ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಘೋಷಿಸಿದ ಕೆ ಎಸ್ ಈಶ್ವರಪ್ಪ
ಬೆಂಗಳೂರು, ಏಪ್ರಿಲ್ 20: ರಾಜ್ಯ ರಾಜಕೀಯದಲ್ಲಿ ಚುನಾವಣೆ ಕಾವು ಹೆಚ್ಚುತ್ತಿರುವ ಮಧ್ಯೆ ಬಿಜೆಪಿ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರ ಬ್ಯಾಟ್ ಬೀಸಿದ್ದಾರೆ.
ಕಾಂಗ್ರೆಸ್‌ನಲ್ಲಿ ಮುನ್ನೆಲೆಗೆ ಬಂದಿದ್ದ ಈ ಬಾರಿಯ ಮುಖ್ಯಮಂತ್ರಿ ಸ್ಥಾನ ಯಾರಿಗೆ?, ಯಾರು ಸಿಎಂ ಆಗುತ್ತಾರೆ ಎಂಬ ವಿಚಾರ ಇದೀಗ ಬಿಜೆಪಿಯಲ್ಲೂ ಸದ್ದು ಮಾಡುತ್ತಿದೆ. ಕರ್ನಾಟಕದಲ್ಲಿ ಮುಂದಿನ ಸಿಎಂ ಸಿಟಿ ರವಿ ಆಗಲಿದೆ ಎಂದು ಬಹಿರಂಗ ಸಭೆಯೊಂದರಲ್ಲಿ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಈಶ್ವರಪ್ಪ ಅವರು ಸಿಡಿಸಿರುವ ಈ ಕರ್ನಾಟಕದ ಸಿಎಂ ಸ್ಥಾನದ ಬಹಿರಂಗ ಹೇಳಿಕೆಯು ಪ್ರತಿಪಕ್ಷಗಳಿಗೆ ಅಸ್ತ್ರವಾಗಬಹುದು. ಈ ಹೇಳಿಕೆ ಬಿಜೆಪಿಗೆ ಮುಜುಗರ ತರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಗಿಬೀಳಬಹುದು
ಹಿಂದಿನಿಂದಲೂ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ರೇಸ್‌ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇದ್ದಾರೆ. ಈ ಸಂಬಂಧ ಕಾಂಗ್ರೆಸ್‌ನಲ್ಲಿ ಎರಡು ಬಣಗಳವಾಗಿವೆ. ಇದೇ ವಿಚಾರವನ್ನು ಇಟ್ಟುಕೊಂಡುಕೈ ನಾಯಕರನ್ನು ಸದಾ ಕಾಲೆಯುತ್ತಿದ್ದ ಬಿಜೆಪಿಯಲ್ಲಿಯೇ ಇದೀಗ ರಾಜ್ಯದ ಮುಂದಿನ ಸಿಎಂ ಕುರಿತು ಘೋಷಣೆ ಆಗಿದೆ.
ಇನ್ನೂ ಇತ್ತೀಚೆಗಷ್ಟೇ ಲಿಂಗಾಯತ ನಾಯಕರೊಬ್ಬರನ್ನು ಕಾಂಗ್ರೆಸ್ ಸಿಎಂ ಎಂದು ಘೋಷಿಸಲಿ, ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಅವರನ್ನ ಸಿಎಂ ಘೋಷಿಸಲಿದ ಎಂದು ಇದೇ ಈಶ್ವರಪ್ಪನವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಯಾಗಿ ಬಿಜೆಪಿಗರು ಸವಾಲ್ ಹಾಕಿದ್ದರು. ಅಲ್ಲದೇ ಲಿಂಗಾಯತ ಸಿಎಂ ಕುರಿತು ಮಾತನಾಡುವ ಸಿದ್ದರಾಮಯ್ಯನವರು ಲಿಂಗಾಯತ ನಾಯಕರಿಗೆ ಹಾಗೂ ಸಮುದಾಯದವರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.
ಸಿಎಂ ಘೋಷಣೆ ಹೇಳಿಕೆಯಿಂದ ಬಿಜೆಪಿಗೆ ಡ್ಯಾಮೇಜ್?
ಇದೆಲ್ಲ ಬೆಳವಣಿಗೆ ಬೆನ್ನಲ್ಲೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರ ಕೆ.ಎಸ್.ಈಶ್ವರಪ್ಪ ಮಾತನಾಡಿದ್ದಾರೆ. ಕರ್ನಾಟಕ ರಾಜ್ಯದ ಮುಂದಿನ ಸಿಎಂ ಸಿಟಿ ರವಿ ಆಗಲಿದೆ ಎಂದು ಬಹಿರಂಗ ವೇದಿಕೆಯೊಂದರಲ್ಲಿ ಅವರು ಘೋಷಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಪ್ರತಿಕ್ರಿಯೆ ಏನು?, ಈ ಹೇಳಿಕೆಯನ್ನು ಚುನಾವಣಾ ಪ್ರಚಾರದಲ್ಲಿ ಹೇಗೆ ವಿಪಕ್ಷಗಳು ಬಳಸಿಕೊಳ್ಳುತ್ತವೇ?, ಬಿಜೆಪಿಯಿಂದ ಈಶ್ವರಪ್ಪ ಹೇಳಿಕೆ ಡ್ಯಾಮೇಜ್ ಮಾಡಲಿದೆ ಎಂಬುದು ಶೀಘ್ರವೇ ತಿಳಿದು ಬರಲಿದೆ.












Click it and Unblock the Notifications