Karnataka Rains: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ & ಯೆಲ್ಲೋ ಅಲರ್ಟ್!
Cyclone Impact Rain: ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆರ್ಭಟ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳ - ಕರ್ನಾಟಕ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಂಡಿದೆ. ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಅದು ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇರುವುದರಿಂದ ಮುಂದಿನ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ.ವರೆಗೆ ವಿಸ್ತರಿಸಿರುವ ವಾಯುವ್ಯ ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಇದರ ಪ್ರಭಾವದಡಿಯಲ್ಲಿ, ಅಕ್ಟೋಬರ್ 21 ರ ಸುಮಾರಿಗೆ ಬಂಗಾಳಕೊಲ್ಲಿಯ ಆಗ್ನೇಯ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆರ್ಭಟ ಮುಂದುವರಿದಿದೆ.
ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದ್ದು, 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು , ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಭಾಗದಲ್ಲಿ ಭಾರೀ ಮಳೆ: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮಳೆ ಆರ್ಭಟ ಜೋರು: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಇನ್ನು ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಕೋಲಾರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications