CT Ravi: ಸಿಟಿ ರವಿ ಬಂಧನ, ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತನಾಡಿದ್ದ ಮಾಜಿ ಸಚಿವ ಕಂಬಿ ಹಿಂದೆ!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಾಯಿಗೆ ಬಂದ ರೀತಿ ಮಾತನಾಡಿರುವ ಆರೋಪ ಹೊತ್ತಿರುವ ಬಿಜೆಪಿ ಪರಿಷತ್ ಸದಸ್ಯ & ಮಾಜಿ ಸಚಿವ ಸಿಟಿ ರವಿ ಇದೀಗ ಅರೆಸ್ಟ್ ಆಗಿದ್ದಾರೆ. ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವೆ ಇಂದು ದೊಡ್ಡ ಮಾತಿನ ಯುದ್ಧ ನಡೆದಿತ್ತು. ಆದರೆ ಈ ವೇಳೆ ಸಿಟಿ ರವಿ ನಾಲಗೆ ಹರಿಬಿಟ್ಟಿರುವ ಗಂಭೀರ ಆರೋಪ ಇದೀಗ ಕೇಳಿ ಬಂದಿದ್ದು, ಈ ವಿಚಾರ ಇದೀಗ ರಾಜಕೀಯ ಬಿರುಗಾಳಿ ಎಬ್ಬಿಸಿದೆ!

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬೆಳಗಾವಿ ಚಳಿಗಾಲದ ಅಧಿವೇಶನ ಕರೆಯಲಾಗಿದೆ. ಆದರೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಆಗುತ್ತಿರುವುದೇ ಬೇರೆ, ಈಗ ಬಿಜೆಪಿ & ಕಾಂಗ್ರೆಸ್ ನಾಯಕರ ನಡುವೆ ಬೆಳಗಾವಿ ಸುವರ್ಣಸೌಧದ ಒಳಗೆ ದೊಡ್ಡ ಕುಸ್ತಿಯೇ ನಡೆದು ಹೋಗಿದೆ. ಇದೇ ವೇಳೆ ಸಿಟಿ ರವಿ, ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದೆ.

CT Ravi Arrested Former Minister Is In Trouble After He Commenting On Lakshmi Hebbalkar

ಅಶ್ಲೀಲ ಪದ ಬಳಸಿದ್ರಾ ಸಿಟಿ ರವಿ?

ಮೊದಲಿಗೆ ಪರಿಷತ್ ಚರ್ಚೆಯಲ್ಲಿ ಬಿಜೆಪಿ & ಕಾಂಗ್ರೆಸ್ ನಾಯಕರ ಗಲಾಟೆ ಶುರುವಾಗಿತ್ತು. ಈ ಸಮಯದಲ್ಲಿ ಬಿಜೆಪಿ ಪಕ್ಷದ ಪರಿಷತ್ ಸದಸ್ಯ ಸಿಟಿ ರವಿ ಅವರು, ಬಾಯಿಗೆ ಬಂದಂತೆ ಮಾತನಾಡುತ್ತಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಹೀಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ ಹೊತ್ತಿರುವ ಸಿಟಿ ರವಿ ಅವರನ್ನ ಇದೀಗ ಪೊಲೀಸರು ಅರೆಸ್ಟ್ ಮಾಡಿಕೊಂಡು ಕರೆದುಕೊಂಡು ಹೋಗಿದ್ದಾರೆ.

ಸಿಟಿ ರವಿ ಬಾಯಿಗೆ ಬಂದಂತೆ ಮಾತನಾಡಿದ್ರಾ?

ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರವಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ದೊಡ್ಡ ಚರ್ಚೆ ಆರಂಭವಾಗಿತ್ತು. ಆದ್ರೆ ಈ ಸಮಯದಲ್ಲಿ ಪರಿಷತ್ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕರ ಜೊತೆಗೆ ಬಿಜೆಪಿ ನಾಯಕರ ಕಿರಿಕ್ ಶುರುವಾಗಿದೆ. ಇದೇ ಸಂದರ್ಭದಲ್ಲಿ ಮಾಜಿ ಸಚಿವರೂ ಅಗಿರುವ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಾಯಿಗೆ ಬಂದಂತೆ ಮಾತನಾಡಿ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಕೂಡಲೇ ದೊಡ್ಡ ಗಲಾಟೆ ಶುರುವಾಗಿ, ಈ ಕುರಿತು ಸಿಟಿ ರವಿ ವಿರುದ್ಧ ದೂರು ನೀಡಲಾಗಿತ್ತು.

ಬಿಎನ್‌ಎಸ್ ಕಾಯ್ದೆ ಅಡಿ ಕೇಸ್!

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ ಅಡಿಯಲ್ಲೇ ಪ್ರಕರಣ ದಾಖಲಾಗಿದ್ದು, ಇದೀಗ ಎಫ್​ಐಆರ್ ದಾಖಲಿಸಿ ಪೊಲೀಸರು ಸಿಟಿ ರವಿ ಬಂಧಿಸಿದ್ದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಈ ಮೂಲಕ ಬೆಳಗಾವಿ ಜಿಲ್ಲೆ ಇದೀಗ ಕಾದ ಕಬ್ಬಿಣದಂತೆ ಆಗಿದೆ. ಮತ್ತೊಂದು ಕಡೆ ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಒಟ್ಟಾಗಿ ಹೋರಾಡಲು ಮುಂದಾಗಿದ್ದಾರೆ. ಸಿಎಂಗೆ ಕೂಡ ಈ ಕುರಿತು ದೂರು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+