Lok Sabha Election 2024: ಸಿ ಟಿ ರವಿಗೆ ಟಿಕೆಟ್ ಮಿಸ್: ಚಿಕ್ಕಮಗಳೂರು ಅಭ್ಯರ್ಥಿ ಇವರೇ ನೋಡಿ ?
ಬೆಂಗಳೂರು,ಮಾರ್ಚ್ 06: ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆ ಹಿನ್ನಲೆ ತಯಾರಿ ನಡೆಸುತ್ತಿದ್ದು, ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಇಂದು ಬಿಜೆಪಿಯ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ಕರ್ನಾಟಕದ 17 ಕ್ಷೇತ್ರದ ಲೋಕಸಭಾ ಅಭ್ಯರ್ಥಿಗಳ ಹೆಸರನ್ನ ಹೈಕಮಾಂಡ್ ಬಿಡುಗಡೆ ಮಾಡಲಿದೆ.
ಹೌದು, ಕರ್ನಾಟಕದಲ್ಲಿ ಹಿಂದುತ್ವದ ಭದ್ರಕೋಟೆ ಕ್ಷೇತ್ರವಾದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಹೊಸ ತಂತ್ರಗಾರಿಕೆಯಿಂದ ಬಿಜೆಪಿ ಕೈ ಸುಟ್ಟುಕೊಂಡಿದ್ದು, ಕೈ ಪಡೆಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು. ಹಲವು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಭರ್ಜರಿ ತಯಾರಿ ನಡೆಸಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನ ಪಡೆಯಲು ಬಿಜೆಪಿ ಹಾಗೂ ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ.

ಇನ್ನೂ ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಸಿಗುವುದಿಲ್ಲ ಎನ್ನುವ ಚರ್ಚೆಯಾಗುತ್ತಿದ್ದು, ಗೋ ಬ್ಯಾಕ್ ಶೋಭಕ್ಕಾ ಎಂದು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ವಪಕ್ಷದ ನಾಯಕರೇ ಅಭಿಮಾನ ಶುರು ಮಾಡಿದ್ದು, ಈ ಬಾರೀ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಸಿಗುವುದಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೇ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ಸಿ ಟಿ ರವಿ ಅವರಿಗೆ ಈ ಬಾರೀ ಟಿಕೆಟ್ ಸಿಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಸಭೆಯಲ್ಲಿ ಅಂತಿಮವಾಗಿ ಶೋಭಾ ಕರಂದ್ಲಾಜೆ ಅವರ ಹೆಸರು ಕೇಳಿ ಬಂದಿದ್ದು, ಬಿಜೆಪಿ ವರಿಷ್ಠರು ಶೋಭಾ ಕರಂದ್ಲಾಜೆ ಅವರಿಗೆ ಮಣೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು. ಎರಡನೇ ಪಟ್ಟಿ ಘೋಷಣೆ ಆಗುವ ಸಾಧ್ಯತೆ ಇದೆ. ಅದರಲ್ಲೂ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 17 ಹಾಲಿ ಸಂಸದರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಇನ್ನೂ ಈ ಸಭೆಯಲ್ಲಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾಗಿಯಾಗಿದ್ದಾರೆ. ಅಲ್ಲದೇ ಈ ಹಿಂದೆ ಗೋ ಬ್ಯಾಕ್ ಶೋಭಕ್ಕಾ ಎಂಬ ಅಭಿಮಾನದ ಕುರಿತು ಯಡಿಯೂರಪ್ಪ ಗುಡುಗಿದ್ರು.
ಇತ್ತ ಬಿಜೆಪಿ- ಜೆಡಿಎಸ್ ನಲ್ಲೂ ಸಹ 28 ಕ್ಷೇತ್ರಗಳನ್ನ ಗೆಲ್ಲಲು ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರೀ ಹೈಕಮಾಂಡ್ ಮತ್ತೆ ಟಿಕೆಟ್ ನೀಡಲಿದೆ ಎಂದು ಹೇಳಲಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮಲೆನಾಡು ಹಾಗೂ ಕರಾವಳಿಯನ್ನು ಒಳಗೊಂಡಿದ್ದು, ಬಿಜೆಪಿ ಭದ್ರಕೋಟೆಯಾಗಿದ್ದ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ವಶ ಮಾಡಿಕೊಂಡಿದ್ದು, ಹಿಂದುತ್ವದ ಭದ್ರಕೋಟೆಯನ್ನ ಮತ್ತೆ ವಶಪಡಿಸಿಕೊಳ್ಳವ ನಿಟ್ಟಿನಲ್ಲಿ ಪುನಃ ಹಾಲಿ ಸಂಸದೆಯಾಗಿರು ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿಲಿದೆ ಎಂದು ತಿಳಿದು ಬಂದಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications