CP Yogeshwar: ಡಿ ಕೆ ಶಿವಕುಮಾರ್‌ ಮನೆಯಲ್ಲಿ ಸಿ ಪಿ ಯೋಗೇಶ್ವರ್‌ ಪ್ರತ್ಯಕ್ಷ; ಇಂದೇ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು, ಅಕ್ಟೋಬರ್‌ 23: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಬಿಜೆಪಿಯ ನಾಯಕ ಸಿ.ಪಿ.ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಬೆನ್ನಲ್ಲೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೈನಿಕನ ನಡೆ ಭಾರೀ ಅಚ್ಚರಿಕೆ ಕಾರಣವಾಗಿದ್ದು, ಇಂದು ಡಿ ಕೆ ಶಿವಕುಮಾರ್‌ ನಿವಾಸದಲ್ಲಿ ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್‌ ಪ್ರತ್ಯೇಕರಾಗಿದ್ದಾರೆ.

‌ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ನಿವಾಸದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್‌ ಕಾಣಿಸಿಕೊಂಡಿದ್ದು, ತೀವ್ರರ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಡಿಸಿಎಂ ಡಿಕೆ ಶಿವಕುಮಾ‌ರ್ ಮನೆಯಲ್ಲಿ ಸಿ.ಪಿ ಯೋಗೇಶ್ವ‌ರ್ ಕಾಣಸಿಕೊಂಡಿದ್ದು, ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಫಿಕ್ಸ್ ಆದಂತಿದೆ.

CP Yogeshwar Congress inclusion is almost fixed

ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್‌ ಮನೆಯಲ್ಲಿ ಸಿ ಪಿ ಯೋಗೇಶ್ವರ್‌ ಕಾಣಿಸಿಕೊಂಡಿದ್ದು, ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ನಂತರ ಒಂದೇ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಯೋಗೇಶ್ವ‌ರ್ ತೆರಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮಾತುಕತೆ ನಡೆಸಲಿದ್ದಾರೆ. ಈ ಮೂಲಕ ಸಿಪಿ ಯೋಗೇಶ್ವ‌ರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಜೊತೆಗೆ ಯೋಗೇಶ್ವರ್ ಮಾತುಕತೆ ನಡೆಸಿ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅವರು ಅಧಿಕೃತ ಘೋಷಣೆ ಮಾಡಲಿದ್ದಾರೆ.

ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಸಿ.ಪಿ ಯೋಗೇಶ್ವರ್ ಅವರು ಇಂದು ಬೆಳಗ್ಗೆ 11.30 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಅವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು "ಕಾವೇರಿ"ಯಲ್ಲಿ ಬುಧವಾರ ಭೇಟಿ ಮಾಡಿದ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಶಿವರಾಜ್ ತಂಗಡಗಿ, ಶಾಸಕರಾದ ಕದಲೂರು ಉದಯ್, ಪೊನ್ನಣ್ಣ, ಯತೀಂದ್ರ ಸಿದ್ದರಾಮಯ್ಯ ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+