ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿ.ಟಿ ರವಿ ಆಯ್ಕೆ ಖಚಿತ!

|
Google Oneindia Kannada News

Recommended Video

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿದ ಕಮಲ | Oneindia Kannada

ಬೆಂಗಳೂರು, ಆಗಸ್ಟ್ 02: ರಾಜ್ಯದಲ್ಲಿ ಕಮಲ ಮತ್ತೊಮ್ಮೆ ಅಧಿಕಾರ ಹಿಡಿದಿದೆ. 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಆಡಳಿತ ಆರಂಭಿಸಿದ್ದಾರೆ. ಈ ನಡುವೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯ ಹುಡುಕಾಟ ಜಾರಿಯಲ್ಲಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ಯಡಿಯೂರಪ್ಪ ಅವರ ಅಧಿಕಾರಾವಧಿ ಏಪ್ರಿಲ್ 05ಕ್ಕೆ ಮುಕ್ತಾಯವಾಗಿದೆ. ಹೀಗಾಗಿ, ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗೂ ಭಾರಿ ಲಾಬಿ ನಡೆಯುತ್ತಿತ್ತು. ಸುಮಾರು 13 ಆಕಾಂಕ್ಷಿಗಳು ರೇಸ್​ನಲ್ಲಿದ್ದರು.

ಯಡಿಯೂರಪ್ಪ ಸಂಪುಟ : ಉಪ ಮುಖ್ಯಮಂತ್ರಿ ಹುದ್ದೆ ಇಲ್ಲಯಡಿಯೂರಪ್ಪ ಸಂಪುಟ : ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ

ಒಕ್ಕಲಿಗ ಕೋಟಾದಲ್ಲಿ ಮಾಜಿ ಸಚಿವ ಸಿ.ಟಿ ರವಿ, ಮಾಜಿ ಡಿಸಿಎಂ ಆರ್ ಅಶೋಕ್ ಹೆಸರುಗಳು ಮುಂಚೂಣಿಯಲ್ಲಿವೆ. ಈ ನಡುವೆ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ನಾನಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಲೋಕಸಭೆ ಚುನಾವಣೆಗೂ ಮುನ್ನವೇ ಸ್ಪಷ್ಟಪಡಿಸಿದ್ದರು.

ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್​ಅವರಿಗೆ ಕೇಂದ್ರದಲ್ಲಿ ಮಹತ್ವದ ಜವಾಬ್ದಾರಿ ನೀಡಲಾಯಿತು. ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಆಯ್ಕೆಯಲ್ಲೂ ಸಂತೋಷ್ ಅವರು ಹೈಕಮಾಂಡ್ ನಾಯಕರು ಸೂಚಿಸಿದ್ದರು.

ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ದಿನಾಂಕ ಬಹುತೇಕ ಪಕ್ಕಾಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ದಿನಾಂಕ ಬಹುತೇಕ ಪಕ್ಕಾ

ಇದಲ್ಲದೆ, ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಮುಂಚೂಣಿಯಲ್ಲಿದ್ದ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ ರವಿ ಅವರನ್ನು ಇತ್ತೀಚೆಗೆ ಪಕ್ಷದ ಆಂತರಿಕ ಚುನಾವಣೆಯ ಚುನಾವಣಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಹೀಗಾಗಿ, ಮತ್ತೊಮ್ಮೆ ಎರಡೆರಡು ಹುದ್ದೆ ಹೊಂದಿರುವ ವಿಚಾರದ ಬಗ್ಗೆ ಬಿಜೆಪಿಯೇ ಸ್ಪಷ್ಟನೆ ನೀಡಬೇಕು. 75 ವರ್ಷ ಮೀರಿದವರಿಗೆ ಉನ್ನತ ಹುದ್ದೆಯಿಲ್ಲ ಎಂಬ ಅಲಿಖಿತ ನಿಮಯ ಮುರಿದಂತೆ ಈ ನಿಯಮಕ್ಕೂ ವಿನಾಯಿತಿ ಸಿಗಬಹುದು.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂತೋಷ್ ಏಕೆ ಪರಿಗಣಿಸಿಲ್ಲ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂತೋಷ್ ಏಕೆ ಪರಿಗಣಿಸಿಲ್ಲ

ಶಬರಿಮಲೆ ವಿವಾದದ ವಿಚಾರದಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನು ಸೂಕ್ತವಾಗಿ ನಿರ್ವಹಿಸಿದ್ದಾರೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆ ವೇಳೆ ಅಭ್ಯರ್ಥಿಗಳ ಆಯ್ಕೆಯಲ್ಲೂ ಪಾತ್ರ ವಹಿಸಿದ್ದಾರೆ. ಬಿಜೆಪಿಯ ಆಂತರಿಕ ಭಿನ್ನಮತವನ್ನು ಶಮನಗೊಳಿಸಿದ್ದರಿಂದ ಬಡ್ತಿ ನೀಡಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ರಾಮ್ ಲಾಲ್ ಅವರ ಸ್ಥಾನಕ್ಕೆ ಸಂತೋಷ್ ಅವರು ವಹಿಸಿಕೊಂಡಿದ್ದಾರೆ. ಸಂತೋಷ್ ಅವರು ದೆಹಲಿಯಲ್ಲಿ ಅಧಿಕ ಕಾಲ ಉಳಿಯಬೇಕಾಗುತ್ತದೆ. ಕರ್ನಾಟಕದ ಆಗು ಹೋಗುಗಳನ್ನು ನಿಯಂತ್ರಿಸಲು ಸೂಕ್ತ ವ್ಯಕ್ತಿಯನ್ನು ಶಿಫಾರಸು ಮಾಡಬೇಕಾಗುತ್ತದೆ ಎಂಬ ಅಂಶ ಪರಿಗಣಿಸಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿಲ್ಲ

ಸಿ.ಟಿ ರವಿಗೆ ಸಂಘ, ಸಂಘಟನೆಯ ಬಲ

ಸಿ.ಟಿ ರವಿಗೆ ಸಂಘ, ಸಂಘಟನೆಯ ಬಲ

ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಬಲವರ್ಧನೆಗೊಳ್ಳಲು ಹೈಕಮಾಂಡ್ ಮಾಡಿದ ಯೋಜನೆಗಳಲ್ಲಿ ಸಿಟಿ ರವಿ ಸಕ್ರಿಯರಾಗಿದ್ದರು. ತಮಿಳುನಾಡಿನ ಉಸ್ತುವಾರಿ ವಹಿಸಿಕೊಂಡು, ತಮಿಳು ಭಾಷೆ ಕಲಿತು, ಸಂಘಟನೆಯಲ್ಲಿ ಯಶಸ್ವಿಯಾಗಿದ್ದರು. ದಕ್ಷಿಣದಲ್ಲಿ ಪ್ರಮುಖ ರಾಜ್ಯವಾದ ಕರ್ನಾಟಕದಲ್ಲಿ ಸಮರ್ಥವಾಗಿ ಸಂಘಟನೆ ಮಾಡಲು ರವಿ ಸೂಕ್ತ ಎಂದು ಸಂತೋಷ್ ಅವರು ಕೂಡಾ ಶಿಫಾರಸು ಮಾಡಿದ್ದಾರೆ.. ಹಾಗಾಗಿ ಬಿಜೆಪಿ ಹೈಕಮಾಂಡ್ ಕೂಡಾ ರವಿ ಪರ ಹೆಚ್ಚಿನ ಆಸಕ್ತಿ ಹೊಂದಿದ್ದು, ಯಡಿಯೂರಪ್ಪ ಸಂಪುಟ ವಿಸ್ತರಣೆಯಾದ ಬಳಿಕ ಹೊಸ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಘೋಷಣೆಯಾಗಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ 13 ಆಕಾಂಕ್ಷಿಗಳಿದ್ದಾರೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ 13 ಆಕಾಂಕ್ಷಿಗಳಿದ್ದಾರೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ 13 ಆಕಾಂಕ್ಷಿಗಳಿದ್ದಾರೆ, ಸಿಟಿ ರವಿ, ಆರ್ ಆಶೋಕ್, ಅರವಿಂದ್ ಲಿಂಬಾವಳಿ, ಬಿ ಶ್ರೀರಾಮುಲು ಹೆಸರು ಮುಂಚೂಣಿಯಲ್ಲಿವೆ. ಈ ಬಾರಿ ಒಕ್ಕಲಿಗರಿಗೆ ಅಧ್ಯಕ್ಷ ಸ್ಥಾನ ಒಲಿಯುವ ಸಾಧ್ಯತೆಯಿದೆ. ಲಿಂಗಾಯತ ವೀರಶೈವ ಮುಖಂಡರು, ಕುರುಬ ಹೀಗೆ ಜಾತಿ ಲೆಕ್ಕಾಚಾರ ಕೂಡಾ ನಡೆಯುತ್ತಿದೆ. ಆದರೆ, ಎಲ್ಲವನ್ನು ಮೀರಿ, ಮುಂದಿನ ಅವಧಿಯಲ್ಲಿ ಅಧಿಕಾರ ಸ್ಥಾಪನೆ ಮಾಡಲು ಬಿಜೆಪಿಗೆ ಬಲ ತುಂಬ ಬಲ್ಲಂಥವರನ್ನು ಮಾತ್ರ ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ.

ಆರ್ ಆಶೋಕ್ ಅವರಿಗೆ ಕೈ ತಪ್ಪಿದ್ದ ಅಧ್ಯಕ್ಷ ಸ್ಥಾನ

ಆರ್ ಆಶೋಕ್ ಅವರಿಗೆ ಕೈ ತಪ್ಪಿದ್ದ ಅಧ್ಯಕ್ಷ ಸ್ಥಾನ

ಮಾಜಿ ಉಪ ಮುಖ್ಯಮಂತ್ರಿ ಆರ್ ಆಶೋಕ್ ಅವರ ಜನಪ್ರಿಯತೆ ಹಳೆ ಮೈಸೂರು ಪ್ರಾಂತ್ಯಕ್ಕೆ ಮಾತ್ರ ಸೀಮಿತ ಎಂಬ ಮಾತಿದೆ. ಆದರೆ, ಇದನ್ನು ಅಶೋಕ್ ಅವರು ಈಗ ಸುಳ್ಳಾಗಿಸಿದ್ದರು. ಲೋಕಸಭೆ ಚುನಾವಣೆ ಪ್ರಚಾರದ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಯೋಗಿ ಆದಿತ್ಯನಾಥ್, ಸ್ಮೃತಿ ಇರಾನಿ ಸೇರಿದಂತೆ ಪ್ರಮುಖ ಮುಖಂಡರು ರಾಜ್ಯದಲ್ಲಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸರಿ ಸುಮಾರು 32ಕ್ಕೂ ಅಧಿಕ ವಿಭಾಗಳಿದ್ದ ಆಯೋಜನಾ ಉಸ್ತುವಾರಿಯನ್ನು ಆರ್ ಅಶೋಕ್ ವಹಿಸಿಕೊಂಡಿದ್ದರು. ರಾಜ್ಯದೆಲ್ಲೆಡೆ, ಅದರಲ್ಲೂ ಉತ್ತರ ಕರ್ನಾಟಕದ ಭಾಗದಲ್ಲಿ ಅಶೋಕ್ ಆಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಇದರ ಫಲವಾಗಿ ಅಧ್ಯಕ್ಷ ಸ್ಥಾನ ದೊರೆತರೂ ಅಚ್ಚರಿಯೇನಿಲ್ಲ ಎಂಬ ಮಾತು ಕೇಳಿ ಬಂದಿತ್ತು.

English summary
As per the sources former minister CT Ravi is set to take over post of Karnataka state BJP chief post. There are more than 13 aspirants for the post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X