ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ; 12 ಜನರ ಸಜೀವ ದಹನ!
ಬೆಂಗಳೂರು, ಅಕ್ಟೋಬರ್ 07: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, 30 ರಿಂದ40 ಜನ ಕಾರ್ಮಿಕರ ಪೈಕಿ 12 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಹೌದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ಘಟನೆ ನಡೆದಿದೆ. ವಾಹನದಿಂದ ಪಟಾಕಿ ಆನ್ಲೋಡ್ ಮಾಡುವ ವೇಳೆ ಆದ ಅವಘಡ ಸಂಭವಿಸಿದ್ದು, ಏಕಾಏಕಿ ಹೊತ್ತಿಕೊಂಡ ಬೆಂಕಿ ಹೊತ್ತಿಕೊಂಡಿದೆ.
ಇನ್ನೂ ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನೂ ಬೆಂಕಿಗೆ ಸಿಲುಕಿ ಕಾರ್ಮಿಕರು ಮೃತಪಟ್ಟಿದ್ದು, ಎಷ್ಟು ಜನ ಸಿಲುಕಿದ್ದಾರೆ ಎನ್ನುವ ನಿಖರ ಮಾಹಿತಿ ಇಲ್ಲ. ಸಾರ್ವಜನಿಕರನ್ನು ಪೊಲೀಸರು ದೂರ ಕಳುಹಿಸುತ್ತಿದ್ದು, ಸದ್ಯ ಪಟಾಕಿ ಮಳಿಗೆ ಬಳಿ ಮೂರು ಆಂಬುಲೆನ್ಸ್ ಗಳು ಆಗಮಿಸಿವೆ. ಸದ್ಯ ಮೃತ ದೇಹ ಶಿಫ್ಟ್ ಮಾಡಲಾಗಿದೆ.

ಇನ್ನೂ ಪಟಾಕಿ ದಾಸ್ತಾನು ಮಳಿಗೆ ನಾಲೈದು ತಾಸಿನಿಂದ ಹೊತ್ತಿ ಉರಿಯುತ್ತಿದ್ದು, ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿ ಶಾಮಕ ದಳದ ಐದಾರು ವಾಹನಗಳು ಹಾಗೂ ಹತ್ತಾರು ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ನವೀನ್ ಎಂಬುವವರಿಗೆ ಸೇರಿದ್ದ ಈ ಮಳಿಗೆಯಲ್ಲಿ ಸುಮಾರು ಐದು ಕೋಟಿ ಮೌಲ್ಯದ ಪಟಾಕಿಗಳ ಸಂಗ್ರಹ ಇತ್ತು ಎನ್ನಲಾಗಿದೆ.
ಇನ್ನೂ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪಟಾಕಿ ಮಳಿಗೆಯಲ್ಲಿ 30-40 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಹಿಂಬಾಗಿಲಿನಿಂದ ಹೊರಬಂದಿದ್ದರಿಂದ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಈ ಮಳಿಗೆಯಲ್ಲಿ ಹಲವು ಮಂದಿ ಸಿಲುಕಿರುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಅಲ್ಲದೇ ದಾಸ್ತಾನು ಮಳಿಗೆ, ಒಂದು ಲಾರಿ, ಒಂದು ಸರಕು ಸಾಗಣೆ ಮತ್ತು ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳದಲ್ಲಿ ಪಟಾಕಿಗಳು ಇನ್ನೂ ಸಿಡಿಯುತ್ತಿದ್ದು, ಸುತ್ತಲೂ ದಟ್ಟವಾದ ಬೆಂಕಿ ಮತ್ತು ಹೊಗೆ ಆವರಿಸಿದೆ. ಪಟಾಕಿ ಮಳಿಗೆ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ನಾಲೈದು ಆಂಬುಲೆನ್ಸ್‌ಗಳು ಬಂದಿವೆ.












Click it and Unblock the Notifications