ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ 19 ಪರಿಕರ ಖರೀದಿ ಅಕ್ರಮ: ಬಿಜೆಪಿ, ಕಾಂಗ್ರೆಸ್ಸಿಗೆ ಸರಿಯಾಗಿ ಕಿವಿಹಿಂಡಿದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜುಲೈ 23: ಕೋವಿಡ್ 19 ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು, ಯಡಿಯೂರಪ್ಪ ನೇತೃತ್ವದ ಸರಕಾರದ ವಿರುದ್ದ ಕಾಂಗ್ರೆಸ್, ದಾಖಲೆಗಳ ಮೇಲೆ ದಾಖಲೆಯನ್ನು ಬಿಡುಗಡೆ ಮಾಡಿದೆ, ಇದಕ್ಕೆ ಬಿಜೆಪಿ ಪ್ರತ್ಯುತ್ತರವನ್ನೂ ನೀಡಿದೆ.

Recommended Video

Oneplus Nord , ಕೈಗೆಟಕುವ ಬೆಲೆಯಲ್ಲಿ ಬೆಸ್ಟ್ ಫೋನ್ | Oneindia Kannada

ಈ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದು, ಎರಡೂ ಪಕ್ಷಗಳಿಗೆ ನೀತಿಪಾಠವನ್ನು ಮಾಡಿದ್ದಾರೆ. ಇದರ ಜೊತೆಗೆ, ರೇಷ್ಮೆ ಬೆಳೆಗಾರರ ಹಿತವನ್ನು ಕಾಪಾಡಿ ಎಂದು ಎಚ್ಡಿಕೆ, ಬಿಎಸ್ವೈ ಸರಕಾರಕ್ಕೆ ಮನವಿ ಮಾಡಿದ್ದಾರೆ.

 ಯಕಶ್ಚಿತ್ 'ಕುಮಾರಸ್ವಾಮಿ'ಯನ್ನು 'ಕುಮಾರಣ್ಣ'ನನ್ನಾಗಿಸಿದ್ದು ನಿಮ್ಮ ಪ್ರೀತಿ ಯಕಶ್ಚಿತ್ 'ಕುಮಾರಸ್ವಾಮಿ'ಯನ್ನು 'ಕುಮಾರಣ್ಣ'ನನ್ನಾಗಿಸಿದ್ದು ನಿಮ್ಮ ಪ್ರೀತಿ

ಕುಮಾರಸ್ವಾಮಿ ಮಾಡಿದ ಟ್ವೀಟ್, "#COVID19 ಮತ್ತು ಲಾಕ್‌ಡೌನ್‌ಗಳಿಂದಾಗಿ ಮಾರುಕಟ್ಟೆ ಇಲ್ಲದೇ ರಾಜ್ಯದಲ್ಲಿ ₹1000 ಕೋಟಿ ಮೌಲ್ಯದ ರೇಷ್ಮೆ ಖರೀದಿಯಾಗದೇ ಉಳಿದಿದೆ ಎಂಬ ಸಂಗತಿ ರೀಲರ್‌ಗಳು, ಬೆಳೆಗಾರರೊಂದಿಗೆ ಇಂದು ನಡೆಸಿದ ಚರ್ಚೆಯಲ್ಲಿ ತಿಳಿಯಿತು. ಸರ್ಕಾರ ಕೂಡಲೇ ₹450-500 ಕೋಟಿ ಮೊತ್ತದ ರೇಷ್ಮೆ ಖರೀದಿಸಿ ಬೆಳೆಗಾರರು, ರೀಲರ್‌ಗಳನ್ನು ಸಂಕಷ್ಟದಿಂದ ಪಾರು ಮಾಡಬೇಕು".

Covid 19 Equipment Irregularities: HD Kumaraswamy Lambasted BJP And Congress

"#Covid19 ಪರಿಕರಗಳ ಖರೀದಿ ಅಕ್ರಮದ ಬಗೆಗಿನ ಅತ್ಯಂತ ಹಳೇ ರಾಷ್ಟ್ರೀಯ ಪಕ್ಷವೊಂದರ ಆರೋಪ, ಅದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಪ್ರತ್ಯಾರೋಪ, ಕಸರೆರಚಾಟವನ್ನು ಗಮನಿಸಿದೆ. ಕೋವಿಡ್‌ ಈ ರಾಜ್ಯದ ಪ್ರತಿಯೊಬ್ಬನ ಜೀವ, ಜೀವನಕ್ಕೆ ಬೆದರಿಕೆಯೊಡ್ಡಿರುವಾಗ, ಬದುಕನ್ನೇ ಕಸಿಯುತ್ತಿರುವಾಗ ಎರಡೂ ಪಕ್ಷಗಳ ಬೇಜವಾಬ್ದಾರಿ ವರ್ತನೆ ಕಂಡು ಬೇಸರವಾಗಿದೆ" ಎಚ್ಡಿಕೆ ಟ್ವೀಟ್.

"#Covid ಪರಿಕರಗಳ ಖರೀದಿಯಲ್ಲಿ ಅಕ್ರಮವೆಸಗಿರುವುದು ನಿಜವೇ ಆಗಿದ್ದರೆ, ಅದು ಆಡಳಿತ ಪಕ್ಷದ ನೈತಿಕತೆಯೇ ಇಲ್ಲದ, ಮನುಷ್ಯತ್ವ ಹೀನ ಕೃತ್ಯವೇ ಸರಿ. ಕೇವಲ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹಳೇ ರಾಷ್ಟ್ರೀಯ ಪಕ್ಷ ಮತ್ತು ಅದರ ನಾಯಕರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೆ ಅದು ಆ ನಾಯಕರ ರಾಜಕೀಯ ದಾಹದ ಪ್ರತೀಕ" ಕುಮಾರಸ್ವಾಮಿಯ ಟ್ವೀಟ್.

ಕೊರೊನಾ ಸೋಂಕಿತರ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಆಡಿದ ಮುತ್ತಿನಂತ ಮಾತುಕೊರೊನಾ ಸೋಂಕಿತರ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಆಡಿದ ಮುತ್ತಿನಂತ ಮಾತು

"ಹಳೇ ಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ಮೊದಲು ಕೆಸರೆರಚಾಟ ನಿಲ್ಲಿಸಬೇಕು. ನಮ್ಮ ಆದ್ಯತೆ ಜನರ ಜೀವ ಮತ್ತು ಜೀವನವಾಗಬೇಕು. ಮುಖ್ಯಮಂತ್ರಿ ಈ ಬಗ್ಗೆ ಸೂಕ್ತ ಸ್ಪಷ್ಟನೆ ನೀಡಿ, ಪರಿಣಾಮಕಾರಿಯಾಗಿ ಕೋವಿಡ್‌ ಅನ್ನು ನಿಗ್ರಹಿಸುವತ್ತ ಗಮನಹರಿಸಬೇಕು. ಕೋವಿಡ್‌ ನಿಗ್ರಹಿಸುವುದಕ್ಕೆ ನಮ್ಮ ಬೆಂಬಲ. ನಿಮ್ಮ ಕ್ಷುಲ್ಲಕ ನಡವಳಿಕೆಗಳಿಗಲ್ಲ" ಹೀಗೆ ಕುಮಾರಸ್ವಾಮಿ, ಆಡಳಿತ ಮತ್ತು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

English summary
Covid 19 Equipment Irregularities: Former CM HD Kumaraswamy Lambasted BJP And Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X