Government Employees: ಸಿಎಂ ಸಿದ್ದರಾಮಯ್ಯಗೆ ವಿಶೇಷ ಮನವಿ ಮಾಡಿದ ಸಿ ಎಸ್ ಷಡಕ್ಷರಿ: ಏನದು?
ಬೆಂಗಳೂರು, ಜನವರಿ 08: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ ಮತ್ತು ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ.
ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ರಾಜ್ಯದ ಅನುದಾನಿತ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗಳೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮನವಿ ಮಾಡಿದ್ದಾರೆ.

ರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ "ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ"(KASS)ಯನ್ನು ದಿನಾಂಕ: 01-10-2025 ರಿಂದ ಪೂರ್ಣಪ್ರಮಾಣದಲ್ಲಿ ಸರ್ಕಾರ ಜಾರಿಗೊಳಿಸಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತದೆ.
ರಾಜ್ಯಾಧ್ಯಂತ ಇರುವಂತ ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರು, ಲಿಪಿಕ ವೃಂದದ ಸಿಬ್ಬಂದಿಗಳು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ವಿಸ್ತರಿಸುವಂತೆ ತಮ್ಮಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರು ಮನವಿ ಮಾಡಿಕೊಂಡಿರೋದಾಗಿ ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ಕರ್ನಾಟಕ ಆರೋಗ್ಯ ಸಂಜೀವನಿ ಯೋಜನೆಯನ್ನು ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಲಿಪಿಕ ವೃಂದದ ಸಿಬ್ಬಂದಿಗಳು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೂ ವಿಸ್ತರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮನವಿ ಮಾಡಿದ್ದಾರೆ.












Click it and Unblock the Notifications