Heavy Rain Alert: ಸೈಕ್ಲೋನ್ ಪ್ರಭಾವ: ಬೆಂಗಳೂರು ಸೇರಿ ಈ ಭಾಗಗಳಲ್ಲಿ ಧಾರಾಕಾರ ಮಳೆ: ಐಎಂಡಿ ರಿಪೋರ್ಟ್

Heavy Rain Alert: ಚಂಡಮಾರುತದ ಪ್ರಭಾವ ಹಾಗೂ ವಾಯುಭಾರ ಕುಸಿತ ಕಾರಣಕ್ಕೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇನ್ನೂ ಒಂದು ವಾರದ ಅವಧಿಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ರಣಭೀಕರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಈ ಬಾರಿ ನೈಋತ್ಯ ಮಾನ್ಸೂನ್ ಉತ್ತಮವಾಗಿ ಆಗಿದೆ. ಅಲ್ಲದೇ ಹಿಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರೀತಿ ಇರುವಾಗ ವಾಯುಭಾರ ಕುಸಿತ ಹಾಗೂ ತಮಿಳುನಾಡಿಗೆ ಈಶಾನ್ಯ ಮುಂಗಾರು ಪ್ರವೇಶವಾಗಿರುವುದು ಸೇರಿದಂತೆ ಹಲವು ಕಾರಣಕ್ಕೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕದಲ್ಲೂ ಅಕ್ಟೋಬರ್ 29ರ ವರೆಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Cyclone Impact IMD Issues Heavy Rain Alert for Bengaluru and Several Districts of Karnataka

ಬೆಂಗಳೂರು ಸೇರಿ ಹಲವೆಡೆ ಮಳೆ ಆರ್ಭಟ ಮುಂದುವರಿದಿದೆ. ಅಕ್ಟೋಬರ್‌ 23ರಂದು ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಮುಂದುವರಿದಿದೆ. ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿನ ವಾಯುಭಾರ ಕುಸಿತವು ಕಳೆದ 3 ಗಂಟೆಗಳಲ್ಲಿ ಗಂಟೆಗೆ 7 ಕಿ.ಮೀ ವೇಗದಲ್ಲಿ ಉತ್ತರ-ವಾಯುವ್ಯ ದಿಕ್ಕಿಗೆ ತಲುಪಿದೆ.

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡಿರುವುದು ಮಳೆಗೆ ಕಾರಣವಾಗಿದೆ. ಇದರಿಂದ ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನೆರೆಯ ಆಂಧ್ರಪ್ರದೇಶದಲ್ಲೂ ಭಾರೀ ಮಳೆ ಆಗುತ್ತಿದೆ.

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ: ಇನ್ನು ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಮಿಂಚು - ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಅಲ್ಲದೇ ಶಿವಮೊಗ್ಗ, ವಿಜಯನಗರ, ಬಳ್ಳಾರಿ, ಚಿತ್ರದುರ್ಗದ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಮಿಂಚು - ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+