ಟಿಕೆಟ್, ಟಿಕೆಟ್, ಕಾಂಗ್ರೆಸ್ಸಿಗರಿಗೆ ನಡುಕ ಹುಟ್ಟಿಸಿದೆ ಈ ಸೂಚನೆ

By: ಅನುಷಾ ರವಿ
Subscribe to Oneindia Kannada

ಬೆಂಗಳೂರು, ಆಗಸ್ಟ್ 21:2018 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರು ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಕುತೂಹಲದ ಪ್ರಶ್ನೆ ಎದ್ದಿದೆ. ಈ ನಡುವೆ ಡಿಸೆಂಬರ್ ವೇಳೆಗೆ ಅಭ್ಯರ್ಥಿಗಳ ಪಟ್ಟಿ, ಟಿಕೆಟ್ ಹಂಚಿಕೆ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.


ಆದರೆ, ಹಾಲಿ ಶಾಸಕ, ಸಚಿವರುಗಳಿಗೆ ಮೈನಡುಕ ಹುಟ್ಟುವ ಸೂಚನೆಯೊಂದನ್ನು ಹೈಕಮಾಂಡ್ ನೀಡಿದೆ. ಕಳಪೆ ಸಾಧನೆ ತೋರಿರುವ, ಜನಾನುರಾಗಿಯಾಗಿರದ ಜನ ಪ್ರತಿನಿಧಿಗಳಿಗೆ ಟಿಕೆಟ್ ನಿರಾಕರಿಸುವಂತೆ ಸಿದ್ದರಾಮಯ್ಯ, ಪರಮೇಶ್ವರ್ ಅವರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ ನೀಡಿದೆ.

Current ministers, MLAs to be knocked off from Karnataka Congress' ticket list

ಬಿಜೆಪಿಯಂತೆ ಕಾಂಗ್ರೆಸ್ ಕೂಡಾ ತನ್ನ ಶಾಸಕರು, ಸಚಿವರುಗಳ ರಿಪೋರ್ಟ್ ಕಾರ್ಡ್ ತಯಾರಿಸುತ್ತಿದ್ದು, ಇದರಲ್ಲಿ ಕಳಪೆ ಸಾಧನೆ ಮಾಡಿರುವ ಜನ ಪ್ರತಿನಿಧಿಗಳಿಗೆ ಮುಂದಿನ ಚುನಾವಣೆಗೆ ಟಿಕೆಟ್ ನೀಡದಿರಲು ಕಾಂಗ್ರೆಸ್ ನಿರ್ಧರಿಸಿದೆ. ಇದರಿಂದ ಅನೇಕ ಹಿರಿಯ ಸಚಿವರು ಕಂಗಾಲಾಗಿದ್ದು, ಅಳಿದುಳಿದ ಸಮಯದಲ್ಲಿ ಜನಸೇವೆ ಮಾಡುವ ಪ್ರಯತ್ನದಲ್ಲಿ ತೊಡಗಿರುವುದು ಕಂಡು ಬಂದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Non-performing MLAs and some current cabinet ministers, will not be given a ticket by the Congress in Karnataka to contest the 2018 assembly elections.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ