• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಾಲೆಗಳ ಆರಂಭದ ಸುಳಿವು ಕೊಟ್ಟ ಆರೋಗ್ಯ ಸಚಿವರು

|
Google Oneindia Kannada News

ಬೆಂಗಳೂರು, ಜುಲೈ 21; ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಶಾಲೆಗಳು ಯಾವಾಗ ಆರಂಭವಾಗಲಿದೆ? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಶಾಲೆಗಳನ್ನು ಆರಂಭ ಮಾಡುವುದಕ್ಕೂ ಮೊದಲು ಶಿಕ್ಷಕರಿಗೆ ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ; 24 ಗಂಟೆಯಲ್ಲಿ 1,639 ಹೊಸ ಕೋವಿಡ್ ಪ್ರಕರಣ ದಾಖಲು ಕರ್ನಾಟಕ; 24 ಗಂಟೆಯಲ್ಲಿ 1,639 ಹೊಸ ಕೋವಿಡ್ ಪ್ರಕರಣ ದಾಖಲು

'ಮಕ್ಕಳ ಕಲಿಕೆ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಆದಷ್ಟು ಶೀಘ್ರವಾಗಿ ಪುನರಾರಂಭಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ' ಎಂದು ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿದೆ; ಶಾಲೆ ತೆರೆಯುವ ಸಮಯ ಬಂದಿದೆಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿದೆ; ಶಾಲೆ ತೆರೆಯುವ ಸಮಯ ಬಂದಿದೆ

'ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ, ಕ್ರಿಯಾಯೋಜನೆ ರೂಪಿಸಲು ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತಗಳ ಜೊತೆಗೆ ಸಮನ್ವಯದೊಂದಿಗೆ ಕಾರ್ಯೋನ್ಮುಖವಾಗಲಿದೆ. ಫಲಾನುಭವಿಗಳ ಸಂಖ್ಯೆ ಮತ್ತು ಲಸಿಕೆಯ ಲಭ್ಯತೆ ಆಧರಿಸಿ ಆಯಾ ಶಾಲೆಗಳ ಆವರಣದಲ್ಲೇ ಲಸಿಕಾ ಶಿಬಿರವನ್ನು ಆಯೋಜಿಸಲಾಗುವುದು' ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹರಿಯಾಣದಲ್ಲಿ ಶಾಲೆ ತೊರೆದ 12.5 ಲಕ್ಷ ಖಾಸಗಿ ಶಾಲಾ ವಿದ್ಯಾರ್ಥಿಗಳು!ಹರಿಯಾಣದಲ್ಲಿ ಶಾಲೆ ತೊರೆದ 12.5 ಲಕ್ಷ ಖಾಸಗಿ ಶಾಲಾ ವಿದ್ಯಾರ್ಥಿಗಳು!

ಈಗಾಗಲೇ ಕರ್ನಾಟಕ ಪದವಿ ಕಾಲೇಜುಗಳನ್ನು ಆರಂಭಿಸಲು ಒಪ್ಪಿಗೆ ನೀಡಿದೆ. ಆದ್ಯತೆಯ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ, ಬೋಧಕರಿಗೆ ಮತ್ತು ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲಿಯೇ ಲಸಿಕೆಯನ್ನು ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಶಾಲೆಗಳಲ್ಲಿ ಸಹ ಲಸಿಕಾ ಶಿಬಿರವನ್ನು ಆಯೋಜನೆ ಮಾಡಲಾಗುತ್ತದೆ.

ಶಿಕ್ಷಣ ಸಚಿವರು ಹೇಳುವುದೇನು?; ಶಾಲೆಗಳ ಆರಂಭದ ಕುರಿತು ಹಲವಾರು ವರದಿಗಳು ಬಂದಿದ್ದವು. ಆದ್ದರಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದರು. "ಶಾಲೆಗಳ ಆರಂಭದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ" ಎಂದು ಸ್ಪಷ್ಟಪಡಿಸಿದ್ದರು.

"ಸೆಪ್ಟೆಂಬರ್‌ನಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ನಿರ್ಣಯವನ್ನು ಸರ್ಕಾರ ತೆಗೆದುಕೊಂಡಿಲ್ಲ. ಕೋವಿಡ್ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಅದ್ಯತೆಗಳು ಬೇರೆ ಇದೆ. ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ತನ್ನನ್ನು ತೊಡಗಿಸಿಕೊಂಡಿದೆ" ಎಂದು ಹೇಳಿದ್ದರು.

"ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಕುರಿತು ಯಾವು ಯಾವುದೇ ನಿರ್ಣಯ ಕೈಗೊಂಡಿಲ್ಲ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅನಗತ್ಯವಾದ ಆತಂಕ ಬೇಡ" ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು.

English summary
In a tweet health minister of Karnataka Dr. K. Sudhakar said that COVID-19 vaccination camp will organized in school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X