ಸಿ. ಟಿ. ರವಿ ಆಪ್ತ ತಮ್ಮಯ್ಯ ಕಾಂಗ್ರೆಸ್‌ ಸೇರ್ಪಡೆ

ಬಿಜೆಪಿ ತೊರೆದಿದ್ದ ಚಿಕ್ಕಮಗಳೂರು ಬಿಜೆಪಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಆಪ್ತ ಹೆಚ್. ಡಿ. ತಮ್ಮಯ್ಯ ಕಾಂಗ್ರೆಸ್ ಸೇರಿದ್ದಾರೆ.

ಬೆಂಗಳೂರು, ಫೆಬ್ರವರಿ 19; ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಆಪ್ತರೊಬ್ಬರು ಕಾಂಗ್ರೆಸ್ ಸೇರಿದರು. ಗುರುವಾರ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾಗಿದ್ದ ಹೆಚ್. ಡಿ. ತಮ್ಮಯ್ಯ ಶಾಸಕ ಸಿ. ಟಿ. ರವಿ ಆಪ್ತರಾಗಿದ್ದರು. ಸ್ಥಳೀಯ ರಾಜಕೀಯದಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಭಾನುವಾರ ಅವರು ಕಾಂಗ್ರೆಸ್ ಸೇರಿದರು.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. 'ಚಿಕ್ಕಮಗಳೂರಿನ ಬಿಜೆಪಿ ನಾಯಕರಾದ ಶ್ರೀ ಹೆಚ್. ಡಿ. ತಮ್ಮಯ್ಯ ಅವರು ಕಾಂಗ್ರೆಸ್ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆಯಿಟ್ಟು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು. ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಆಹ್ವಾನಿಸಿ ರಾಜಕೀಯ ಭವಿಷ್ಯ ಉತ್ತಮವಾಗಿರಲಿ ಎಂದು ಶುಭ ಹಾರೈಸಿದೆ' ಎಂದು ಹೇಳಿದ್ದಾರೆ.

CT Ravi Close Aide HD Tammaiah Quits BJP Joined Congress

ಹೆಚ್. ಡಿ. ತಮ್ಮಯ್ಯ ಚಿಕ್ಕಮಗಳೂರು ನಗರಸಭೆ ಮಾಜಿ ಅಧ್ಯಕ್ಷರು. 17 ವರ್ಷಗಳಿಂದ ತಮ್ಮಯ್ಯ ಬಿಜೆಪಿಯಲ್ಲಿ ವಿವಿಧ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಕೆಲವು ದಿನಗಳ ಹಿಂದೆ ಹೆಚ್. ಡಿ. ತಮ್ಮಯ್ಯ ಬೆಂಬಲಿಗರ ಜೊತೆ ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿದ್ದರು. ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್. ಸಿ. ಕಲ್ಮುರುಡಪ್ಪಗೆ ತಮಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದರು.

ಹೆಚ್. ಸಿ. ಕಲ್ಮುರುಡಪ್ಪ ಟಿಕೆಟ್ ನೀಡುವುದು, ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಯಾವುದೇ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ಸಹ ಒಗ್ಗಟ್ಟಾಗಿ ಗೆಲುವಿಗಾಗಿ ಕೆಲಸ ಮಾಡೋಣ ಎಂದು ಹೇಳಿದ್ದರು.

CT Ravi Close Aide HD Tammaiah Quits BJP Joined Congress

ಸಿ. ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಾಷ್ಟ್ರ ರಾಜಕೀಯದಲ್ಲಿ ಬ್ಯುಸಿಯಾಗಿದ್ದರೂ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಅವರಿಗೆ ಚಿಕ್ಕಮಗಳೂರು ಟಿಕೆಟ್ ಸಿಗುವ ನಿರೀಕ್ಷೆ ಇದೆ.

ಆದ್ದರಿಂದ ಹೆಚ್. ಡಿ. ತಮ್ಮಯ್ಯ ಗುರುವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಹೆಚ್. ಸಿ. ಕಲ್ಮುರುಡಪ್ಪಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದರು. ಆಗಲೇ ಅವರು ಕಾಂಗ್ರೆಸ್‌ ಸೇರಬಹುದು ಎಂದು ಅಂದಾಜಿಸಲಾಗಿತ್ತು.

ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಹೆಚ್. ಡಿ. ತಮ್ಮಯ್ಯ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರು ಸಿ. ಟಿ. ರವಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆಯೇ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+