ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ; ಟೆಕ್ಕಿಯ ಸಹೋದ್ಯೋಗಿ ಆಸ್ಪತ್ರೆಗೆ ದಾಖಲು, ಸಚಿವರ ಟ್ವೀಟ್

|
Google Oneindia Kannada News

ಬೆಂಗಳೂರು, ಮಾರ್ಚ್ 04 : ಕೊರೊನಾ ಸೋಂಕು ತಗುಲಿರುವ ಟೆಕ್ಕಿಯ ಬೆಂಗಳೂರಿನ ನಿವಾಸ ಹಾಗೂ ಕಛೇರಿಯನ್ನು ಸೋಂಕು ಹರಡದಂತೆ ನಿನ್ನೆ ಸ್ವಚ್ಛಗೊಳಿಸಲಾಗಿದೆ. ಹಾಗೂ ಆತನ ಕಛೇರಿಯ 25 ಸಹದ್ಯೋಗಿಗಳನ್ನು ಸಂಪರ್ಕಿಸಿ, ಒಬ್ಬರನ್ನು ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ಸೇರಿಸಿ, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

Recommended Video

Karnataka health minister B.Sriramulu tweet about Cronavirus update | Oneindia Kannada

ಬುಧವಾರ ಬೆಳಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಕೊರೊನಾ ಸೋಂಕಿನ ಮಾಹಿತಿ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಮಂಗಳವಾರ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದ ಸಚಿವರು, ಜನರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಕರೆ ಕೊಟ್ಟಿದ್ದರು.

ಕೋಳಿ ಮಾಂಸ, ಮೊಟ್ಟೆ ಸುರಕ್ಷಿತ: ಕೊರೊನಾ ಭೀತಿ ಬೇಡ ಪ್ರಭು ಚವ್ಹಾಣ್ಕೋಳಿ ಮಾಂಸ, ಮೊಟ್ಟೆ ಸುರಕ್ಷಿತ: ಕೊರೊನಾ ಭೀತಿ ಬೇಡ ಪ್ರಭು ಚವ್ಹಾಣ್

"ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಯಾವುದೇ ಗಾಳಿಸುದ್ದಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಿ" ಎಂದು ಜನರಲ್ಲಿ ಬಿ. ಶ್ರೀರಾಮುಲು ಮನವಿ ಮಾಡಿದ್ದಾರೆ.

ಬೆಂಗಳೂರು: ಕೊರೊನಾ ಸೋಂಕಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ರಜೆ ಬೆಂಗಳೂರು: ಕೊರೊನಾ ಸೋಂಕಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ರಜೆ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ, "ಕರೋನಾ ವೈರಸ್ ಕುರಿತು ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದೆಂದು" ಟ್ವೀಟರ್ ಮೂಲಕ ಮನವಿ ಮಾಡಿದ್ದರು.

ಕೊರೊನಾ ಎಫೆಕ್ಟ್: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್!ಕೊರೊನಾ ಎಫೆಕ್ಟ್: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್!

ಪ್ರಯಾಣಿಕರ ತಪಾಸಣೆ

ಪ್ರಯಾಣಿಕರ ತಪಾಸಣೆ

"ಇದುವರೆಗೆ 40207 ಪ್ರಯಾಣಿಕರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. 251 ಜನರ ರಕ್ತ ಪರೀಕ್ಷೆ ನಡೆಸಲಾಗಿದ್ದು, 238 ನೆಗೆಟಿವ್ ಎಂದು ವರದಿ ಬಂದಿದೆ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಆಸ್ಪತ್ರೆಗೆ ದಾಖಲಿಸಲಾಗಿದೆ

"#COVID19 ಸೋಂಕಿತ ವ್ಯಕ್ತಿಯ ಬೆಂಗಳೂರಿನ ನಿವಾಸ ಹಾಗೂ ಕಛೇರಿಯನ್ನು ಸೋಂಕು ಹರಡದಂತೆ ನಿನ್ನೆ ಸ್ವಚ್ಛಗೊಳಿಸಲಾಗಿದೆ. ಹಾಗೂ ಆತನ ಕಛೇರಿಯ 25 ಸಹದ್ಯೋಗಿಗಳನ್ನು ಸಂಪರ್ಕಿಸಿ, ಒಬ್ಬರನ್ನು ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ಸೇರಿಸಿ, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ" ಎಂದು ಸಚಿವರು ಹೇಳಿದ್ದಾರೆ.

ಅಧಿಕೃತ ಮಾಹಿತಿ ಪರಿಗಣಿಸಿ

ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಯಾವುದೇ ಗಾಳಿಸುದ್ದಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಿ ಎಂದು ಕೋರುತ್ತೇನೆ. ನಮ್ಮ ಸರ್ಕಾರ ಹಾಗೂ ಇಲಾಖೆ ಸೋಂಕು ಹರಡದಂತೆ ಎಲ್ಲಾ ಕ್ರಮ ಕೈಗೊಂಡಿದೆ.

ಮುಖ್ಯಮಂತ್ರಿಗಳ ಟ್ವೀಟ್

ಮುಖ್ಯಮಂತ್ರಿಗಳ ಟ್ವೀಟ್

"ಅಗತ್ಯ ವೈದ್ಯಕೀಯ ನೆರವಿಗೆ ಸರ್ಕಾರ ಎಲ್ಲ ರೀತಿಯಲ್ಲೂ ಸಜ್ಜುಗೊಂಡಿದೆ. ನಾಗರಿಕರೂ ಸಹ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ವೈರಸ್ ಹರಡದಂತೆ ಎಚ್ಚರಿಕೆ ವಹಿಸಬೇಕೆಂದು" ಮುಖ್ಯಮಂತ್ರಿ ಯಡಿಯೂರಪ್ಪ ಸಹ ಟ್ವೀಟ್ ಮಾಡಿದ್ದರು.

English summary
Karnataka health minister B.Sriramulu tweet about Cronavirus update. Minister chaired officials meeting on March 3, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X