ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ; ಬಿಜೆಪಿ ಟ್ವೀಟ್

ಬೆಂಗಳೂರು, ನವೆಂಬರ್ 20; ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಗೋಹತ್ಯೆ ನಿಷೇಧದ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ಶಾಸಕರು, ಸಂಸದರು, ಸಚಿವರ ಪೋಸ್ಟ್‌ಗಳಿಗೆ ಈ ಕುರಿತು ಕಮೆಂಟ್ ಹಾಕಲಾಗುತ್ತಿದೆ.

ಕರ್ನಾಟಕ ಬಿಜೆಪಿ ಶುಕ್ರವಾರ ಗೋ ಹತ್ಯೆ ನಿಷೇಧದ ಬಗ್ಗೆ ಟ್ವೀಟ್ ಮಾಡಿದೆ. "ಗೋ ಹತ್ಯೆ ನಿಷೇಧಿಸಲು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ" ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

"ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ. ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ. ಟಿ. ರವಿ ಅವರು ಸಚಿವ ಪ್ರಭು ಚೌವ್ಹಾಣ್ ಅವರೊಂದಿಗೆ ಚರ್ಚಿಸಿದ್ದಾರೆ" ಎಂದು ಬಿಜೆಪಿ ಹೇಳಿದೆ.

Cow Slaughter Bill Karnataka BJP Tweet

"ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಬಿಜೆಪಿ ಸರ್ಕಾರ ಈಗಾಗಲೇ ಸಮಿತಿ ರಚಿಸಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ಮಸೂದೆ ಮಂಡಿಸಲಿದೆ" ಎಂದು ಟ್ವೀಟ್ ಮೂಲಕ ಮಾಹಿತಿ ನೀಡಲಾಗಿದೆ.

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಯಾವಾಗ? ಎಂದು ಕೆಮೆಂಟ್ ಮಾಡುತ್ತಿರುವ ಜನರಿಗೆ "ರಾಜ್ಯದ ಜನತೆಯ ಅಪೇಕ್ಷೆ ಶೀಘ್ರವಾಗಿ ನೆರವೇರಲಿದೆ" ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಗುರುವಾರ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಫೇಸ್ ಬುಕ್‌ ಪೋಸ್ಟ್ ಅನ್ನು ಹಾಕಿದ್ದರು. 'ಫೇಸ್ಬುಕ್ ಕಾಮೆಂಟ್ ಬಾಕ್ಸ್ ನಲ್ಲಿನ ಹೋರಾಟ ಸಾಕು ಪ್ಲೀಸ್' ಎಂದು ಮನವಿ ಮಾಡಿದ್ದಾರೆ.

"ಗೋಹತ್ಯೆ ನಿಷೇಧದ ಬಗ್ಗೆ ನಿಮ್ಮ ಅಭಿಪ್ರಾಯ ಹಾಗೂ ನನ್ನ ಭಾವನೆಯನ್ನು ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಸಾಹೇಬ್ರಿಗೆ ಸಧ್ಯದಲ್ಲೇ ತಿಳಿಸುತ್ತೇನೆ" ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+