ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಈ ಭಾಗದಲ್ಲಿ 5 ದಿನ ಮಳೆ ಆರ್ಭಟ!

Heavy Rains in Karnataka: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ರಾಜ್ಯದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಕಳೆದ ವಾರ ತುಸು ಬಿಡುವು ನೀಡುತ್ತು. ಆದರೆ ಕಲ್ಯಾಣ ಕರ್ನಾಟಕದಲ್ಲಿ ಮಳೆಯಿಂದ ಭಾರೀ ಅವಾಂತರವೇ ಸಂಭವಿಸಿದೆ. ಈ ಭಾಗದ ನಾಲ್ಕು ರಾಜ್ಯಗಳ ಮೇಲೆ ಮಳೆ ಪ್ರಭಾವ ಬೀರಿದೆ. ಭಾರೀ ಮಳೆಯಿಂದಾಗಿ ಈ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಅಕ್ಟೋಬರ್ 05ರ ವರೆಗೆ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 5 ದಿನಗಳ ವರೆಗೆ ಮಳೆ ಇರಲಿದೆ. ದೇಶದ ವಿವಿಧ ಭಾಗದಲ್ಲಿ ನೈಋತ್ಯ ಮಾನ್ಸೂನ್ ಮುಕ್ತಾಯವಾಗುತ್ತಿದೆ. ಆದರೆ, ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

Cyclone Effect Heavy Rains for 5 Days in Bengaluru and Parts of Karnataka

ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿಮೀ ವರೆಗೆ ವಿಸ್ತರಿಸಿದೆ. ಇದು ಸೌರಾಷ್ಟ್ರದಾದ್ಯಂತ ಪಶ್ಚಿಮಕ್ಕೆ ವಾಯುವ್ಯಕ್ಕೆ ಚಲಿಸಿ, ಅಕ್ಟೋಬರ್ 1ರ ಸುಮಾರಿಗೆ ಈಶಾನ್ಯ ಅರೇಬಿಯನ್ ಸಮುದ್ರಕ್ಕೆ ಹೊರಹೊಮ್ಮುವ ಸಾಧ್ಯತೆಯಿದೆ. ಈ ವೇಳೆ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 5.8 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪ್ರಸರಣ ಮುಂದುವರೆದಿದೆ. ಹೀಗಾಗಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಮುಂದುವರಿದಿದೆ.

ಇಂದು (ಮಂಗಳವಾರ - ಸೆಪ್ಟೆಂಬರ್ 30)ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಯಲ್ಲಿ ಮಳೆ ಆರ್ಭಟ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮುಂದಿನ 5 ದಿನ ಧಾರಾಕಾರ ಮಳೆ: ಇನ್ನು ಕರ್ನಾಟಕದ ವಿವಿಧ ಭಾಗದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಅಕ್ಟೋಬರ್ 05ರ ವರೆಗೆ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.

ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+