Lok Sabha Election 2024: ಚಿಕ್ಕಮಗಳೂರು ಕ್ಷೇತ್ರದಿಂದ ಸಿ ಟಿ ರವಿ ಸ್ಪರ್ಧೆ? ಶೋಭಾ ಕರಂದ್ಲಾಜೆ ರಾಜಕೀಯ ಭವಿಷ್ಯವೇನು?

ಚಿಕ್ಕಮಗಳೂರು, ನವೆಂಬರ್‌ 09: 2023 ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಪ್ರಭಾವಿ ಬಿಜೆಪಿ ನಾಯಕರ ಸಿ ಟಿ ರವಿ ಅವರು ಇದೀಗ ಕೇಂದ್ರದತ್ತ ಮುಖ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ರಾಜಕೀಯ ಭವಿಷ್ಯಕ್ಕಾಗಿ ಲೋಕಸಭಾ ಚುನಾವಣಾ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಹೌದು, ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ಸಿ ಟಿ ರವಿ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಗೆ ಈಗಾಗಲೇ ಹಲವು ತಯಾರಿಯನ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿಯಲ್ಲಿ ಹಿಂದುತ್ವದ ವಿಚಾರ ಬಂದಾಗ ಸಿ ಟಿ ರವಿ ಮೊದಲಿಗರಾಗಿರುತ್ತಾರೆ. ಅಲ್ಲದೇ ನಿಷ್ಟವಂತ ಬಿಜೆಪಿ ಕಾರ್ಯಕರ್ತ ಹಾಗೂ ಹೈಕಮಾಂಡ್‌ ನಾಯಕರ ಮಟ್ಟದಲ್ಲಿ ಉತ್ತಮ ಸಂಬಂಧ ಹೊಂದಿರುವ ಸಿ ಟಿ ರವಿ ಅವರು ಇದೀಗ ಲೋಕಸಮರದತ್ತ ಚಿತ್ತ ಹರಿಸಿದ್ದಾರೆ ಎಂದು ತಿಳಿದು ಬಂದಿದೆ.

CT Ravi To Contest in Chikkamagalur Lok Sabha Constituency? What about Shobha Karandlaje?

ಇನ್ನೂ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ರೆ ಮುಂದಿನ 5 ವರ್ಷ ಅಧಿಕಾರವಿಲ್ಲದೇ ಇರಬೇಕಾಗುತ್ತದೆ ಎಂಬ ಹಿನ್ನೆಲೆಯಿಂದಾಗಿ ಈ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಚಿಕ್ಕಮಗಳೂರು ಕ್ಷೇತ್ರದಲ್ಲಿ ತನ್ನದೇ ಆದ ವರ್ಚಸ್ಸನ್ನ ಸಿ ಟಿ ರವಿ ಹೊಂದಿದ್ದಾರೆ. ಅಲ್ಲದೇ ಹಾಲಿ ಚಿಕ್ಕಮಗಳೂರು- ಉಡುಪಿ ಕ್ಷೇತ್ರದ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರು ಸಹ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತವನ್ನ ಹೊಂದಿದ್ದಾರೆ.

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರ ಜಾತಿ ಲೆಕ್ಕಾಚಾರವೂ ಬಹುಮುಖ್ಯವಾಗಿದೆ. ಇನ್ನೂ ಹಾಲಿ ಕೇಂದ್ರ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಕ್ಷೇತ್ರದಲ್ಲಿ ಹಲವು ಅಭಿವೃದ್ದಿ ಕಾರ್ಯವನ್ನ ಮಾಡಿದ್ದಾರೆ. ಇನ್ನೂ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತ ಹಾಗೂ ವರ್ಚಸ್ಸು ಹೊಂದಿರುವ ಬಿಜೆಪಿಯಲ್ಲಿ ಯಾರೇ ಅಭ್ಯರ್ಥಿಯಾದರೇ ಸುಲಭವಾಗಿ ಗೆಲುವು ಸಾಧಿಸಬಹುದು ಎಂಬ ಮಾತಿದೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವರಾದ ಸಿ ಟಿ ರವಿ ಅವರು ಚಿಕ್ಕಮಗಳೂರು ಹಾಗೂ ಉಡುಪಿ ಕ್ಷೇತ್ರದಿಂದ ಸ್ಪರ್ಧೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ. ಅಲ್ಲದೇ ಈ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಶೋಭಾ ಕರಂದ್ಲಾಜೆ ರಾಜಕೀಯ ಭವಿಷ್ಯವೇನು?

ಹೌದು, ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಿಂದ 2024 ರ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಸಿ ಟಿ ರವಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ದಟ್ಟವಾಗಿ ಕೇಳಿ ಬರುತ್ತಿದ್ದು, ಹಾಲಿ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ರಾಜಕೀಯ ಭವಿಷ್ಯವೇನು ಎಂಬ ಪ್ರಶ್ನೆ ಉದ್ಭವಿಸಿದೆ.

CT Ravi To Contest in Chikkamagalur Lok Sabha Constituency? What about Shobha Karandlaje?

ಸಿ ಟಿ ರವಿ ಅವರು ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೇ, ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಹೈಕಮಾಂಡ್‌ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ. ಏಕೆಂದರೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಯಾಗಿದ್ದ ಸದಾನಂದಗೌಡರು ಚುನಾವಣಾ ರಾಜಕೀಯಕ್ಕೆನಿವೃತ್ತಿ ಘೋಷಿಸಿದ್ದು, ಈ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರನ್ನ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತ ಕಮಲ ಪಾಳಯದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವೂ ಸಾಕಷ್ಟು ಸದ್ದು ಮಾಡುತ್ತಿದ್ದು, 2024 ರ ಚುನಾವಣೆ ಒಳಗೆ ನೂತನ ರಾಜ್ಯಾಧ್ಯಕ್ಷದ ಆಯ್ಕೆ ಕುರಿತು ಈಗಾಗಲೇ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಬಿಜೆಪಿ ಹೈಕಮಾಂಡ್‌ ಚರ್ಚೆ ನಡೆಸಿದ್ದು, ಈ ಬಾರೀ ಮಹಿಳಾ ಸಾರಥಿಯನ್ನಾಗಿ ಮಾಡಲು ಹೈಕಮಾಂಡ್‌ ಮುಂದಾಗಿದೆ ಎಂದು ಹೇಳಲಾಗಿದೆ. ಹಾಲಿ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿದೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿ ಬಂದಿದೆ. ಒಕ್ಕಲಿಗ ಸಮುದಾಯದ ನಾಯಕಿ, ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ನಾಯಕರೊಂದಿಗೆ ಉತ್ತಮ ಸಂಬಂಧವನ್ನ ಇಟ್ಟುಕೊಂಡಿರುವ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನ ಹೈಕಮಾಂಡ್‌ ನೀಡಲಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+