Government Employees: ತುಟ್ಟಿಭತ್ಯೆ ಹೆಚ್ಚಳ: ಸರ್ಕಾರಿ ನೌಕರರ ತುರ್ತು ಗಮನಕ್ಕೆ!
ಬೆಂಗಳೂರು,ಅಕ್ಟೋಬರ್ 28: ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನ (ಡಿಎ) 3 ಶೇಕಡಾ ಹೆಚ್ಚಳದ ಬಗ್ಗೆ ಘೋಷಣೆದ ಬಳಿಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಹ ತುಟ್ಟಿಭತ್ಯೆ ಹೆಚ್ಚಿಸಿದ್ದು, ಸರ್ಕಾರಿ ನೌಕರರು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ.
ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಉಡುಗೊರೆ ಎಂಬಂತೆ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡಿತ್ತು. ಕೇಂದ್ರ ಸರ್ಕಾರ ಡಿಎ ಹೆಚ್ಚಳದ ಬಳಿಕ ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಡಿಎ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಆದೇಶವನ್ನು ಹೊರಡಿಸಿತ್ತು. ಆದರೆ ಇದೀಗ ಸರ್ಕಾರಿ ನೌಕರರ ತುರ್ತು ಗಮನಕ್ಕೆ ಮಾಹಿತಿಯೊಂದಿದೆ. ಈ ತಿಂಗಳ ವೇತನದಲ್ಲಿ ಡಿಎ ಹೆಚ್ಚಳ ಸೇರಿರಲಿದೆ ಎಂದು ಅಂದಾಜಿಸಿದ್ದ ನೌಕರರಿಗೆ ನಿರಾಸೆಯಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಅವರು ಮಾಹಿತಿ ನೀಡಿದ್ದಾರೆ.

ಇನ್ನೂ ತುಟ್ಟಿಭತ್ಯೆ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಈ ಕುರಿತು ಮಾಹಿತಿ ನೀಡಿದ್ದು, ಸರ್ಕಾರ ಬಿಡುಗಡೆ ಮಾಡಿರುವ ತುಟ್ಟಿಭತ್ಯೆ ದರವು ಈ ತಿಂಗಳ ವೇತನದಲ್ಲಿ ಸೇರಿರುವುದಿಲ್ಲ. ಮುಂದಿನ ತಿಂಗಳ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ. ಈ ತಿಂಗಳು ಸೇರಿದಂತೆ ಹಿಂದಿನ ತುಟ್ಟಿಭತ್ಯೆ ವ್ಯತ್ಯಾಸದ ಮೊತ್ತವನ್ನು 1ನೇ ತಾರೀಕಿನ ನಂತರ ಡ್ರಾ ಮಾಡಬಹುದಾಗಿದೆ. K2 ಸಮಸ್ಯೆ ಬಗೆಹರಿದಿದೆ ಎಂದು ಸರ್ಕಾರಿ ನೌಕರರಿಗೆ ಮಾಹಿತಿ ನೀಡಲಾಗಿದೆ.
ಡಿಎ ಹೆಚ್ಚಳ ಆದೇಶ
ಸರ್ಕಾರಿ ನೌಕರರ ಡಿಎ ಹೆಚ್ಚಳ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ.ಕೆ. ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಆದೇಶವನ್ನು ಹೊರಡಿಸಿದ್ದರು. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಹೇಳಿದ್ದರು.
ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿ ಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು.












Click it and Unblock the Notifications