Karnataka Rains: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ಈ ಜಿಲ್ಲೆಗಳಲ್ಲಿ ರೆಡ್ & ಆರೆಂಜ್ ಅಲರ್ಟ್, ಭಾರೀ ಮಳೆ ಮುನ್ಸೂಚನೆ!

Karnataka Rains: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಚಂಡಮಾರತು ಹಾಗೂ ವಾಯುಭಾರ ಕುಸಿತದ ಕಾರಣಕ್ಕೆ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಗಸ್ಟ್‌ 19ರ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಹಾಗೂ ರೆಡ್ ಅಲರ್ಟ್ ನೀಡಲಾಗಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಒಂದು ವಾರದ ಅವಧಿಗೆ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರೀ ಮಳೆ ಹಿನ್ನೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Cyclone Brewing in Bay of Bengal Red and Orange Alerts Issued Heavy Rain in these districts Imd Reports

ಉತ್ತರ ಆಂಧ್ರಪ್ರದೇಶದ ಪಶ್ಚಿಮ ಮಧ್ಯಭಾಗ ಹಾಗೂ ಪಕ್ಕದ ವಾಯುವ್ಯ ಬಂಗಾಳಕೊಲ್ಲಿ ಮತ್ತು ದಕ್ಷಿಣ ಒಡಿಶಾ ಕರಾವಳಿಗಳಲ್ಲಿ ಟ್ರಫ್ ಸೃಷ್ಟಿಯಾಗಿದೆ. ವಾಯುವ್ಯ ಚಂಡಮಾರುತವು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿಮೀ ವರೆಗೆ ವಿಸ್ತರಿಸಿದೆ. ಇದು ಮುಂದಿನ 48 ಗಂಟೆಗಳಲ್ಲಿ ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾದಾದ್ಯಂತ ಚಲಿಸುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪ್ರಸರಣ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.

ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗದಲ್ಲಿ ಆಗಸ್ಟ್‌ 15 ರಿಂದ ಆಗಸ್ಟ್‌19ರವರೆಗೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ರೆಡ್ ಅಲರ್ಟ್: ಇನ್ನು ಚಂಡಮಾರುತದ ಪ್ರಭಾವದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 19 ಹಾಗೂ ಆಗಸ್ಟ್‌ 20ರಂದು ಭಾರೀ ಮಳೆ ಆಗುವ ಸಾಧ್ಯತೆ ಇದ್ದು ಈ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+