Cyclone Effect: ರಾಜ್ಯದ ಈ ಜಿಲ್ಲೆಗಳಲ್ಲಿ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಹೆಚ್ಚಾಗುತ್ತಲೇ ಇದೆ. ಈ ನಡುವೆಯೇ ಹಲವೆಡೆ ಈಗಾಗಲೇ ಮುಂಗಾರಿಗೂ ಮುನ್ನ ಮಳೆಯ ಸಿಂಚನ ಧರೆಗಿಳಿದಿದೆ. ಹಾಗೆಯೇ ಕೆಲವೆಡೆ ಇಂದು (ಫೆಬ್ರವರಿ 21) ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಫೆಬ್ರವರಿ 21) ಬೆಳಗ್ಗೆಯಿಂದಲೇ ರಣಬಿಸಿಲು ಮುಂದುವರೆದಿದೆ. ನಗರದಲ್ಲಿ ಮಧ್ಯಾಹ್ನದ ವೇಳೆಗೆ ತಾಪಮಾನದ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ರವಾನಿಸಿದೆ. ಇದರ ನಡುವೆಯೂ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

Cyclone Effect Heavy rainfall forecast in these districts of state in few moments on February 21

ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಪರಿಣಾಮ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಂದರೆ ಇನ್ನೂ ಕೆಲವೇ ಕ್ಷಣಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂಬ ಮುನ್ಸೂಚನೆ ಇದೆ.

ಇದೀಗ ಬೆಂಗಳೂರು ಮತ್ತು ಕರಾವಳಿ ಭಾಗಗಳಲ್ಲಿ ತಾಪಮಾನದ ಪ್ರಮಾಣ 35 ಡಿಗ್ರಿ ಸೆಲ್ಸಿಯಸ್‌ ಸಮೀಪದವರೆಗೂ ದಾಖಲಾಗುತ್ತಿದೆ. ಪರಿಣಾಮ ಈ ಭಾಗದ ಜನರು ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಬರಲು ಹೆದುರುತ್ತಿದ್ದಾರೆ. ಈ ನಡುವೆಯೇ ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲ್ಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ ಮಳೆಯಾಗುವ ಸಾಧ್ಯತೆಯಿದೆ ಹೆಚ್ಚಿದೆ ಎಂದು ತಿಳಿಸಿದೆ. ಹಲವು ಜಿಲ್ಲೆಗಳಲ್ಲಿ ಹಗಲಿನಿಂದ ಸಂಜೆವರೆಗೂ ಬಿಸಿಲಿನ ಧಗೆಯ ವಾತಾವರಣ ನಿರ್ಮಾಣವಾಗುತ್ತಿದ್ದು, ರಾತ್ರಿ ವೇಳೆ ಮೋಡ ಕವಿದ ವಾತಾವರಣ ಮುಂದುವರೆಯುತ್ತಿದೆ. ಅಂದರೆ ಚಂಡಮಾರುತದ ಪರಿಚಲನೆ ಹಿನ್ನಲೆ ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವೆಡೆ, ಮಲೆನಾಡು ಜಿಲ್ಲೆಗಳ ಕೆಲವೆಡೆ ತುಂತು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಉಳಿದಂತೆ ಇನ್ನೆಲ್ಲಾ ಜಿಲ್ಲೆಗಳಲ್ಲೂ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಚಂಡಮಾರುತದ ಪರಿಚಲನೆ ಪರಿಣಾಮ ಕೇರಳ, ಬಿಹಾರ, ನಾಗಾಲ್ಯಾಂಡ್, ಮಣಿಪುರ, ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂಬ ಮುನ್ಸೂಚನೆ ಇದೆ. ಒಂದು ವೇಳೆ ಕೇರಳದಲ್ಲಿ ಮಳೆ ಸುರಿದರೆ, ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆ ಬರುವುದು ಗ್ಯಾರಂಟಿ ಎಂಬ ವಾಡಿಕೆ ಮೊದಲಿನಿಂದಲೂ ಇದೆ. ಯಾಕೆಂದರೆ ಮೋಡಗಳು ಕೇರಳದ ಕಡೆಯಿಂದ ಮೊದಲು ಚಲಿಸುವುದೇ ಕರ್ನಾಟಕದ ಕಡೆ.

ಅಲ್ಲದೆ, ಮುಂಗಾರು ಎಂಟ್ರಿ ಕೂಡುವುದು ಕೇರಳಕ್ಕೆ. ಬಳಿಕ ಕರ್ನಾಟಕದಲ್ಲಿ ಆರ್ಭಟಿಸಲಿದೆ. ಇದಾದ ಬಳಿಕ ಮುಂಗಾರು ಮಳೆ ಇನ್ನುಳಿದ ರಾಜ್ಯಗಳಿಗೆ ವಿಸ್ತರಿಸಿಕೊಳ್ಳಲಿದೆ. ಕಳೆದ ಬಾರಿ ಕರ್ನಾಟಕಕ್ಕೆ ವಾಡಿಕೆಯ ಪ್ರಮಾಣ ಜೂನ್‌ ಆರಂಭದಲ್ಲೆ ಮುಂಗಾರು ಎಂಟ್ರಿ ಕೊಟ್ಟ ಪರಿಣಾಮ, ಕರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದಿದ್ದವು. ಇದರಿಂದ ಅನ್ನದಾತರ ಮುಖದಲ್ಲಿ ಮಂದಾಹಸ ಮೂಡಿದಂತಾಗಿತ್ತು. ಇನ್ನು ಈ ಬಾರಿ ವಾಡಿಕೆಗೂ ಮೊದಲ್ಲೇ ರಾಜ್ಯಕ್ಕೆ ಮಳೆ ಎಂಟ್ರಿ ಕೊಡಲಿದೆ ಎನ್ನುವ ಮಾಹಿತಿ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+