ಸೈಕ್ಲೋನ್ ಪ್ರಭಾವ: ಕರ್ನಾಟಕದ ವಿವಿಧೆಡೆ ಮಳೆ, 15 ದಿನ ಮುಂಗಾರು ಮಳೆ ವಿಸ್ತರಣೆ!

ಚಂಡಮಾರುತದ ಪ್ರಸರಣದಿಂದ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದೇಶದ ವಿವಿಧ ಭಾಗದಲ್ಲಿ ನೈಋತ್ಯ ಮಾನ್ಸೂನ್ / ಮುಂಗಾರು ಅಂತ್ಯವಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಮುಂಗಾರು ಮಳೆ ಇನ್ನೂ ಎರಡು ವಾರಗಳ ಅವಧಿಗೆ ವಿಸ್ತರಣೆ ಆಗಿದೆ. ಕರ್ನಾಟಕದಲ್ಲಿ ಅಕ್ಟೋಬರ್ 15ರ ವರೆಗೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಕ್ಟೋಬರ್ 01 ರಂದು ಎಲ್ಲೆಲ್ಲಿ ಮಳೆ ಆಗಲಿದೆ ಹಾಗೂ ಹವಾಮಾನ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ರಾಜ್ಯದಲ್ಲಿ ಮುಂಗಾರು ಮಳೆ ನೆನ್ನೆಗೆ (ಸೆಪ್ಟೆಂಬರ್ 30)ಕ್ಕೆ ಅಂತ್ಯವಾಗಬೇಕಾಗಿತ್ತು. ಆದರೆ, ಚಂಡಮಾರುತದ ಪ್ರಸರಣ ಹಾಗೂ ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಮುಂಗಾರು ಇನ್ನೂ ಎರಡು ವಾರಗಳ ಅವಧಿಗೆ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಇನ್ನು ಬಂಗಾಳ ಉಪಸಾಗರದ ಆಂಧ್ರ ಪ್ರದೇಶದ ಕರಾವಳಿ ತೀರದಲ್ಲಿ ತೀವ್ರ ವಾಯುಭಾರ ಕುಸಿತ ಸೃಷ್ಟಿ ಆಗಿರುವ ಹಿನ್ನೆಲೆಯಲ್ಲಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ರಣಭೀಕರ ಮಳೆ ಮುಂದುವರಿದಿದೆ.

Cyclone Extends Monsoon Heavy Rains Lash Karnataka for 15 More Days

ವಾಯುಭಾರ ಕುಸಿತದ ಪರಿಣಾಮದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ರಾಜ್ಯದ ಯಾವೆಲ್ಲಾ ಭಾಗದಲ್ಲಿ ಮಳೆ ಆಗಲಿದೆ ಎನ್ನುವ ವಿವರ ಇಲ್ಲಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ. ಇನ್ನು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+