Cyclone Fengal: ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 13ರ ವರೆಗೆ ಭಾರೀ ಮಳೆ ಮುನ್ಸೂಚನೆ

Cyclone Fengal: ಈಗಾಗಗಲೇ ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲದ ನಡುವೆಯಯೂ ಬಂಗಾಳ ಕೊಲ್ಲಿಯಲ್ಲಿ ಫೆಂಗಲ್‌ ಚಂಡಮಾರುತ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಡಿಸೆಂಬರ್ 13ರ ವರೆಗೂ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ ನಡುವೆಯೇ ಇಂದು (ನವೆಂಬರ್ 27) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದಲೂ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಕೆಲವೆಡೆ ಜುನುಗು ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Cyclone Fengal Heavy Rainfall Forecast in These districs of karnataka Till December 13

ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಅಸ್ನಾ, ಡಾನಾ ಚಂಡಮಾರುತದಿಂದ ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಹಾಗೆಯೇ ಇದೀಗ ಫೆಂಗಲ್‌ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಮಳೆಯೂ ಸುರಿಯಲಿದ ಎಂದು ತಿಳಿಸಿದೆ.

ನವೆಂಬರ್ 27ರಿಂದ ಡಿಸೆಂಬರ್ 5ರ ವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಹಾಸನ, ತುಮಕೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಲಕ್ಷಣಗಳು ಇರುವುದಿಲ್ಲ ಎಂದು ತಿಳಿಸಿದೆ.

ಡಿಸೆಂಬರ್ 5ರಿಂದ 13ರ ವರೆಗೆ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ಶಿವಮೊಗ್ಗ, ರಾಮನಗರ, ಬಳ್ಳಾರಿ, ಕೊಪ್ಪಳ ಸೇರಿದಂತರ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನುಳಿದಂತೆ ಇದೇ ವೇಳೆ ದಕ್ಷಿಣ ಕನ್ನಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಉಡುಪಿ, ಚಾಮರಾಜನಗರ ಜಿಲ್ಲೆಗಳಿಗೆ ಯಾವುದೇ ಮಳೆ ಲಕ್ಷಣಗಳು ಇರುವುದಿಲ್ಲೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕಕ್ಕೆ ಮುಂಗಾರು ಜೂನ್‌ ಆರಂಭದಲ್ಲಿ ಎಂಟ್ರಿ ಕೊಟ್ಟಿದ್ದು, ಇದರ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಇನ್ನು 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಸುಟ್ಟು ಹೋಗಿದ್ದು, ಇದರಿಂದ ಅನ್ನದಾತನ ಬದುಕು ಮೂರಬಟ್ಟೆಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+