ಲಾಕ್‌ಡೌನ್ ಸಡಿಲಿಕೆ ಸೂಚನೆ ಬೆನ್ನಲ್ಲೇ ಜೂ.7ರಂದು ಮತ್ತೊಂದು ಸಭೆ

ಬೆಂಗಳೂರು, ಜೂನ್ 05: ಕೊರೊನಾ ಸೋಂಕಿನ ಕಾರಣ ರಾಜ್ಯದಲ್ಲಿ ಜೂನ್ 14ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಸಿಎಂ ಯಡಿಯೂರಪ್ಪ ಲಾಕ್‌ಡೌನ್‌ ಸಡಿಲಿಕೆಯ ಸುಳಿವನ್ನು ನೀಡಿದ್ದರು.

ಈ ಬೆನ್ನಲ್ಲೇ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಕಮಿಟಿ ಸಭೆ ನಿಗದಿ ಮಾಡಲಾಗಿದೆ. ಟಾಸ್ಕ್‌ ಫೋರ್ಸ್ ಕಾರ್ಯಪಡೆ ಮುಖ್ಯಸ್ಥ, ಡಿಸಿಎಂ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಸದ್ಯದ ಸ್ಥಿತಿ ಹಾಗೂ ಅನ್‌ಲಾಕ್ ಮಾಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಪ್ರತಿನಿತ್ಯದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಆದರೆ ಸಾವಿನ ಸಂಖ್ಯೆ ಇಳಿಮುಖವಾಗಿಲ್ಲ. ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ. ಹೀಗಾಗಿ ಕೊರೊನಾ ಪರಿಸ್ಥಿತಿ ಪರಿಶೀಲನೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿದುಬಂದಿದೆ.

Covid Task Force Committee Meeting Scheduled After Hint Of Unlock In State


ನಂತರ ಅನ್ಲಾಕ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಭೆ ನಂತರ ಹಂತಹಂತವಾಗಿ ವ್ಯಾಪಾರ ಚಟುವಟಿಕೆಗಳಿಗೆ ಹಾಗೂ ಸಣ್ಣಪುಟ್ಟ ಕೈಗಾರಿಕೆಗಳಿಗೆ ವಿನಾಯಿತಿ ನೀಡುವ ನಿರೀಕ್ಷೆ ವ್ಯಕ್ತಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+