ಕಾಂಗ್ರೆಸ್ ಸರ್ಕಾರ "ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ" ಆಟವಾಡುತ್ತಿದೆ
ಬೆಂಗಳೂರು,ನವೆಂಬರ್ 06: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ರೋಮ್ ಹತ್ತಿ ಉರಿಯುತಿದ್ದರೆ ನಿರೋ ಪಿಟೀಲು ಬಾರಿಸುತ್ತಿದ್ದ" ಎಂಬಂತೆ ರಾಜ್ಯ ಬರದ ಬೇಗುದಿಯಲ್ಲಿ ನರಳುತ್ತಿದ್ದರೆ ರಾಜ್ಯದ ಕಾಂಗ್ರೆಸ್ ಸರ್ಕಾರ "ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ" ಆಟ ಆಡಿ ಜನರ ನೋವನ್ನು ಕಡೆಗಣಿಸುತ್ತಿದೆ ಎಂದು ಮಾಜಿ ಸಚಿವ ಸಿ ಟಿ ರವಿ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಸಿ ಟಿ ರವಿ ಅವರು, ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಮರೆತರು ಜನರ ಬವಣೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕರ್ನಾಟಕ ಬಿಜೆಪಿ ಬರ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ. ಈ ನಿಟ್ಟಿನಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಅಧ್ಯಯನ ನಡೆಸುವ ನಿಟ್ಟಿನಲ್ಲಿ ಇಂದು ರಾಜ್ಯ ಬಿಜೆಪಿ ತಂಡದ ನೇತೃತ್ವವಹಿಸಿ ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕ್ಷೇತ್ರ ಕಾರ್ಯ ನಡೆಸಿ, ರೈತರನ್ನು ಮಾತನಾಡಿಸಿ ಅವರ ಕಷ್ಟಗಳನ್ನು ಆಲಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಕೋಲಾರ ಸಂಸದ ಶ್ರೀ ಎಸ್. ಮುನಿಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪ, ಕೋಲಾರ ಜಿಲ್ಲಾಧ್ಯಕ್ಷರಾದ ಡಾ.ವೇಣುಗೋಪಾಲ್, ಉಭಯ ಜಿಲ್ಲೆಗಳ ಪಧಾದಿಕಾರಿಗಳು, ಮಾಜಿ ಶಾಸಕರುಗಳು, ತಾಲ್ಲೂಕು ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ: ಸಿದ್ದರಾಮಯ್ಯ
ಮುಖ್ಯಮಂತ್ರಿಗಳ ಕುರ್ಚಿ ಇವತ್ತು ನಾಳೆ ಬೀಳಲಿದೆ ಎಂದು ಬಿಜೆಪಿ, ಜೆಡಿಎಸ್ ಹೇಳಿತ್ತಿದ್ದು, ಹತಾಶರಾಗಿದ್ದಾರೆ. ಅವರು ಸರ್ಕಾರ ರಚಿಸುವುದಾಗಿ ಭಾವಿಸಿದ್ದರು. ಅದಾಗದೆ ಇದ್ದುದರಿಂದ ಹತಾಶರಾಗಿದ್ದಾರೆ ಎಂದರು.
ಸಿಎಂ ಕುರ್ಚಿ ಬಗ್ಗೆ ಬಿಜೆಪಿ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದರು.
ನಾಳೆಯೇ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾದರೆ ತಮ್ಮ 17 ಶಾಸಕರ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ವ್ಯಂಗ್ಯ ವಾಗಿ ಹೇಳಿರುವುದು. ಕುಮಾರಸ್ವಾಮಿ ಅವರಿಗೆ ವ್ಯಂಗ್ಯ ವಾಗಿ ಹೇಳುವುದೂ ಬರುತ್ತದೆ ಎನ್ನುವುದೇ ನಮಗೆ ಋಷಿ ಎಂದರು. ಮೊದಲು ಎನ್.ಡಿ.ಎ ಬಿಟ್ಟು ಹೊರಬರಲಿ ಎಂದಿದ್ದರು ಎಂದು ತಿಳಿಸಿದರು.
ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ. ಅವರೆಲ್ಲಾ ಸವಕಲು ನಾಣ್ಯಗಳು. ಬಿಜೆಪಿಯಲ್ಲಿಯೇ ಅವರು ಸವಕಲು ನಾಣ್ಯ ಎಂದು ಟಿಕೆಟ್ ನೀಡಿಲ್ಲ. ಅವರ ಮಾತ್ಯಗಳಿಗೆ ಏನು ಬೆಲೆ ಇದೆ. ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ ಎಂದರು. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.












Click it and Unblock the Notifications