ರಮೇಶ್ ಜಾರಕಿಹೊಳಿ ಭೇಟಿಯಾದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ!
Recommended Video
ಬೆಂಗಳೂರು, ಮೇ 14 : ಮಹತ್ವದ ಬೆಳವಣಿಗೆಯೊಂದರಲ್ಲಿ ಇಬ್ಬರು ಬಿಜೆಪಿ ನಾಯಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ. ಸೋಮವಾರ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಮಂಗಳವಾರ ಸಂಜೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್‌ನಲ್ಲಿರುವ ನಿವಾಸದಲ್ಲಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ. ಈ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ ಮತ್ತು ನೆಲಮಂಗಲ ಕ್ಷೇತ್ರದ ಮಾಜಿ ಶಾಸಕ ನಾಗರಾಜು ಅವರು ಪ್ರತ್ಯೇಕವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಮೇಶ್ ಜಾರಕಿಹೊಳಿ ಅವರು ಕಳೆದ ವಾರ ಯಮಕನಮರಡಿ ಕ್ಷೇತ್ರದ ಬಿಜೆಪಿ ನಾಯಕರ ಜೊತೆಗೂ ಸಭೆ ನಡೆಸಿದ್ದರು
ಬೆಂಗಳೂರಿನಲ್ಲಿರುವ ರಮೇಶ್ ಜಾರಕಿಹೊಳಿ ಅವರು ಇಬ್ಬರು ನಾಯಕರ ಭೇಟಿಗೆ ಮಂಗಳವಾರ ಸಂಜೆ ಪ್ರತ್ಯೇಕ ಸಮಯವನ್ನು ನೀಡಿದ್ದರು. ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ....

ಕುತೂಹಲ ಮೂಡಿಸಿದ ಭೇಟಿ
ಗೋಕಾಕ್‌ನಲ್ಲಿದ್ದ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಹಿನ್ನಲೆಯಲ್ಲಿ ಬೆಂಗಳೂರಿಗೆ ಬಂದಿದ್ದರು ಎಂಬ ಸುದ್ದಿಗಳು ಇವೆ. ಆದರೆ, ಮಂಗಳವಾರ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು.

ಸಿ.ಪಿ.ಯೋಗೇಶ್ವರ ಭೇಟಿ
ಮಂಗಳವಾರ ಸಿ.ಪಿ.ಯೋಗೇಶ್ವರ ಅವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದರು. ಸಿ.ಪಿ.ಯೋಗೇಶ್ವರ ಅವರು ಚನ್ನಪಟ್ಟಣ ಮತ್ತು ರಾಮನಗರದ ರಾಜಕೀಯದಲ್ಲಿ ಸಕ್ರಿಯರು. ಅವರು ಬೆಳಗಾವಿಯ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿದ್ದು ಏಕೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮತ್ತೆ ಆಪರೇಷನ್ ಕಮಲ?
2018ರ ಡಿಸೆಂಬರ್‌ನಲ್ಲಿ ಆಪರೇಷನ್ ಕಮಲದ ಚಟುವಟಿಕೆಗಳು ನಡೆದಾಗ ಸಿ.ಪಿ.ಯೋಗೇಶ್ವರ ಅವರ ಹೆಸರು ಸಹ ಕೇಳಿಬಂದಿತ್ತು. ಅವರು ಕಾಂಗ್ರೆಸ್ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಇಂದು ಅವರು ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದು, ಪುನಃ ಆಪರೇಷನ್ ಕಮಲ ಆರಂಭವಾಯಿತೇ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.
|
ಪಕ್ಷ ಬಿಡುವುದಿಲ್ಲ ಎಂಬ ಭರವಸೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಟಳ್ಳಿ ಪಕ್ಷದಲ್ಲೇ ಮುಂದುವರೆಯುತ್ತಾರೆಂಬ ಭರವಸೆ ಇದೆ ಎಂದು ಟ್ವೀಟ್ ಮಾಡಿದ್ದರು. ಆದರೆ, ಇಂದು ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿದೆ.
-
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications