ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಮೇಶ್ ಜಾರಕಿಹೊಳಿ ಭೇಟಿಯಾದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ!

|
Google Oneindia Kannada News

Recommended Video

ರಮೇಶ್ ಜಾರಕಿಹೊಳಿ ಹಾಗು ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ ಕುತೂಹಲದ ಭೇಟಿ | Oneindia Kannada

ಬೆಂಗಳೂರು, ಮೇ 14 : ಮಹತ್ವದ ಬೆಳವಣಿಗೆಯೊಂದರಲ್ಲಿ ಇಬ್ಬರು ಬಿಜೆಪಿ ನಾಯಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ. ಸೋಮವಾರ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಮಂಗಳವಾರ ಸಂಜೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್‌ನಲ್ಲಿರುವ ನಿವಾಸದಲ್ಲಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ. ಈ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ ಹೇಳಿದ್ದೇನು?ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ ಹೇಳಿದ್ದೇನು?

ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ ಮತ್ತು ನೆಲಮಂಗಲ ಕ್ಷೇತ್ರದ ಮಾಜಿ ಶಾಸಕ ನಾಗರಾಜು ಅವರು ಪ್ರತ್ಯೇಕವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಮೇಶ್ ಜಾರಕಿಹೊಳಿ ಅವರು ಕಳೆದ ವಾರ ಯಮಕನಮರಡಿ ಕ್ಷೇತ್ರದ ಬಿಜೆಪಿ ನಾಯಕರ ಜೊತೆಗೂ ಸಭೆ ನಡೆಸಿದ್ದರು

ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ ಹೇಳಿದ್ದೇನು?ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರಿನಲ್ಲಿರುವ ರಮೇಶ್ ಜಾರಕಿಹೊಳಿ ಅವರು ಇಬ್ಬರು ನಾಯಕರ ಭೇಟಿಗೆ ಮಂಗಳವಾರ ಸಂಜೆ ಪ್ರತ್ಯೇಕ ಸಮಯವನ್ನು ನೀಡಿದ್ದರು. ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ....

ಕುತೂಹಲ ಮೂಡಿಸಿದ ಭೇಟಿ

ಕುತೂಹಲ ಮೂಡಿಸಿದ ಭೇಟಿ

ಗೋಕಾಕ್‌ನಲ್ಲಿದ್ದ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಹಿನ್ನಲೆಯಲ್ಲಿ ಬೆಂಗಳೂರಿಗೆ ಬಂದಿದ್ದರು ಎಂಬ ಸುದ್ದಿಗಳು ಇವೆ. ಆದರೆ, ಮಂಗಳವಾರ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು.

ಸಿ.ಪಿ.ಯೋಗೇಶ್ವರ ಭೇಟಿ

ಸಿ.ಪಿ.ಯೋಗೇಶ್ವರ ಭೇಟಿ

ಮಂಗಳವಾರ ಸಿ.ಪಿ.ಯೋಗೇಶ್ವರ ಅವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದರು. ಸಿ.ಪಿ.ಯೋಗೇಶ್ವರ ಅವರು ಚನ್ನಪಟ್ಟಣ ಮತ್ತು ರಾಮನಗರದ ರಾಜಕೀಯದಲ್ಲಿ ಸಕ್ರಿಯರು. ಅವರು ಬೆಳಗಾವಿಯ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿದ್ದು ಏಕೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮತ್ತೆ ಆಪರೇಷನ್ ಕಮಲ?

ಮತ್ತೆ ಆಪರೇಷನ್ ಕಮಲ?

2018ರ ಡಿಸೆಂಬರ್‌ನಲ್ಲಿ ಆಪರೇಷನ್ ಕಮಲದ ಚಟುವಟಿಕೆಗಳು ನಡೆದಾಗ ಸಿ.ಪಿ.ಯೋಗೇಶ್ವರ ಅವರ ಹೆಸರು ಸಹ ಕೇಳಿಬಂದಿತ್ತು. ಅವರು ಕಾಂಗ್ರೆಸ್ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಇಂದು ಅವರು ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದು, ಪುನಃ ಆಪರೇಷನ್ ಕಮಲ ಆರಂಭವಾಯಿತೇ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ಪಕ್ಷ ಬಿಡುವುದಿಲ್ಲ ಎಂಬ ಭರವಸೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಟಳ್ಳಿ ಪಕ್ಷದಲ್ಲೇ ಮುಂದುವರೆಯುತ್ತಾರೆಂಬ ಭರವಸೆ ಇದೆ ಎಂದು ಟ್ವೀಟ್ ಮಾಡಿದ್ದರು. ಆದರೆ, ಇಂದು ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿದೆ.

English summary
Channapatna former MLA and BJP leader C.P.Yogeshwar met the Gokak Congress MLA Ramesh Jarakiholi in Bengaluru. Ramesh Jarakiholi who upset with Congress leaders in Bengaluru from past two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X