ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ರಿಕೆಟ್ ಬೆಟ್ಟಿಂಗ್ ದಂಧೆ : ಸಿಬಿಐಗೆ ವಹಿಸಲು ಸಿದ್ಧ

|
Google Oneindia Kannada News

ಬೆಳಗಾವಿ ಜುಲೈ 10 : ರಾಜ್ಯದ ವಿವಿಧ ನಗರಗಳಲ್ಲಿ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ತನಿಖೆಯನ್ನು ಸಿಬಿಐಗೆ ವಹಿಸಲು ಸರ್ಕಾರ ಸಿದ್ಧವಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಟ್ಟಿಂಗ್‌ನಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ ಕೊನೆಯ ದಿನದ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರಶ್ನೆಗೆ ಉತ್ತರ ನೀಡಿದ ಗೃಹ ಸಚಿವರು, ಬೆಟ್ಟಿಂಗ್ ದಂಧೆಯನ್ನು ತಡೆಯಲು ಬೇಕಾದ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಂಡಿದೆ ಎಂದು ಹೇಳಿದರು. [ಕೊನೆಯ ದಿನದ ಕಲಾಪದ ಮುಖ್ಯಾಂಶಗಳು]

kj george

ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಬೇರೆ-ಬೇರೆ ರಾಜ್ಯ ಮತ್ತು ದೇಶಗಳ ಸಂಪರ್ಕವಿದೆ. ಆದ್ದರಿಂದ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸಿದ್ಧವಿದೆ ಎಂದರು ಹೇಳಿದರು. ರಾಜ್ಯದ ವಿವಿಧ ನಗರದಲ್ಲಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಬುಕ್ಕಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವರು ಸದನಕ್ಕೆ ಮಾಹಿತಿ ನೀಡಿದರು. [ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್ ದಂಧೆ ಬಯಲು]

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಪೊಲೀಸರು ಭಾಗಿಯಾಗಿದ್ದಾರೆ ಎಂಬ ಜಗದೀಶ್ ಶೆಟ್ಟರ್ ಆರೋಪಕ್ಕೆ ಉತ್ತರ ನೀಡಿದ ಗೃಹ ಸಚಿವರು, ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.

ಕ್ರಿಕೆಟ್ ಬೆಟ್ಟಿಂಗ್ ಬಗ್ಗೆ ವಿಷಯ ಪ್ರಸ್ತಾಪಿಸಿದ ಜಗದೀಶ್ ಶೆಟ್ಟರ್ ಅವರು, ಬೆಟ್ಟಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರಗೊಂಡಿವೆ. ರಹಸ್ಯ ಕಾರ್ಯಾಚರಣೆಯಲ್ಲಿ ಬೆಟ್ಟಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

ಬೆಟ್ಟಿಂಗದ ದಂಧೆ ಬೇರೆ-ಬೇರೆ ರಾಜ್ಯ ಮತ್ತು ದೇಶಗಳಿಗೆ ವ್ಯಾಪ್ತಿಸಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದಂಧೆ ನಡೆಯುತ್ತಿರುವುದು ಕೇಂದ್ರ ಸರ್ಕಾರಕ್ಕೂ ತಿಳಿದಿದೆ. ಕೇಂದ್ರ ಸರ್ಕಾರವೇ ಇದನ್ನು ಸಿಬಿಐ ತನಿಖೆಗೆ ವಹಿಸಬಹುದು ಎಂದು ಗೃಹ ಸಚಿವರು ತಿಳಿಸಿದರು.

English summary
Karnataka Home Minister K.J. George on Friday told the Legislative Assembly that, government is ready to order a Central Bureau of Investigation (CBI) probe on cricket betting reported in several cities of state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X