• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣ ಸಲಹೆ ಕೊಟ್ಟ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮೇ 13; ಕೋವಿಡ್ ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗಬಾರದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. "ರಾಜ್ಯದಲ್ಲಿ ಈಗಿನ ಶೇಕಡಾ 55ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ತಿಂಗಳ ಹಿಂದೆ ಈ ಪ್ರಮಾಣ ಶೇಕಡಾ 30ರಷ್ಟಿತ್ತು" ಎಂದು ಹೇಳಿದ್ದಾರೆ.

ಲಾಕ್ ಡೌನ್ ವಿರುದ್ಧ ಗ್ರಾಮೀಣ ಭಾಗದಲ್ಲಿ ದಂಗೆಯಾಗಲಿದೆ: ಸಿದ್ದರಾಮಯ್ಯ ಲಾಕ್ ಡೌನ್ ವಿರುದ್ಧ ಗ್ರಾಮೀಣ ಭಾಗದಲ್ಲಿ ದಂಗೆಯಾಗಲಿದೆ: ಸಿದ್ದರಾಮಯ್ಯ

"ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆಯನ್ನು ಬಲಪಡಿಸಬೇಕು" ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೋವಿಡ್ ಲಾಕ್‌ಡೌನ್; ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ ಕೋವಿಡ್ ಲಾಕ್‌ಡೌನ್; ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಕರ್ನಾಟಕದಲ್ಲಿ ಕೋವಿಡ್ ಹರಡುವಿಕೆ ತಡೆಯಲು 14 ದಿನದ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಲಾಕ್‌ಡೌನ್ ಘೋಷಣೆಯಾಗುತ್ತಿದ್ದಂತೆ ಜನರು ಬೆಂಗಳೂರು ಬಿಟ್ಟು ಗ್ರಾಮಗಳಿಗೆ ತೆರಳಿದ್ದಾರೆ. ಇದರಿಂದಾಗಿ ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ.

ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ

"25 ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಸಚಿವರು ಜಿಲ್ಲೆಯಲ್ಲಿಯೇ ಇರಬೇಕು

ಸಚಿವರು ಜಿಲ್ಲೆಯಲ್ಲಿಯೇ ಇರಬೇಕು

"ಜಿಲ್ಲೆಗಳಲ್ಲಿ ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣ ವ್ಯವಸ್ಥೆಯ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಿಕೊಡಬೇಕು. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ನಡೆಸುವಂತೆ ತಾಕೀತು ಮಾಡಬೇಕು" ಎಂದು ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಸೋಂಕು

ಗ್ರಾಮೀಣ ಪ್ರದೇಶದಲ್ಲಿ ಸೋಂಕು

"ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸರಿಸಲಾಗಿದ್ದ ಸುರಕ್ಷತಾ ಕ್ರಮಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಕೂಡಾ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಉಲ್ಭಣಗೊಳ್ಳಲು ಕಾರಣ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಅಂತರ ರಾಜ್ಯ, ಜಿಲ್ಲಾ ಸಂಚಾರ ನಿರ್ಬಂಧಿಸಿ

ಅಂತರ ರಾಜ್ಯ, ಜಿಲ್ಲಾ ಸಂಚಾರ ನಿರ್ಬಂಧಿಸಿ

"ಕಳೆದ ಒಂದೆರಡು ತಿಂಗಳ ಅವಧಿಯಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳಿದ್ದ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಜನ ಯಾವುದೇ ತಪಾಸಣೆ, ಪರೀಕ್ಷೆ ಇಲ್ಲದೆ ಕರ್ನಾಟಕಕ್ಕೆ ಬಂದಿದ್ದಾರೆ. ಬೆಂಗಳೂರಿನ ಸ್ಥಿತಿ ಬಿಗಡಾಯಿಸಿದ ನಂತರ ರಾಜಧಾನಿಯಿಂದಲೂ ಜನ ಹಿಂಡುಗಟ್ಟಿಕೊಂಡು ಜಿಲ್ಲೆಗಳಿಗೆ ತೆರಳಿದ್ದಾರೆ. ಅಂತರರಾಜ್ಯ ಮಾತ್ರವಲ್ಲ ಅಂತರಜಿಲ್ಲಾ ಸಂಚಾರವನ್ನು ಕೂಡಾ ನಿರ್ಬಂಧಿಸಬೇಕು" ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

English summary
COVID second wave spread in rural areas. Leader of opposition Siddaramaiah suggestion to government to control it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X