ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾನುವಾರವೂ ಕರ್ನಾಟಕ, ಕೇರಳದಲ್ಲಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 17; ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಕೇರಳ ಮತ್ತು ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಸಹ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಶನಿವಾರ ಕರ್ನಾಟಕದ ಕೊಡಗು, ದಕ್ಷಿಣ ಕನ್ನಡ, ಬೆಂಗಳೂರು, ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೇರಳದಲ್ಲಿ ಮಳೆ ಭಾರೀ ಅನಾಹಿತ ಸೃಷ್ಟಿಸಿದ್ದು, ಎನ್‌ಡಿಆರ್‌ಎಫ್ ಪಡೆಯನ್ನು ನಿಯೋಜನೆ ಮಾಡಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯದಲ್ಲಿಯೂ ಮಳೆಯಾಗುತ್ತಿದೆ.

ತಡರಾತ್ರಿ ಭಾರೀ ಮಳೆ; ಧರ್ಮಸ್ಥಳ ಯಾತ್ರಾರ್ಥಿಗಳ ಪರದಾಟತಡರಾತ್ರಿ ಭಾರೀ ಮಳೆ; ಧರ್ಮಸ್ಥಳ ಯಾತ್ರಾರ್ಥಿಗಳ ಪರದಾಟ

ಭಾನುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ತುಮಕೂರು, ಬಾಗಲಕೋಟೆ, ಕೋಲಾರ, ಬೆಳಗಾವಿ, ಗದಗ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ 2 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಮುಂದಿನ 2 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು ನಗರದ ವಿವಿಧ ಪ್ರದೇಶದಲ್ಲಿ ಶನಿವಾರ ಸಂಜೆ ಧಾರಾಕಾರ ಮಳೆಯಾಗಿದೆ. ತಡರಾತ್ರಿ ಸಹ ಮಳೆ ಸುರಿದಿದ್ದು, ಭಾನುವಾರ ಮೋಡ ಕವಿದ ವಾತಾವರಣವಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.17ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆ, ಆರೆಂಜ್ ಅಲರ್ಟ್ ಘೋಷಣೆಅ.17ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆ, ಆರೆಂಜ್ ಅಲರ್ಟ್ ಘೋಷಣೆ

ಚಂಡಮಾರುತದ ಪ್ರಭಾವದಿಂದ ಮಳೆ

ಚಂಡಮಾರುತದ ಪ್ರಭಾವದಿಂದ ಮಳೆ

ಭಾನುವಾರ ಮತ್ತು ಸೋಮವಾರ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಶನಿವಾರ ಹಾಸನದಲ್ಲಿ 11 ಸೆಂ. ಮೀ. ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆಯಾಗಿದೆ. ಬೆಂಗಳೂರು ವಿವಿ ವ್ಯಾಪ್ತಿಯಲ್ಲಿ 7, ಬೆಳ್ತಂಗಡಿ 6, ಚಿಂತಾಮಣಿ 4, ಮೈಸೂರು 3, ಕೊಳ್ಳೇಗಾಲ 2, ಬೆಂಗಳೂರು ನಗರ ಮತ್ತು ಸಕಲೇಶಪುದಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ.

ಯಾವ-ಯಾವ ಜಿಲ್ಲೆಗಳಲ್ಲಿ ಮಳೆ

ಯಾವ-ಯಾವ ಜಿಲ್ಲೆಗಳಲ್ಲಿ ಮಳೆ

ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕೇರಳದಲ್ಲಿ ಭಾರೀ ಮಳೆ, ಜನರ ಸಂಕಷ್ಟ

ಕೇರಳದಲ್ಲಿ ಭಾರೀ ಮಳೆ, ಜನರ ಸಂಕಷ್ಟ

ಕೇರಳ ರಾಜ್ಯದಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದೆ. ಇದುವರೆಗೂ ಮೂವರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಕೊಯಿಕ್ಕೊಡ್, ವಯನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ವಿವಿಧ ರಾಜ್ಯಗಳಲ್ಲಿ ಮಳೆ

ವಿವಿಧ ರಾಜ್ಯಗಳಲ್ಲಿ ಮಳೆ

ಭಾರತೀಯ ಹವಾಮಾನ ಇಲಾಖೆ ಅಸ್ಸಾಂ, ಮೇಘಾಲಯ, ಉತ್ತರಾಖಂಡ, ಮಣಿಪುರ, ಮಿಜೋರಾಂ, ಉತ್ತರ ಪ್ರದೇಶ, ತ್ರಿಪುರ, ಪುದುಚೇರಿ, ಆಂಧ್ರ ಪ್ರದೇಶ, ತೆಲಂಗಾಣ, ಗೋವಾ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಒಡಿಶಾ, ಸಿಕ್ಕಿಂ ಮುಂತಾದ ರಾಜ್ಯಗಳಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬಿಹಾರ, ಹರ್ಯಾಣ, ದೆಹಲಿ, ರಾಜಸ್ಥಾನ, ತೆಲಂಗಾಣ, ಗುಜರಾತ್ ರಾಜ್ಯದಲ್ಲಿಯೂ ಇಂದು ಮಳೆಯಾಗಲಿದೆ. ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಅಕ್ಟೋಬರ್ 19ರ ತನಕ ಮಳೆ ಮುಂದುವರೆಯಲಿದೆ.

Recommended Video

ಟೀಮ್ ಇಂಡಿಯಾ ಜೊತೆ ಅಭ್ಯಾಸದಲ್ಲಿ ಕಾಣಿಸಿಕೊಂಡ ಧೋನಿ | Oneindia Kannada

English summary
The India Meteorological Department (IMD) has predicted heavy rain in Karnataka, Kerala and other states on Sunday. Due to cyclone at Arabian sea rain may continue till October 19, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X