ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, "ಸರ್ವಪಕ್ಷಗಳ ಸಭೆ ಕರೆಯಿರಿ ಎಂದು ಅವರೇ ಹೇಳಿದ್ದು, ಸಭೆಗೆ ಕರೆಯುತ್ತೇವೆ. ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು" ಎಂದು ಹೇಳಿದರು.

ಕರ್ನಾಟಕದಲ್ಲಿ ಸೋಮವಾರ 9,579 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 75,985ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹಡುವಿಕೆ ತಡೆಯಲು ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ, ಬೀದರ್, ಕಲಬುರಗಿ, ತುಮಕೂರಿನಲ್ಲಿ ಏಪ್ರಿಲ್ 10 ರಿಂದ 20ರ ತನಕ ಕೊರೊನಾ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.

English summary
Karnataka chief minister B. S. Yediyurappa said called all-party meeting on April 18 regarding COVID situation. No question of lockdown right now he clarified.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X