Karnataka Rains: ಚಂಡಮಾರುತ ಪ್ರಭಾವ: ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ ಆರ್ಭಟ!

Karnataka Rains: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಮಳೆಯಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಇಂದು (ಸೆಪ್ಟೆಂಬರ್ 29) ಸೋಮವಾರದಂದು ಸಹ ರಾಜ್ಯದ ವಿವಿಧ ಭಾಗದಲ್ಲಿ ಸೈಕ್ಲೋನ್ ಪ್ರಭಾವದಿಂದ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಚಂಡಮಾರುತ ಪ್ರಸರಣದಿಂದ ಭಾರೀ ಮಳೆ ಮುಂದುವರಿದಿದೆ. ಇಂದು ನಾಳೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 02 ರಿಂದ ಮಳೆ ಆರ್ಭಟ ಮತ್ತೆ ಜೋರಾಗಲಿದೆ ಎಂದು ಹೇಳಲಾಗಿದೆ. ಪಶ್ಚಿಮ ವಿದರ್ಭ ಮತ್ತು ನೆರೆಹೊರೆಯ ಮೇಲಿನ ವಾಯುಭಾರ ಕುಸಿತವು ಪಶ್ಚಿಮ ವಿದರ್ಭ ಮತ್ತು ಪಕ್ಕದ ಉತ್ತರ ಮಧ್ಯ ಮಹಾರಾಷ್ಟ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ದುರ್ಬಲಗೊಂಡಿದೆ. ಸೆಪ್ಟೆಂಬರ್ 28ರಂದು ಚಂಡಮಾರುತದ ಪ್ರಸರಣವು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Cyclone Effect Bengaluru Key Parts of Karnataka Hit by Heavy Rainfall

ಇನ್ನು ಮುಂದಿನ 24 ಗಂಟೆಗಳಲ್ಲಿ ಇದು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಯಿದೆ. ಇದು ಸೆಪ್ಟೆಂಬರ್ 28 ರಿಂದ 30 ರವರೆಗೆ ಉತ್ತರ ಮಧ್ಯ ಮಹಾರಾಷ್ಟ್ರ, ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರದಾದ್ಯಂತ ಪಶ್ಚಿಮಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಅಕ್ಟೋಬರ್ 1 ರ ವೇಳೆಗೆ ಗುಜರಾತ್ ಕರಾವಳಿಯ ಈಶಾನ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಹೊರಹೊಮ್ಮುಲಿದೆ. ಇದರಿಂದ ಅಕ್ಟೋಬರ್ ಮೊದಲ ವಾರ ಮಳೆ ಆರ್ಭಟ ಇನ್ನಷ್ಟು ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ರಾಜ್ಯದ ಈ ಭಾಗಗಳಲ್ಲಿ ಮಳೆ ಆರ್ಭಟ: ಇನ್ನು ಕರ್ನಾಟಕದ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಳೆ ಆಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಭಾಗದಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+