CT Ravi: ನಕ್ಸಲರಿಗಿಂತ ಸಿಟಿ ರವಿಯೇ ಡೇಂಜರ್: ಎಸ್ ಎಲ್ ಭೋಜೇಗೌಡ ವಾಗ್ದಾಳಿ
ಚಿಕ್ಕಮಗಳೂರು,ಮೇ 31: ನಕ್ಸಲರಿಗಿಂತ ಸಿ.ಟಿ.ರವಿಯೇ ಡೇಂಜರ್ ಎಂದು ವಿಧಾನಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಮಾಜಿ ಶಾಸಕ ಸಿ ಟಿ ರವಿ ವಿರುದ್ದ ಕಿಡಿಕಾರಿದ್ದಾರೆ.
ಅರ್ಬನ್ ನಕ್ಸಲ್ ಹೇಳಿಕೆ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತಾಡಿದ ಅವರು ಸಿ.ಟಿ.ರವಿಯೇ ನಕ್ಸಲರಿಗಿಂತ ಡೇಂಜರ್. ಸಂವಿಧಾನ ಬದಲಾವಣೆ, ರಾಷ್ಟ್ರಧ್ವಜ ಇಳಿಸಿ ಭಗವಧ್ವಜ, ಹಿಂದೂ ರಾಷ್ಟ್ರದ ಹೇಳಿಕೆಗಳು ನಕ್ಸಲರಿಗಿಂತ ಡೇಂಜರ್ ಪದಗಳಾಗಿವೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಚಿಕ್ಕಮಗಳೂರು ಕ್ಷೇತ್ರ ಕ್ಕೆ ಮಾತ್ರ ಕಾಂಗ್ರೆಸ್ ಜೊತೆಗೆ ಹೊಂದಣಿಕೆ ಇತ್ತು, ನಾನು ಜೆಡಿಎಸ್ ಪಕ್ಷದಿಂದಲೇ ಶಿಕ್ಷಣ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ, ನಾನು ಕಾಂಗ್ರೆಸ್ ಸೇರ್ಪಡೆ ಬರೀ ವದಂತಿ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಇನ್ನೂ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿದ್ದು, ಸರ್ಕಾರ ಕೂಡಲೇ ಪಠ್ಯಪುಸ್ತಕಗಳನ್ನು ಕೊಡಬೇಕು, ಸರ್ಕಾರಗಳ ನಡುವೆ ಯಾವುದೇ ಭಿನ್ನಾಭಿಪ್ರಾಯ ಇರಬಹುದು. ಆದರೆ, ಪಠ್ಯ ಪುಸ್ತಕ ವಿಚಾರದಲ್ಲಿ ರಾಜಕೀಯ ಹಸ್ತಾಕ್ಷೇಪ ಮಾಡಬಾರದು, ಮೂಗು ತೂರಿಸುವ ಕೆಲಸ ಮಾಡಬಾರದು ಎಂದು ಹೇಳಿದರು.
ಶ್ರೀ ನಾರಾಯಣ ಗುರುಗಳು ಆದರ್ಶ ವ್ಯಕ್ತಿ. ಅವರನ್ನು ಕುರಿತು ಪಠ್ಯಪುಸ್ತಕದಲ್ಲಿ ಅಳವಡಿಸಲಾಗಿತ್ತು, ಹಿಂದಿನ ಸರ್ಕಾರ ಪಠ್ಯಪುಸ್ತಕದಿಂದ ಪಾಠವನ್ನು ಕೈ ಬಿಟ್ಟಿತು. ಗಣ ರಾಜ್ಯೋತ್ಸವ ಸಂದರ್ಭದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರವನ್ನು ಸಹ ಕೈಬಿಡಲಾಯಿತು. ಈ ಬಗ್ಗೆ ಮಾತನಾಡಲು ನಿಮ್ಮ ಧ್ವನಿ ಎಲ್ಲಿಗೆ ಹೋಗಿತ್ತು ಎಂದು ಪ್ರಶ್ನಿಸಿದರು.
ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ
ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯÀ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ಇಲ್ಲಿ ಅಭದ್ರತೆ ಉಂಟು ಮಾಡುವುದು ಮತ್ತು ದೇಶಕ್ಕೆ ತೊಂದರೆ ಕೊಡಬೇಕೆಂಬ ಮನಸ್ಥಿತಿ ರಾಹುಲ್ ಗಾಂಧಿ ಅವರದು ಎಂದು ನನಗನಿಸುತ್ತದೆ. ಆದ್ದರಿಂದ ನಾನು ಪ್ರಧಾನಿ ಮೋದಿಜಿ ಮತ್ತು ಅಮಿತ್ ಶಾ ಅವರಿಗೆ ಪತ್ರ ಬರೆಯಲಿದ್ದೇನೆ ಎಂದು ತಿಳಿಸಿದರು.
ರಾಹುಲ್ ಗಾಂಧಿಯವರು ದ್ವಿ ಪೌರತ್ವ (ಡ್ಯುಯಲ್ ಸಿಟಿಜನ್‍ಶಿಪ್) ಹೊಂದಿದ್ದಾರೆಂದು ಮಾಹಿತಿ ಇದೆ. ಸುಬ್ರಹ್ಮಣ್ಯನ್ ಸ್ವಾಮಿ ಅವರು ಇದನ್ನು ತಿಳಿಸಿದ್ದಾರೆ. ಇದರ ಪರಿಶೀಲನೆ ಮಾಡಿ ರಾಹುಲ್ ಗಾಂಧಿಯವರ ಪೌರತ್ವವನ್ನು ಮುಟ್ಟುಗೋಲು ಹಾಕಬೇಕು ಎಂದು ಆಗ್ರಹಿಸಿದರು. ಅಲ್ಲದೆ ಅವರನ್ನು ಈ ದೇಶದಿಂದ ಗಡೀಪಾರು ಮಾಡಿದರೆ ಉತ್ತಮ ಎಂದು ತಿಳಿಸಿದರು. ಇಲ್ಲವಾದರೆ ಅವರು ದೇಶದಲ್ಲಿ ಅಭದ್ರತೆ ಉಂಟು ಮಾಡುವ ಎಲ್ಲ ಲಕ್ಷಣಗಳಿವೆ ಎಂದು ಅನುಮಾನ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಬಂದಾಗ ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಇದೇ ರಾಹುಲ್ ಗಾಂಧಿಯವರ ಮುತ್ತಜ್ಜನಿಗೆ ಆಗಿನ ಬ್ರಿಟಿಷರು ಸೆಂಗೋಲ್ (ರಾಜದಂಡ) ಕೊಟ್ಟಿದ್ದರು. ಆ ವಿಚಾರ ಚರಿತ್ರೆಯಲ್ಲಿ ಮುಚ್ಚಿ ಹೋಗಿತ್ತು. ಅದನ್ನು ಹೊರಕ್ಕೆ ತರುವ ಕೆಲಸವನ್ನು ಮೋದಿಜಿ ಮತ್ತು ಅಮಿತ್ ಶಾ ಅವರು ಮಾಡಿದ್ದು, ಅದನ್ನೂ ಹೊರಗಡೆ ಪ್ರಸ್ತಾಪ ಮಾಡಿದ್ದಾರೆ. ಇವೆಲ್ಲವನ್ನೂ ಗಮನಿಸಿದರೆ ರಾಹುಲ್ ಗಾಂಧಿಯವರ ತಲೆಯಲ್ಲಿ ಭಾರತೀಯ ವಿರೋಧಿ ಧೋರಣೆ ಇದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಹುಲ್ ಗಾಂಧಿಯವರು ಅಮೆರಿಕಕ್ಕೆ ಹೋಗಿದ್ದಾರೆ. ಅಲ್ಲಿ ಹೋಗಿ, ದೇಶದಲ್ಲಿ ಅಭದ್ರತೆ ಸೃಷ್ಟಿಸುವ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಅವರು ಯಾವತ್ತೂ ಕೂಡ ಭಾರತ ಪರವಾದ ಮಾನಸಿಕ ಸ್ಥಿತಿ ಹೊಂದಿರಲಿಲ್ಲ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ. 18 ಇಸ್ಲಾಂ ಸಂಘಟನೆಗಳ ಮುಖ್ಯಸ್ಥರನ್ನು ಅವರು ಭೇಟಿ ಮಾಡುವ ಮಾಹಿತಿ ಬರುತ್ತಿದೆ. ಅವರನ್ನು ಐದಾರು ತಿಂಗಳೊಳಗೆ ಭಾರತಕ್ಕೆ ಕರೆಸಿಕೊಳ್ಳಬೇಕು. ಅವರ ಮೂಲಕ ಭಾರತದಲ್ಲಿ ಅಭದ್ರತೆ ಸೃಷ್ಟಿಸಲು ಯೋಜನೆಯನ್ನು ರಾಹುಲ್ ಗಾಂಧಿಯವರು ಹೊಂದಿರುವುದಾಗಿ ವಿಷಯ ಹೊರಬರುತ್ತಿದೆ ಎಂದು ಆಕ್ಷೇಪಿಸಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications