ಗುತ್ತಿಗೆದಾರ ಸಚಿನ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ?: ಪ್ರಿಯಾಂಕ್ ಖರ್ಗೆಗೆ ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು, ಜನವರಿ 01: ಪ್ರಿಯಾಂಕ್ ಖರ್ಗೆಯವರೇ, ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ.ಒಬ್ಬ ಸಾಯ್ತಾನೆ, ಸಾಯುವ ನಿರ್ಧಾರ ತೆಗೆದುಕೊಳ್ತಾನೆ ಎಂದಾದರೆ ಮನಸ್ಸನ್ನು ಎಷ್ಟು ಕಟುವಾಗಿ ಮಾಡಿ ಆ ನಿರ್ಧಾರ ತೆಗೆದುಕೊಳ್ತಾನೆ. ಈ ಸಾವಿಗೆ ಈಶ್ವರಪ್ಪನವರೇ ಹೊಣೆ. ಅವರನ್ನು ವಜಾ ಮಾಡಬೇಕೆಂದು ಪ್ರಿಯಾಂಕ್ ಖರ್ಗೆಯವರು ಹಿಂದೆ ಹೇಳಿದ್ದರು ಎಂದು ಗಮನ ಸೆಳೆದರು. ನಿಮ್ಮ ಮಾತುಗಳು ಈಗಲೂ ಯೂ ಟ್ಯೂಬಿನಲ್ಲಿ ಲಭ್ಯವಿದೆ. ತೆಗೆದು ನೋಡಿ ಎಂದು ಒತ್ತಾಯಿಸಿದರು.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆಯವರು ತಾನು ಉಳಿದವರಿಗೆ ಕೇಳುವುದು ತನಗೆ ಅನ್ವಯವಾಗುವುದಿಲ್ಲ ಎಂಬ ನೀತಿ ಹೊಂದಿದ್ದಾರೆ. ಪ್ರಿಯಾಂಕ್ ಖರ್ಗೆಯವರೇ, ನೀವು ಈಶ್ವರಪ್ಪನವರ ಮೇಲೆ ಆಪಾದನೆ ಬಂದಾಗ ಏನು ಮಾತನಾಡಿದ್ದೀರೆಂದು ನೆನಪಿಸಿಕೊಳ್ಳಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಆಡಳಿತದಲ್ಲಿ ಹಲವು ಬನಾನಾ ರಿಪಬ್ಲಿಕ್‍ಗಳನ್ನು ಮಾಡಿಕೊಂಡಿದ್ದಾರೆ. ಕಲ್ಬುರ್ಗಿ ರಿಪಬ್ಲಿಕ್, ಬೆಳಗಾವಿ ರಿಪಬ್ಲಿಕ್, ಕನಕಪುರ ರಿಪಬ್ಲಿಕ್- ಹೀಗೆ ಒಂದೊಂದು ಜಿಲ್ಲೆಯನ್ನು ಒಂದೊಂದು ರಿಪಬ್ಲಿಕ್ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು. 2025ರಲ್ಲಾದರೂ ಕೂಡ ಕಾನೂನು ಎಲ್ಲರಿಗೂ ಸಮಾನವಾಗಿರಲಿ. ಸಂವಿಧಾನ ಎಲ್ಲರಿಗೂ ಅನ್ವಯಿಸಲಿ. ಬನಾನಾ ರಿಪಬ್ಲಿಕ್ ಆಗದಂತಿರಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಶಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರ್ಣಗೊಂಡಿದೆ. ಸಾಧನೆ ಏನೆಂದು ಅವಲೋಕನ ಮಾಡಿದರೆ, ಬೆಲೆ ಏರಿಕೆ, ಭ್ರಷ್ಟಾಚಾರ ಕಣ್ಮುಂದೆ ನಿಲ್ಲುತ್ತದೆ ಎಂದು ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ, ಹಾಲು, ಆಲ್ಕೋಹಾಲ್ ಸೇರಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ಲಾನ್ ಮಂಜೂರು ಮಾಡಿಸಿಕೊಳ್ಳಲು ಪ್ರತಿ ಚದರ ಅಡಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಚ್ಚುವರಿಯಾಗಿ 100 ರೂ. ಕೊಡಬೇಕಾದ ದುಸ್ಥಿತಿ ಬೆಂಗಳೂರು ಮಹಾನಗರದ ಜನರದು ಎಂದು ಸಿ ಟಿ ರವಿ ತಿಳಿಸಿದರು.
ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣ ಅಬಕಾರಿ ಇಲಾಖೆ ಹಗರಣ ನಡೆದಿದೆ. ಆರೋಗ್ಯ ಖಾತೆಗೇ ಅನಾರೋಗ್ಯ ಬಡಿದಿದೆ. ಬಾಣಂತಿಯರು, ಹಸುಗೂಸುಗಳ ಸರಣಿ ಸಾವು ನಿಂತಿಲ್ಲ; ಜೀವರಕ್ಷಕ ಔಷಧಗಳೇ ಕಳಪೆಯಾಗಿರುವುದು ಆಶ್ಚರ್ಯ ಮತ್ತು ಆಘಾತÀಕಾರಿ ವಿಷಯಗಳು ಎಂದು ತಿಳಿಸಿದರು. ಮುಖ್ಯಮಂತ್ರಿಯಾದಿಯಾಗಿ ಬಹುತೇಕ ಸಚಿವರು ಒಂದಲ್ಲ ಒಂದು ಹಗರಣದಲ್ಲಿ ಸಿಲುಕಿದ್ದಾರೆ ಎಂದು ಆರೋಪಿಸಿದರು.
ಪಿಎಸ್‍ಐ ಪರಶುರಾಮ್, ಲೆಕ್ಕಾಧಿಕಾರಿ ಚಂದ್ರಶೇಖರ್, ಬೆಳಗಾವಿಯಲ್ಲಿ ರುದ್ರೇಶ್ ಯಡವಣ್ಣವರ್ ಸೇರಿ ಹಲವು ಪ್ರಾಮಾಣಿಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಸಚಿನ್ ಪಾಂಚಾಳ್, ಕೆಎಸ್‍ಡಿಎಲ್ ನೌಕರ ಅಮೃತ್ ಶಿರೂರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯವನ್ನು ಈ ಸರಕಾರ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ ಅವರು ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications