Heavy Rain: ಚಂಡಮಾರುತ ಪ್ರಭಾವ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ!
Heavy Rain: ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಸೇರಿ ರಾಜ್ಯದಾದ್ಯಂತ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕದ ಉತ್ತರ ಒಳನಾಡು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಮುದ್ರ ಮಟ್ಟಕ್ಕಿಂತ ಸರಾಸರಿ 4.5 ಮತ್ತು 5.8 ಕಿ.ಮೀ.ಗಳ ನಡುವೆ ಮೇಲ್ಭಾಗದ ವಾಯುವ್ಯ ಚಂಡಮಾರುತದ ಪರಿಚಲನೆ ಮುಂದುವರಿದಿದೆ. ಆಗಸ್ಟ್ 13ರ ಸುಮಾರಿಗೆ ವಾಯುವ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಮಳೆ ಪ್ರಭಾವ ಈ ವಾರ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.
ಚಂಡಮಾರುತ ಹಾಗೂ ವಾಯುಭಾರ ಕುಸಿತ ಕಾರಣಕ್ಕೆ ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಆಗಸ್ಟ್ 11ರ ಸೋಮವಾರ ಸಹ ಬೆಂಗಳೂರು ಸೇರಿ ರಾಜ್ಯದಾದ್ಯಂತ ಧಾರಾಕಾರ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ ಎನ್ನುವುದನ್ನು ನೋಡೋಣ.

ಕಳೆದ ಮೂರು ದಿನಗಳಿಂದಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಇನ್ನು ಇಂದೂ ಸಹ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ: ಇನ್ನು ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಇರಲಿದೆ. ಅಲ್ಲದೇ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಕರ್ನಾಟಕ ಹವಾಮಾನ ಬದಲಾವಣೆ
ಕರ್ನಾಟಕದ ಉತ್ತರ ಒಳನಾಡು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಮುದ್ರ ಮಟ್ಟಕ್ಕಿಂತ ಸರಾಸರಿ 4.5 ಮತ್ತು 5.8 ಕಿ.ಮೀ.ಗಳ ನಡುವೆ ಮೇಲ್ಭಾಗದ ವಾಯುವ್ಯ ಚಂಡಮಾರುತದ ಪರಿಚಲನೆ ಮುಂದುವರಿಯುತ್ತದೆ.
ಆಗಸ್ಟ್ 13, 2025 ರ ಸುಮಾರಿಗೆ ವಾಯುವ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.












Click it and Unblock the Notifications