Cyclone Fengal: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸುನಾಮಿ ಮಳೆ ಮುನ್ಸೂಚನೆ
Cyclone Fengal: ಫೆಂಗಲ್ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ನಡುವೆಯೂ ಮಳೆ ಮುಂದುವರೆದಿದೆ. ಹಾಗೆಯೇ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 02) ಬೆಳಗ್ಗೆಯಿಂದ ಮೋಡ ಮುಚ್ಚಿದ ವಾತಾವರಣ ಇದ್ದು, ನಗರದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ನಗರದಲ್ಲಿ ಮತ್ತಷ್ಟು ಮಳೆ ಚುರುಕು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಮೂರು ದಿನಗಳಿಂದಲೂ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯೂ ಸಹ ಮುಂದುವರೆದಿದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಹಲವೆಡೆ ಗುಡುಗು, ಸಿಡಿಲು ಸಹಿತ ಚದುರಿದಂತೆ ವ್ಯಾಪಕವಾಗಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
5 ದಿನ ಭಾರೀ ಮಳೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಿದೆ. ಅದರಲ್ಲೂ ಇಂದು ಅತಿಭಾರೀ ಮಳೆಯಾಗುವ ಸಾಧ್ಯತೆಯುದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂವಚನೆ ನೀಡಿದೆ.
ಉತ್ತರ ಒಳನಾಡಿದ ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆಗೆ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ದಿನದ ಮಳೆ ಭವಿಷ್ಯ ಮತ್ತು ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು:#KSNDMC pic.twitter.com/ZhGm6sUeJB
— Karnataka State Natural Disaster Monitoring Centre (@KarnatakaSNDMC) December 2, 2024
ಇನ್ನು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 2 ಮತ್ತು 3ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುತು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇದೇ ವೇಳೆ ಮೈಸೂರು ಮತ್ತು ಚಾಮರಾಜನಗರ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ.












Click it and Unblock the Notifications