ಕರಾವಳಿ ನಿಯಂತ್ರಣ ವಲಯ ಕಾನೂನು ಸರಳೀಕರಣ, ಕೇಂದ್ರ ಸಚಿವರ ಭೇಟಿಗೆ ನಿಯೋಗ: ಡಿ.ಕೆ.ಶಿವಕುಮಾರ್
ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್‌ಜೆಡ್) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳೂರಿನಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026ರಲ್ಲಿ ಮಾತನಾಡಿ, ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಇತರೇ ಸಂಬಂಧಪಟ್ಟವರ ಜೊತೆ ಸಿಆರ್‌ಜಡ್ ವಿಚಾರ ಚರ್ಚೆ ನಡೆಸಲಾಗಿದೆ. ಇಲ್ಲಿನ ಸಂಸದರಿಗೂ ಇದರ ಬಗ್ಗೆ ತಿಳಿಸಲಾಗಿದೆ. ಉದ್ಯಮಿಗಳು ಸೇರಿದಂತೆ ಅನೇಕರ ಸಲಹೆ ಸೂಚನೆಗಳನ್ನು ಸಹ ಪಡೆಯಲಾಗಿದೆ ಎಂದರು.
ಮೂರು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ ನೋಡಲ್ ಅಧಿಕಾರಿ ಸೇರಿದಂತೆ, ಏಕಗವಾಕ್ಷಿ ಏಜೆನ್ಸಿ ಪ್ರಾರಂಭ ಮಾಡಲಾಗುವುದು. ಯಾವುದೇ ವಿಚಾರವಿದ್ದರೂ ನನಗೆ ಪತ್ರದ ಮುಖೇನ ಅಥವಾ ಈ ಮೇಲ್ ಮೂಲಕ ತಿಳಿಸಿ ಎಂದರು. ಕರಾವಳಿ ಸದಾ ಶಾಂತಿಯ ತೋಟವಾಗಿ ಉಳಿಯಬೇಕು ಎಂಬುದೇ ನಮ್ಮ ಸರ್ಕಾರದ ಚಿಂತನೆ. ಶಾಂತಿ ಸಾಮರಸ್ಯ ಉಳಿಯಬೇಕು ಎಂದರೆ ಯುವಕರಿಗೆ ಉದ್ಯೋಗ ದೊರೆಯಬೇಕು. ಇಲ್ಲಿ ಹುಟ್ಟಿ ಬೆಳೆದವರು ಹೊರಗೆ ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರು ಮತ್ತೆ ಬಂದು ತಾವು ಹುಟ್ಟಿದ ಊರಿಗೆ ಕೊಡುಗೆ ನೀಡಬೇಕು. ಯಾರೇ ಇಲ್ಲಿಗೆ ಬಂದರು ಅವರು ಶಾಂತಿಯಿಂದ ವ್ಯವಹಾರ ನಡೆಸುವಂತಾಗಬೇಕು ಎಂದು ಹೇಳಿದರು.

ಇಲ್ಲಿನ ವಿದ್ಯಾಸಂಸ್ಥೆಗಳಲ್ಲಿ ಶಿಸ್ತು, ಸಂಸ್ಕೃತಿ ಕಲಿಕೆ
ಈ ಹಿಂದೆ ಉಡುಪಿಯ ಒಂದು ಶಿಕ್ಷಣ ಸಂಸ್ಥೆಯಲ್ಲಿ ಗಲಾಟೆ ನಡೆದಾಗ ಅನೇಕ ಶಿಕ್ಷಣ ಸಂಸ್ಥೆಯವರು ಬಂದು ನಮ್ಮಲ್ಲಿ ದಾಖಲಾತಿ ಕಡಿಮೆಯಾಗಿದೆ ಎಂದು ಅವಲತ್ತುಕೊಂಡಿದ್ದರು. ನನಗೆ ಆಶ್ಚರ್ಯಗೊಳಿಸಿದ ಇನ್ನೊಂದು ಸಂಗತಿ ಎಂದರೆ ಸುಮಾರು 87 ಸಾವಿರ ಪಿಯು ವಿದ್ಯಾರ್ಥಿಗಳು ಹೊರಗಡೆಯಿಂದ ಬಂದು ಈ ಎರಡು ಜಿಲ್ಲೆಗಳಿಂದ ತಯಾರಾಗುತ್ತಿದ್ದಾರೆ. ಇಲ್ಲಿನ ವಿದ್ಯಾಸಂಸ್ಥೆಗಳು ಶಿಸ್ತು, ಸಂಸ್ಕೃತಿ ಕಲಿಸುತ್ತಿವೆ ಎಂದರು.
ತೆರಿಗೆ ಸೇರಿದಂತೆ ಯಾವ ವಿಚಾರವಾಗಿ ರಾಜ್ಯ ಸರ್ಕಾರ ಸಹಾಯ ಮಾಡಬಹುದು ಎಂದು ಉದ್ಯಮಿಗಳು ಸಲಹೆ ನೀಡಬಹುದು. ಪ್ರವಾಸೋದ್ಯಮ, ಆರೋಗ್ಯ ಪ್ರವಾಸೋದ್ಯಮ ಸೇರಿದಂತೆ ಇನ್ಯಾವುದೇ ವಿಚಾರ ಇದ್ದರೂ ನಮ್ಮ ಸರ್ಕಾರ ಸಹಕಾರ ನೀಡಲಿದೆ. ಇಡೀ ದೇಶದಲ್ಲಿಯೇ ಅತ್ಯಂತ ಹೆಚ್ಚು ಬ್ಯಾಂಕ್‌ಗಳನ್ನು ನೀಡಿದ ನೆಲ ಕರಾವಳಿ. ಅವಿಭಜಿತ ಜಿಲ್ಲೆಯಲ್ಲಿ 8 ಮೆಡಿಕಲ್ ಕಾಲೇಜು ಹೊಂದಿರುವುದೇ ಹೆಗ್ಗಳಿಕೆ. ಆರೋಗ್ಯ, ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಪ್ರದೇಶ ಕರಾವಳಿ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವುದಕ್ಕೆ ಮೊದಲು ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಉಲ್ಲೇಖಿಸಿದರು.
ವಿಮಾನ ನಿಲ್ದಾಣ, ಬಂದರು ಸೇರಿದಂತೆ ಅನೇಕ ಅನುಕೂಲ ಇದ್ದರೂ ಒಂದಷ್ಟು ವಿಚಾರದಲ್ಲಿ ಕೊರತೆ ಕಂಡು ಬರುತ್ತಿದೆ. ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಮಾಡಿದ ಐಟಿ ನೀತಿ ಬೆಂಗಳೂರಲ್ಲಿ ಯಶಸ್ವಿಯಾಯಿತು. ಆದರೆ ಮಂಗಳೂರಿನಲ್ಲಿ ಆಗಲಿಲ್ಲ. ಇನ್ಫೋಸಿಸ್ ಸೇರಿದಂತೆ ಅನೇಕ ಕಂಪನಿಗಳು ಬಂದವು. ಆದರೆ ಕಾಲಕಳೆದಂತೆ ಕ್ಷೀಣಿಸುತ್ತಾ ಹೋಯಿತು. ಇಲ್ಲಿನ ಯುವಕರು ಬೆಂಗಳೂರು, ಮುಂಬೈ, ದುಬೈನಲ್ಲಿ ಕೆಲಸ ಮಾಡುವಂತಾಗಿದೆ ಎಂದರು.
ಮುಂಬೈ, ದುಬೈನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಹೆಚ್ಚಿನವರು ಕರಾವಳಿಯ ಜನರೇ. ನಿಮಗೆ ಉದ್ದಿಮೆ ನಡೆಸುವ ಚಾಕಚಕ್ಯತೆಯಿದೆ. ಅದು ಇಲ್ಲಿ ಬಳಕೆಯಾಗಬೇಕು. ಚುನಾವಣೆ ಸಮಯದಲ್ಲಿ ಮಂಗಳೂರನ್ನು ನಾನು ಡೆಡ್ ಸಿಟಿ ಎಂದಿದ್ದೆ. ಆಗ ಬಿಜೆಪಿ ಶಾಸಕರು ಏಕೆ ಎಂದು ಪ್ರಶ್ನೆ ಮಾಡಿದ್ದರು. ನಾನು ಅದಕ್ಕೆ ಉತ್ತರ ನೀಡಿದ್ದೆ. ಆಗ ಅವರು ಒಪ್ಪಿಕೊಂಡರು. ಆಗ ನಮ್ಮ ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ಹೇಳಿದಾಗ ನಾವು ಸಹ ಬೆಂಬಲ ನೀಡುವುದಾಗಿ ಹೇಳಿದ್ದರು ಎಂದರು. ಈ ಭಾಗದಲ್ಲಿ ನಾವು ಇಬ್ಬರು ಶಾಸಕರನ್ನು ಹೊಂದಿರಬಹುದು. ಆದರೆ ನಮಗೆ ಸಮಗ್ರ ಕರ್ನಾಟಕದ ಅಭಿವೃದ್ಧಿ ಮುಖ್ಯ. ಪಕ್ಷಾತೀತವಾಗಿ ಸಂಸದರು ಭಾಗವಹಿಸಿ ಬೆಂಬಲ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications