Heavy Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ!
Heavy Rains: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಸರಣದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾರೀ ಮಳೆ ಹಿನ್ನೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನೂ ಮೂರು ದಿನ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಸಹ ಘೋಷಿಸಲಾಗಿದೆ. ಯಾವ ಭಾಗದಲ್ಲಿ ಮಳೆ ಆರ್ಭಟ ಇದೆ ಎನ್ನುವ ವಿವರ ಇಲ್ಲಿದೆ.
ಚಂಡಮಾರುತದ ಪ್ರಸರಣದಿಂದ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಜ್ಯದಲ್ಲಿ ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಅಬ್ಬರ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 28ರಂದು ಭಾರೀ ಮಳೆ ಆಗಲಿದೆ. ಹೀಗಾಗಿ, ಉತ್ತರ ಕನ್ನಡ ಹಾಗೂ ಶಿಮಮೊಗ್ಗ (Shivamogga) ಜಿಲ್ಲೆಗಳಲ್ಲಿ ನಾಳೆ(ಆಗಸ್ಟ್ 28) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
* ಒಡಿಶಾ ಕರಾವಳಿಯ ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡಿದೆ. ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ. ಎತ್ತರಕ್ಕೆ ವಿಸ್ತರಿಸಿದೆ. ಇದು ಮುಂದಿನ 24 ಗಂಟೆಗಳಲ್ಲಿ ಒಡಿಶಾದಾದ್ಯಂತ ಪಶ್ಚಿಮ-ವಾಯುವ್ಯಕ್ಕೆ ನಿಧಾನವಾಗಿ ಚಲಿಸುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 1ರ ವರೆಗೆ ಮಳೆ ಆರ್ಭಟ: ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಆರ್ಭಟ ಸೆಪ್ಟೆಂಬರ್ 1ರ ವರೆಗೆ ಇರಲಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 31ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ.












Click it and Unblock the Notifications