Cyclone Biparjoy: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್: 5 ದಿನ ಭಾರಿ ಮಳೆ, ಮೀನುಗಾರರಿಗೆ ಎಚ್ಚರಿಕೆ

ಬಿಪರ್​​ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಕರ್ನಾಟಕ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 5 ದಿನಗಳ ಕಾಲ ಸಮುದ್ರ ಅಬ್ಬರಿಸಲಿದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಮುದ್ರದ ಸಮೀಪ ಹೋಗುವದನ್ನೂ ಕೂಡ ನಿಷೇಧಿಸಲಾಗಿದೆ.

High Alert Issued For Coastal Districts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 42 ಕಿಮೀ ಕರಾವಳಿ ತೀರವನ್ನು ಹೊಂದಿದೆ. ಸಮುದ್ರದ ಎತ್ತರ 3 ರಿಂದ 4 ಮೀಟರ್ ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಇದ್ದು, ಜೂನ್ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಭಾರಿ ಮಳೆ ಸಾಧ್ಯತೆ

ಬಿಪರ್ ಜಾಯ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳು ಬಿರುಗಾಳಿ, ಗುಡುಗು, ಮಿಂಚಿನ ಸಹಿತ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಮಲೆನಾಡು ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಕೂಡ ಮುಂದಿನ 5 ದಿನಗಳ ಕಾಲ ಸಂಜೆ ವೇಳೆ ಉತ್ತಮ ಮಳೆ ಬೀಳುವ ಮುನ್ಸೂಚನೆ ನೀಡಿದೆ.

ಗುಜರಾತ್‌ನಲ್ಲಿ ಕಟ್ಟೆಚ್ಚರ

ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತ ತೀವ್ರಗೊಂಡಿದ್ದು, ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಚಂಡಮಾರುತ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗುವ ಅಪಾಯವಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 41000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.

ಜೂನ್ 15ರಂದು ಬಿಪರ್ ಜಾಯ್ ಚಂಡಮಾರುತ ಗುಜರಾತ್‌ನ ಕರಾವಳಿ ಭಾಗಗಳಿಗೆ ಅಪ್ಪಳಿಸುತ್ತದೆ ಎಂದು ಅಂದಾಜು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+