Ration: "10 ಕೆ.ಜಿ. ಅಕ್ಕಿ 15,500 ರೂಪಾಯಿಗೆ ಮಾರಾಟ"
Ration: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಸರ್ಕಾರದ ವಿರುದ್ಧ ಗಂಭೀರ ಆರೋಪಗಳು ಸಹ ಕೇಳುಬರುತ್ತಿವೆ. ಇದೀಗ ಸಿಟಿ ರವಿ ಅವರು ಪಡಿತರ ವಿಚಾರದಲ್ಲಿ ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ಅನ್ನು ಬಡತನ ರೇಖೆಗಿತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಶ್ರೀಮಂತರು ಅಂದರೆ ಅನರ್ಹರು ಕೂಡ ಇದನ್ನು ಪಡೆದುಕೊಂಡಿದ್ದು, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಈ ನಡುವೆಯೇ ಇದೀಗ ಪಡಿತರ ಅಕ್ರಮ ಸಾಗಣೆ ಕುರಿತು ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ.ರವಿ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಡವರಿಗೆಂದು ಕೊಡಲ್ಪಡುವ ಅಕ್ಕಿ ಬಡವರ ಮನೆ ತಲುಪುತ್ತಿಲ್ಲ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟದ ಕುರಿತು ಎಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ? ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಅನ್ನಭಾಗ್ಯ ಅಕ್ರಮ ಸಾಗಾಟದ ಆಳ-ಅಗಲ ಬಹಳಷ್ಟು ವಿಸ್ತಾರ ಆಗಿದೆ. ಇದರ ಸಮಗ್ರ ತನಿಖೆಗೆ ಎಸ್ಐಟಿ ತನಿಖೆಯ ಅಗತ್ಯ ಇದೆ ಎಂದು ಗುಡುಗಿದ್ದಾರೆ.
ಮಾಹಿತಿ ಪ್ರಕಾರ, ಇದೇ ಅಕ್ಕಿಯನ್ನು ಪಾಲಿಶ್ ಮಾಡಿ 25 ಕೆ.ಜಿ.ಗೆ 8,000 ರೂಪಾಯಿಗೆ ಮಾರಾಟ ಮಾಡುತ್ತಾರಂತೆ. ದುಬೈನಲ್ಲಿ 10 ಕೆ.ಜಿ. ಅಕ್ಕಿಯನ್ನು 15,500 ರೂಪಾಯಿಗೆ ಮಾರಾಟ ಮಾಡುತ್ತರಂತೆ. ಅಂದರೆ, ಕೆ.ಜಿ.ಗೆ 150 ರೂಪಾಯಿ ಪಡೆಯುತ್ತಾರೆ. ಅನ್ನಭಾಗ್ಯ ಅಂತಾ ಕೊಡುತ್ತಿರುವ ಅಕ್ಕಿ ಬಡವರಿಗೆ ತಲುಪುತ್ತಿಲ್ಲ ಅಥವಾ ಬಡವರಿಗೆ ಬೇಕಾಗಿಲ್ಲ. ಇದರಲ್ಲಿ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂದು ನೀವೇ ಹೇಳಿದ್ದೀರಿ ಎಂದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಗೋಡೋನ್ಗೆ ಬರುವುದಕ್ಕಿಂತ ಮುಂಚೆಯೇ ಕ್ವಿಂಟಾಲ್ಗಟ್ಟಲೇ ಅಕ್ಕಿ ಮಾಯವಾಗಿದೆ ಅಂತಾ ನೀವು ಉತ್ತರದಲ್ಲೇ ಕೊಟ್ಟಿದ್ದೀರಿ. ನಾನು ಮಾಹಿತಿ ತೆಗೆದುಕೊಂಡಿರುವ ಪ್ರಕಾರ, ಒಂದೊಂದು ಜಿಲ್ಲೆಯಲ್ಲೇ 30-40 ಎಫ್ಐಆರ್ ದಾಖಲಾಗಿದೆ. ಇದರಿಂದಲೇ ಗೊತ್ತಾಗುತ್ತದೆ ಇದರ ಆಳ, ಅಗಲ ಎಷ್ಟಿದೆ ಎಂದು. ಬೇಲಿಯೇ ಎದ್ದು ಹೊಲ ಮೆಯ್ಯುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಇದರ ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡುವ ಅಗತ್ಯಯಿದೆ ಎಂದು ಕಂಡುಬರುತ್ತಿದೆ ಎಂದು ಹೇಳಿದರು.
ಒಂದು ಪ್ರಕರಣ ಆದರೆ, ಯಾರೋ ಒಬ್ಬ ಮೋಸ ಮಾಡಿದ್ದಾನೆ ಎಂದುಕೊಳ್ಳಬಹುದು. ಆದರೆ, ನೂರಾರು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆ ಈ ಕುರಿತು ಸಮಗ್ರ ತನಿಖೆ ಮಾಡುವ ಕೆಲಸವನ್ನು ಸರ್ಕಾರ ಮಾಡಿದ್ಯಾ? ಇದನ್ನು ನಿಯಂತ್ರಣ ಮಾಡುವುದೇಗೆ ಎಂದು ಸರ್ಕಾರ ಯೋಚನೆ ಮಾಡಿದ್ಯಾ? ಎಂದು ಸಿಟಿ ರವಿ ಅವರು ಪ್ರಶ್ನೆ ಮಾಡುವ ಮೂಲಕ ಕೆಂಡಕಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಕೊಡುತ್ತಿರುವ ಪಡಿತರ ಕಳೆ ಗುಣಮಟ್ಟದಾಗಿದೆ. ರಾಗಿಯಲ್ಲಿ ಬರೀ ಮಣ್ಣು ತುಂಬಿರುತ್ತದೆ ಎಂದು ಈ ಹಿಂದೆ ಮಹಿಳೆಯೊಬ್ಬರು ವಿಡಿಯೋ ಸಹಿತ ಆರೋಪ ಮಾಡಿದ್ದರು. ಈಗಲೂ ಸಹ ಇಂತಹ ಆರೋಪಗಳು ಕೇಳಿಬರುತ್ತಿದ್ದು, ಸರ್ಕಾರ ಇದರತ್ತ ಗಮನಹರಿಸುವ ಮೂಲಕ ಬಡವರಿಗೆ ಗುಣಮಟ್ಟದ ಪಡಿತರ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications