ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಳು ಭಾಷೆಗೆ ರಾಜ್ಯಭಾಷೆ ಸ್ಥಾನಮಾನಕ್ಕಾಗಿ ಸಿಟಿರವಿ ಪತ್ರ

|
Google Oneindia Kannada News

ಬೆಂಗಳೂರು, ಫೆಬ್ರವರಿ 17: ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕೆಂದು ಅಲ್ಲಿನ ಜನ, ಜನಪ್ರತಿನಿಧಿಗಳ ಮನವಿ. ಬೇಡಿಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ನಾನು ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ. ತುಳುವನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ಅಗತ್ಯ ತೀರ್ಮಾನ ತೆಗೆದುಕೊಳ್ಳಲು ಇದು ಸಕಾಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಸಚಿವ ಸಿ. ಟಿ. ರವಿ ಟ್ವೀಟ್‌ನಲ್ಲಿ ಬೀಫ್; ಬಿಸಿ-ಬಿಸಿ ಚರ್ಚೆ! ಸಚಿವ ಸಿ. ಟಿ. ರವಿ ಟ್ವೀಟ್‌ನಲ್ಲಿ ಬೀಫ್; ಬಿಸಿ-ಬಿಸಿ ಚರ್ಚೆ!

ಈ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಈ ಭರವಸೆಗಳು ಕೇವಲ ಭರವಸೆಗಳಾಗಿ ಉಳಿಯದೆ ಕಾರ್ಯರೂಪಕ್ಕೆ ಬರಲಿ. 8th scheduleನ್ನು ಪಕ್ಕಕ್ಕಿಡಿ ಮೊದಲು ಕರ್ನಾಟಕದಲ್ಲಿ ರಾಜ್ಯಭಾಷೆಯೆಂಬ ಸ್ಥಾನಮಾನ ಕೊಡಿಸಿ ಇತರರಿಗೆ ಮಾದರಿಯಾಗಿ. ಕರ್ನಾಟಕದ ಬೆಳವಣಿಗೆಗೆ ತುಳುವರ ಕೊಡುಗೆ ಅಪಾರ,ಈಗ ತುಳುವರ ಭಾಷೆಯನ್ನು ಗುರುತಿಸಿ ಸನ್ಮಾನಿಸುವ ಕೆಲಸ ತುರ್ತಾಗಿ ನಡೆಯಬೇಕಿದೆ ಎಂದು ಸಾರ್ವಜನಿಕರು ಪ್ರತಿಕ್ರಿಯಿಸಿದ್ದಾರೆ.

CT Ravi Pushes for Inclusion of Tulu in 8th Schedule of Constitution

"ಕಂಬಳ, ದೈವಾರಾಧನೆ, ನಾಗಾರಾಧನೆ ಮುಂತಾದ ತುಳುನಾಡಿನ ಸಾಂಪ್ರದಾಯಿಕ ಪದ್ಧತಿಗಳ ಮೂಲಕ ತುಳುವರು ವಿಶಿಷ್ಟವಾಗಿ ತಮ್ಮ ಭಾಷೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಬಂದಿದ್ದಾರೆ. ಕರ್ನಾಟಕ ಸರ್ಕಾರವು, ತುಳುಭಾಷೆಗೆ ರಾಜ್ಯಭಾಷೆ ಸ್ಥಾನಮಾನ ಹಾಗೂ 8ನೇ ಶೆಡ್ಯೂಲ್ ನಲ್ಲಿ ತುಳು ಸೇರಿಸುವ ಬಗ್ಗೆ ಮುಂದಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

English summary
Karnataka Kannada and Culture department minister CT Ravi Pushes for Inclusion of Tulu in 8th Schedule of Constitution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X