CP Yogeshwar: ಚನ್ನಪಟ್ಟಣದ ಟಿಕೆಟ್ ಫಿಕ್ಸ್; ಸಿದ್ದರಾಮಯ್ಯ ಕಾಲಿಗೆ ಬಿದ್ದ ಸಿ ಪಿ ಯೋಗೇಶ್ವರ್
ಬೆಂಗಳೂರು, ಅಕ್ಟೋಬರ್ 23: ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಉಪಚುನಾವಣೆಯ ಭರಾಟೆ ಜೋರಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮೊದಲ ಸುತ್ತಿನ ಗೆಲುವು ದಕ್ಕಿದ್ದು, ಮೈತ್ರಿ ನಾಯಕರ ವಿರುದ್ಧ ಮತ್ತೆ ಡಿ ಕೆ ಬ್ರದರ್ಸ್ ತೊಡೆ ತಟ್ಟಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಗಂಟೆ ಗಂಟೆಗೂ ರಾಜಕೀಯ ಬದಲಾಗುತ್ತಿರುತ್ತದೆ. ನಿನ್ನೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಸಿಪಿ ಯೋಗೇಶ್ವರ್ ಇವತ್ತು ಬೆಳಗ್ಗೆಯೇ ಶಿವಕುಮಾರ್ ನಿವಾಸದಲ್ಲಿ ಪ್ರತ್ಯೇಕ್ಷರಾಗಿದ್ದು, ಕೆಲ ಹೊತ್ತು ಮಾತುಕತೆ ನಡೆಸಿದ ಡಿ ಕೆ ಬ್ರದರ್ಸ್ ಹಾಗೂ ಬಿಜೆಪಿ ನಾಯಕರ ಸಿ ಪಿ ಯೋಗೇಶ್ವರ್ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಸಿಎಂ ಜೊತೆಗೆ ಚರ್ಚೆ ನಡೆಸಿದ ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿದ್ದು, ಇಂದು (ಬುಧವಾರ) 11.30 ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಅಲ್ಲದೇ ಕಾಂಗ್ರೆಸ್ ಸೇರ್ಪಡೆಯಾಗಲಿರುವ ಸಿ ಪಿ ಯೋಗೇಶ್ವರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತವಾಗಿದೆ.
ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಸಿ ಪಿ ಯೋಗೇಶ್ವರ್ ಅವರು ಕಾದು ಕುಳಿತ್ತಿದ್ದರು. ಆದರೆ, ಇದೀಗ ಡಿ ಕೆ ಬ್ರದರ್ಸ್ ಬಲೆಗೆ ಸಿ ಪಿ ಯೋಗೇಶ್ವರ್ ಬಿದಿದ್ದು, ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಿಜೆಪಿ ಟಿಕೆಟ್ ಘೋಷಣೆ ಆಗದಿರುವ ಕಾರಣ ಸಿಪಿ ಯೋಗೇಶ್ವರ್ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದ್ದಾರೆ.
ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಸಿ ಪಿ ಯೋಗೇಶ್ವರ್ ಮೈತ್ರಿ ನಾಯಕರಿಗೆ ಠಕ್ಕರ್ ಕೊಡಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅಳಿಯ ಡಾ. ಮಂಜುನಾಥ ಅವರ ಗೆಲುವಿಗೆ ಶ್ರಮಿಸಿದ್ದ ಸಿ ಪಿ ಯೋಗೇಶ್ವರ್ ಅವರು ಚನ್ನಪಟ್ಟಣದಿಂದ ಎನ್ ಡಿ ಎ ಟಿಕೆಟ್ ಆಕಾಂಕ್ಷಿಯಾಗಿದ್ರು. ಆದರೆ, 2+1 ಅನುಪಾತದಲ್ಲಿ ಚನ್ನಪಟ್ಟಣ ಜೆಡಿಎಸ್ ನಾಯಕರಿಗೆ ಬಿಟ್ಟುಕೊಟ್ಟಿದ್ದು, ಇದೀಗ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಮನೆ ಸೇರುವುದು ಗೊತ್ತಾಗುತ್ತಿದ್ದಂತೆಯೇ ಅತ್ತ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಹ ಚನ್ನಪಟ್ಟಣ ಜೆಡಿಎಸ್ ಮುಖಂಡರ ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಲಿದ್ದಾರೆ.












Click it and Unblock the Notifications