Cyclone Fengal: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Cyclone Fengal: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲದಲ್ಲೂ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಅದರಲ್ಲೂ ಬಂಗಾಲಕೊಲ್ಲಿಯಲ್ಲಿನ ಫೆಂಗಲ್‌ ಚಂಡಮಾರುತದ ಪರಿಣಾಮ ಮುಂದಿನ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಲಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫೆಂಗಲ್‌ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳ ಮೇಲೆ ಬೀರಲಿದೆ. ರಾಜ್ಯದ ದಕ್ಷಿಣ ಒಳನಾಡು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಚುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Cyclone Fengal Heavy Rainfall Forecast in These districts for Next 5 days From November 30

ಇಂದು (ನವೆಂಬರ್ 30) ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಚಳಿಗಾಳಿ ನಡುವೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

5 ದಿನ ಭಾರೀ ಮಳೆ ಮುನ್ಸೂಚನೆ?: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಈ ಭಾಗದಲ್ಲಿ ಡಿಸೆಂಬರ್ 2 & 3ರಂದು ಚದುರಿದಂತೆ ವ್ಯಾಪಕವಾಗಿ ಅತಿಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಐಎಂಡಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ 3ರವರೆಗೆ ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ ಒತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂವಚನೆ ನೀಡಿದೆ.

ಉತ್ತರ ಒಳನಾಡಿದ ಬೀದರ್‌, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆಗೆ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+