Bank Jobs: ಸ್ಥಳೀಯರಿಗೆ ಬ್ಯಾಂಕ್ ಉದ್ಯೋಗ: ಕೇಂದ್ರ ಸರ್ಕಾರಕ್ಕೆ ಸಿ.ಟಿ.ರವಿ ಧನ್ಯವಾದ
ಬ್ಯಾಂಕ್ಗಳಲ್ಲಿ ಸ್ಥಳೀಯ ಭಾಷೆ ಮಾತನಾಡದ ಸಿಬ್ಬಂದಿ ಇರುವುದರಿಂದ ಗ್ರಾಹಕರಿಗೆ ಭಾರಿ ಸಮಸ್ಯೆ ಎದುರಾಗಿತ್ತು. ಭಾಷಾ ವಿಚಾರಕ್ಕಾಗಿಯೇ ಬ್ಯಾಂಕ್ಗಳಲ್ಲಿ ಗಲಾಟೆಗಳು ಕೂಡ ನಡೆಯುತ್ತಿದ್ದವು. ಇದೀಗ ಬ್ಯಾಂಕ್ಗಳಲ್ಲಿ ಸ್ಥಳೀಯ ಭಾಷಿಕರಿಗೆ ಉದ್ಯೋಗ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಈ ಮಹತ್ವದ ನಿರ್ಧಾರಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಸ್ಥಳೀಯ ಭಾಷೆಗಳಲ್ಲಿ ವ್ಯವಹರಿಸುವ ಪ್ರತಿಭಾವಂತ ಉದ್ಯೋಗಿಗಳನ್ನು ಆಯಾ ಪ್ರದೇಶಗಳಲ್ಲಿನ ಬ್ಯಾಂಕ್ ಶಾಖೆಗಳಲ್ಲಿ ನಿಯೋಜಿಸುವುದನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕ ವಲಯದ ಬ್ಯಾಂಕುಗಳು ತಮ್ಮ ಮಾನವ ಸಂಪನ್ಮೂಲ ನೀತಿಗಳನ್ನು ಪುನರ್ರಚಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ್ದಾರೆ.

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಸಮಸ್ಯೆಯಿಂದಾಗಿ, ವಿವಿಧ ರಾಜ್ಯಗಳ ರಾಷ್ಟ್ರೀಕೃತ ಬ್ಯಾಂಕ್ ಖಾತೆಗಳಲ್ಲಿ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸುವ ಸಿಬ್ಬಂದಿಯ ಕೊರತೆಯಿಂದಾಗಿ ಜನರು ಕಷ್ಟಪಡುವಂತಾಗಿತ್ತು. ಈ ಸಮಸ್ಯೆಯನ್ನು ಮನಗಂಡ ಮಾನ್ಯ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕುಗಳಿಗೆ ನೀತಿ ಬದಲಿಸುವಂತೆ ಸ್ಪಷ್ಟವಾಗಿ ಸೂಚಿಸಿದ್ದಾರೆ. ಇದರಿಂದ ಕನ್ನಡಿಗರು ಎದುರಿಸಿದ್ದ ಭಾಷಾ ಸಮಸ್ಯೆ ನಿವಾರಣೆಯಾಗಲಿದೆ ಎಂದು ಸಿ.ಟಿ.ರವಿ ಹೇಳಿದ್ದಾರೆ.
ಇದೇ ವೇಳೆ, ಕನ್ನಡಿಗ ಯುವಕ ಯುವತಿಯರೂ ಸಹ ಬ್ಯಾಂಕಿಂಗ್ ಕ್ಷೇತ್ರದ ಅವಕಾಶಗಳನ್ನು ಪಡೆದುಕೊಂಡು, ಸೂಕ್ತ ತಯಾರಿ ನಡೆಸಿ, ಬ್ಯಾಂಕಿಂಗ್ ಉದ್ಯೋಗಗಳನ್ನು ಹೊಂದುವುದರಿಂದ ಈ ಸಮಸ್ಯೆ ಭವಿಷ್ಯದಲ್ಲಿ ಇನ್ನಷ್ಟು ಕಡಿಮೆಯಾಗಬಹುದು. ಈ ಸೂಚನೆ ನೀಡಿರುವುದಕ್ಕೆ ಮಾನ್ಯ ಹಣಕಾಸು ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ.
ಹಣಕಾಸು ಸಚಿವರು ಹೇಳಿದ್ದೇನು?
ಎಸ್ಬಿಐನ ಬ್ಯಾಂಕಿಂಗ್ ಮತ್ತು ಆರ್ಥಿಕ ಸಮಾವೇಶದಲ್ಲಿ ಮಾತನಾಡಿದ್ದ ಸಚಿವೆ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಬ್ಯಾಂಕುಗಳ ಪರವಾಗಿ ನಾನು ಸಮರ್ಥಿಸಿಕೊಳ್ಳಲು ಸಾಧ್ಯವಾಗದ ಏಕೈಕ ಟೀಕೆವೊಂದಿದೆ. ನಾನು ಖಾಸಗಿ ಬ್ಯಾಂಕುಗಳ ಬಗ್ಗೆ ಮಾತನಾಡುತ್ತಿಲ್ಲ. ನಮ್ಮ ಮಾನವ ಸಂಪನ್ಮೂಲ ನೀತಿಯಿಂದಾಗಿ ನಾವು ವಿಭಿನ್ನ ಪ್ರದೇಶಗಳಲ್ಲಿ ವಿಭಿನ್ನ ಮಾತೃಭಾಷೆಯ ಜನರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳುತ್ತೇವೆ. ನಾನು ಈ ನೀತಿಯನ್ನು ದೂಷಿಸುತ್ತಿಲ್ಲ, ಆದರೆ ಸ್ಥಳೀಯ ಭಾಷೆಯ ಒಂದು ಪದವೂ ಮಾತನಾಡುವುದಿಲ್ಲ ಎಂದು ಬೇಸರ ಹೊರಹಾಕಿದ್ದರು.
ನಿಮ್ಮ ಸ್ಥಳೀಯ ಗ್ರಾಹಕರೊಂದಿಗೆ ಅಗತ್ಯವಿರುವುದು ಆ ಸಣ್ಣ ಸಂಪರ್ಕದ ಅಂಶ. ಅವರಿಲ್ಲದೆ ನೀವು ಇಲ್ಲ, ನೀವು ಆ ಅಂಶವನ್ನು ಸೇರಿಸಿಕೊಳ್ಳಬೇಕು. ಎಲ್ಲ ಬ್ಯಾಂಕುಗಳು ನಿಮ್ಮ ಮಾನವ ಸಂಪನ್ಮೂಲ ನೀತಿಗಳನ್ನು ಕೇವಲ ಸಂಖ್ಯೆಗಳ ಸಲುವಾಗಿ ನೇಮಕಾತಿ ಮಾಡುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದರು.
ಶಾಖೆಯಲ್ಲಿ ನಿಯೋಜಿಸಲಾದ ಪ್ರತಿಯೊಬ್ಬ ಸಿಬ್ಬಂದಿಯೂ ತಮ್ಮ ಗ್ರಾಹಕರನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ಸ್ಥಳೀಯ ಭಾಷೆಯನ್ನು ಮಾತನಾಡುತ್ತಾರೆ ಎಂಬುದನ್ನು ಬ್ಯಾಂಕುಗಳು ಖಚಿತಪಡಿಸಿಕೊಳ್ಳಬೇಕು. ಕನಿಷ್ಠ ಪಕ್ಷ ಉನ್ನತ ಆಡಳಿತ ಮಂಡಳಿ ಮಾತನಾಡದಿದ್ದರೂ ಶಾಖಾ ಮಟ್ಟದ ಅಧಿಕಾರಿಗಳಾದರೂ ಸ್ಥಳೀಯ ಭಾಷೆ ಮಾತನಾಡಬೇಕು. ಸ್ಥಳೀಯ ಭಾಷೆಯಲ್ಲಿ ಉದ್ಯೋಗಿಯ ದಕ್ಷತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications