Get Updates
Get notified of breaking news, exclusive insights, and must-see stories!

CP Yogeshwar: ಚನ್ನಪಟ್ಟಣ ಗೆದ್ದ ಸಿಪಿ ಯೋಗೇಶ್ವರಗೆ ಸಚಿವ ಸ್ಥಾನ ಫಿಕ್ಸ್?

ಬೆಂಗಳೂರು, ನವೆಂಬರ್‌ 26: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ನವೆಂಬರ್‌ 23 ರಂದು ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಅವರ ವಿರುದ್ಧ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಡಾ. ಮಂಜುನಾಥ್‌ ಅವರ ಗೆಲುವಿಗೆ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರು ಶ್ರಮವಹಿಸಿದ್ರು. ಅಲ್ಲದೇ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಳಿಕ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಚನ್ನಪಟ್ಟಣ ಕ್ಷೇತ್ರದಿಂದ ಸಿ ಪಿ ಯೋಗೇಶ್ವರ್‌ ಅವರಿಗೆ ಟಿಕೆಟ್‌ ಎನ್ನಲಾಗಿತ್ತು. ಆದರೆ, ಬದಲಾದ ರಾಜಕೀಯದಿಂದಾಗಿ ಚನ್ನಪಟ್ಟಣ ಟಿಕೆಟ್‌ ಜೆಡಿಎಸ್‌ ಪಾಲಾಯ್ತು.

CP Yogeshwar Who Won Channapatna Is Likely To Get A Ministerial Berth

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆ ಸಿ ಪಿ ಯೋಗೇಶ್ವರ್ ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿದು, ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್​ಗೆ 1,12,642 ಮತ ದೊರೆತರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ಗೆ 87,229 ಮತಗಳು ದೊರೆತಿವೆ.

ಇನ್ನೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದರುವ ಸಿ ಪಿ ಯೋಗೇಶ್ವರ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಉಪಚುನಾವಣೆಯ ಬಳಿಕ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ ಸಂಪುರ ವಿಸ್ತರಣೆಯಾಗಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿದ್ದು, ಡಿ ಕೆ ಶಿವಕುಮಾರ್‌ ಅವರ ನೀಡಿರುವ ಅಭಯದಂತೆ ಸಿ ಪಿ ಯೋಗೇಶ್ವರ್‌ ಅವರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಮೊದಲಿನಿಂದಲೂ ಡಿ ಕೆ ಬ್ರದರ್ಸ್‌ ಭದ್ರಕೋಟೆಯಾಗಿತ್ತು. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಿಂದ ಸ್ಪರ್ಧೆ ಮಾಡಿದ್ದ ಡಿ ಕೆ ಸುರೇಶ್‌ ಹೀನಾಯವಾಗಿ ಸೋಲು ಅನುಭವಿಸಿದ್ರು. ಈ ಸೋಲಿಗೆ ಪ್ರತಿಯಾಗಿ ಚನ್ನಪಟ್ಟಣ ಕ್ಷೇತ್ರವನ್ನ ಪಡೆಯಲು ಡಿ ಕೆ ಬ್ರದರ್ಸ್‌ ಪಣತೊಟ್ಟಿದ್ರು. ಅದರಂತೆ ಸಿ ಪಿ ಯೋಗೇಶ್ವರ್‌ ಅವರನ್ನ ಕಣಕ್ಕಿಳಿಸಿ, ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹಿಡಿತ ಕೈ ತಪ್ಪಿದ್ದು, ಕನಕಪುರ, ಮಾಗಡಿ, ರಾಮನಗರದಲ್ಲಿ ಕಾಂಗ್ರೆಸ್‌ ಶಾಸಕರಿದ್ದು, ಇದೀಗ ಚನ್ನಪಟ್ಟಣವೂ ಸಹ ಕೈ ನಾಯಕರ ವಶವಾಗಿದೆ. ಈ ನಿಟ್ಟಿನಲ್ಲಿ ಡಿ ಕೆ ಬ್ರದರ್ಸ್‌ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಹಿಡಿತವನ್ನ ಸಾಧಿಸುವ ನಿಟ್ಟಿನಲ್ಲಿ ಕೈ ನಾಯಕರು ಮಾಸ್ಟರ್‌ ಪ್ಲಾನ್‌ ನಡೆಸಿದ್ದಾರೆ. ಅದರಂತೆ ಚನ್ನಪಟ್ಟಣದಿಂದ ಭರ್ಜರಿ ಗೆಲುವು ಕಂಡಿರುವ ಸಿ ಪಿ ಯೋಗೇಶ್ವರ್ ಗೆ ಮಂತ್ರಿ ಪಟ್ಟ ನೀಡುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಬೇಕು ಎಂಬುದು ಡಿ ಕೆ ಶಿವಕುಮಾರ್‌ ಅವರ ತಂತ್ರಗಾರಿಕೆಯಾಗಿದೆ ಎನ್ನಲಾಗಿದೆ.

ಸಿ ಪಿ ಯೋಗೇಶ್ವರ್ ಗೆಲುವಿಗೆ ಕಾರಣವೇನು?

ಚನ್ನಪಟ್ಟಣದಲ್ಲಿ ಈ ಹಿಂದೆ ಎರಡು ಬಾರಿ ಸೋತಿರುವ ಅನುಕಂಪದ ಆಧಾರದ ಮೇಲೆ ಈ ಬಾರಿ ಸಿ ಪಿ ಯೋಗೇಶ್ವರ್​ ಕೈ ಹಿಡಿದಿರಬಹುದು ಎಂದು ಹೇಳಲಾಗಿದೆ. ಇನ್ನೂ ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್‌ ಅವರಿಗೆ ಅವರದ್ದೇ ಆದ ವೈಯಕ್ತಿಕ ವರ್ಚಸ್ಸು ಇದೆ. ಯೋಗೇಶ್ವರ್ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿರುವುದರಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ಲಸ್ ಆಗುರಬಹುದು. ಅಲ್ಲದೇ ಚನ್ನಪಟ್ಟಣವನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಡಿಕೆ ಸಹೋದರರು ಯೋಗೇಶ್ವರ್​ ಬೆನ್ನಿಗೆ ನಿಂತಿರುವುದು ಕೂಡ ನೆರವಾಗಿದೆ ಎಂದು ಹೇಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+