ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ರಾಜೀನಾಮೆ ಅಂಗೀಕಾರ!
ಬೆಂಗಳೂರು, ನ. 07: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಗೀಕರಿಸಿದ್ದಾರೆ. ಕಳೆದ ತಿಂಗಳು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿ ಆದೇಶ ಮಾಡಿದ್ದರು. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕಳೆದ ಅಕ್ಟೋಬರ್ 03 ರಂದು ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ ಸಲ್ಲಿಸಿದ್ದರು.
ಸಿ.ಟಿ. ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹಲವು ದಿನಗಳಾಗಿದ್ದರೂ ಕೆಲವು ಕಾರಣಗಳಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿರಲಿಲ್ಲ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿದ ನಂತರ ರಾಜೀನಾಮೆ ಅಂಗೀಕಾರವಾಗುತ್ತದೆ ಎಂಬ ಮಾಹಿತಿ ಇತ್ತು. ಅದರಂತೆ ಇವತ್ತು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ. ಆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಟಿ ರವಿ ರಾಜೀನಾಮೆ ಅಂಗೀಕಾರಕ್ಕೆ ರಾಜ್ಯಪಾಲರಿಗೆ ಕಳುಹಿಸಿದ್ದರು.

Recommended Video
ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಸಚಿವರು ನೀಡುವ ಮೊದಲ ರಾಜೀನಾಮೆ ಪ್ರಕರಣ ಇದಾಗಿದೆ. ಈ ಹಿಂದೆ ಬಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ವಿವಾದದ ಹಿನ್ನೆಲೆಯಲ್ಲಿ ಮಂತ್ರಿಗಳು ರಾಜೀನಾಮೆ ನೀಡಿದ್ದರು. ಆದರೆ ಇದೀಗ ಸಿಟಿ ರವಿ ಅವರು ಪಕ್ಷ ಸಂಘಟನೆಗಾಗಿ ಮಂತ್ರಿ ಪದವಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications