Heavy Rain: ಫೆಂಗಲ್ ಚಂಡಮಾರುತ: ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಭಾರೀ ಮಳೆ- ತಮಿಳುನಾಡಿನಲ್ಲಿ ಹೈ ಅಲರ್ಟ್!

ಬೆಂಗಳೂರು ನವೆಂಬರ್ 27: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರೂಪಗೊಂಡ ಫೆಂಗಲ್ ಚಂಡಮಾರುತ ಕರ್ನಾಟಕದತ್ತ ಆಗಮಿಸುತ್ತಿದೆ. ಇದರಿಂದಾಗಿ ಇಂದು ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೇ ಗಂಟೆಗಳಲ್ಲಿ ರಾಜ್ಯಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು ಕರಾವಳಿ ಭಾಗದಲ್ಲಿ ಮಳೆ ಅರ್ಭಟಿಸಲಿದೆ.

ಹೀಗಾಗಿ ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ಸೇರಿದಂತೆ ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

cyclone fengal effect heavy rain alert given to karnataka tamil nadu from november 27 to december 1

ಮೈಸೂರು, ಚಾಮರಾಜನಗರ, ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ ಜಿಲ್ಲೆಗಳಲ್ಲೂ ಸಾಧಾರಣದಿಂದ ಅಧಿಕ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಗೋಚರಿಸಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 1ರಿಂದ ವರಣನ ಅರ್ಭಟ ಹೆಚ್ಚಾಗಲಿದೆ ಎಂದು ಇಲಾಖೆ ಭವಿಷ್ಯ ನುಡಿದಿದೆ. ಇನ್ನೂ ಫೆಂಗಲ್ ಚಂಡಮಾರುತ ತಮಿಳುನಾಡಿನ ಮೇಲೆ ಹೆಚ್ಚಿನ ಪ್ರಭಾವ ಉಂಟು ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ತಮಿಳುನಾಡಿನಲ್ಲಿ ಶಾಲೆಗಳಿಗೆ ರಜೆ ನೀಡಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ನವೆಂಬರ್ 27 ಬುಧವಾರದಂದು ಚೆನ್ನೈ, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುಗಳಲ್ಲಿನ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯ ಎಚ್ಚರಿಕೆ ನೀಡಿದ ನಂತರ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

cyclone fengal effect heavy rain alert given to karnataka tamil nadu from november 27 to december 1

ಇದಲ್ಲದೇ ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಂಜಾವೂರು, ತಿರುವರೂರು, ತಿರುವಳ್ಳೂರು, ವಿಲ್ಲುಪುರಂ ಮತ್ತು ಪುದುಚೇರಿ ಮತ್ತು ಕಾರೈಕಲ್ ಕೇಂದ್ರಾಡಳಿತ ಪ್ರದೇಶಗಳ ಶಾಲಾ-ಕಾಲೇಜುಗಳಿಗೆ ಪ್ರತಿಕೂಲ ಹವಾಮಾನದ ಕಾರಣ ನವೆಂಬರ್ 27 ರಂದು ರಜೆ ಘೋಷಣೆ ಮಾಡಲಾಗಿದೆ.

ಇನ್ನೂ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಅರಿಯಲೂರ್, ತಂಜಾವೂರು, ತಿರುವಾರೂರ್, ನಾಗಪಟ್ಟಿಣಂ ಮತ್ತು ಪುದುಕೊಟ್ಟೈನಲ್ಲಿ ಬುಧವಾರ ಅತಿ ಹೆಚ್ಚು (12-20 ಸೆಂ.ಮೀ.) ಮಳೆಯಾಗುವುದರಿಂದ ಆರ್‌ಎಂಸಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ತಮಿಳುನಾಡಿನಲ್ಲಿಂದು ಹೈ ಅಲರ್ಟ್!

ಐಎಂಡಿ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನ ಪೋಸ್ಟ್‌ನಲ್ಲಿ, ಒತ್ತಡದ ಪ್ರದೇಶ ಉತ್ತರ-ವಾಯುವ್ಯದ ಕಡೆಗೆ ಚಲಿಸುವ ಮತ್ತು ನವೆಂಬರ್ 27ರಂದು ಚಂಡಮಾರುತವಾಗಿ ಬದಲಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದೆ. ಇದು ತಮಿಳುನಾಡು ಕರಾವಳಿಯ ಕಡೆಗೆ ಚಲಿಸುತ್ತದೆ. ನಂತರ ಕರ್ನಾಟಕದ ಮೂಲಕ ಮುಂದಿನ ಎರಡು ದಿನಗಳವರೆಗೆ ಶ್ರೀಲಂಕಾ ಕರಾವಳಿಯನ್ನು ಮುಟ್ಟುತ್ತದೆ. ಹವಾಮಾನ ಇಲಾಖೆ ಈ ಚಂಡಮಾರುತಕ್ಕೆ 'ಫೆಂಗಲ್' ಎಂದು ಹೆಸರಿಸಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ನಂತರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸಚಿವಾಲಯದಲ್ಲಿ ಅಧಿಕಾರಿಗಳ ದೊಡ್ಡ ಸಭೆ ನಡೆಸಿದರು. ಈ ಸಭೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಎನ್‌ಡಿಆರ್‌ಎಫ್ ಮತ್ತು ರಾಜ್ಯ ತಂಡಗಳನ್ನು ನಿಯೋಜಿಸುವಂತೆ ಸೂಚಿಸಿದರು. ಪ್ರಸ್ತುತ ಎನ್‌ಡಿಆರ್‌ಎಫ್ ಮತ್ತು ರಾಜ್ಯ ತಂಡಗಳನ್ನು ತಿರುವರೂರ್, ಮೈಲಾಡುತುರೈ, ನಾಗಪಟ್ಟಣಂ ಮತ್ತು ಕಡಲೂರು ಜಿಲ್ಲೆಗಳಿಗೆ ಕಳುಹಿಸಲಾಗಿದೆ.

ತಮಿಳುನಾಡಿನಲ್ಲಿ ಪರಿಹಾರ ಶಿಬಿರ ಮತ್ತು ವೈದ್ಯರ ತಂಡ ಸಿದ್ಧ

ಸಾಕಷ್ಟು ಸಂಖ್ಯೆಯ ಪರಿಹಾರ ಶಿಬಿರಗಳು ಮತ್ತು ವೈದ್ಯರ ತಂಡಗಳು ಸಿದ್ಧವಾಗಿವೆ ಎಂದು ಸಭೆಯಲ್ಲಿ ಸಿಎಂಗೆ ತಿಳಿಸಲಾಲಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಇದಲ್ಲದೇ ಇತರೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಮೊದಲು ತಗ್ಗು ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸರ್ಕಾರ ಈಗಾಗಲೇ ಸೂಚಿಸಿದೆ. ಇದಾದ ಬಳಿಕ ಬಹುತೇಕ ದೋಣಿಗಳು ದಡಕ್ಕೆ ಮರಳಿವೆ. ಇದೇ ವೇಳೆ ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರು ಸಮೀಪದ ಬಂದರುಗಳಿಗೆ ತೆರಳುವಂತೆ ತಿಳಿಸಲಾಗಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇದು ದಿನದ 24 ಗಂಟೆಗಳು ವಾರದ ಏಳು ದಿನವೂ ಕಾರ್ಯನಿರ್ವಹಿಸುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+