Rain Alert: ಚಂಡಮಾರುತ ಪ್ರಸರಣ: ರಾಜ್ಯದಲ್ಲಿ 3 ದಿನ ಮಳೆ, ಆರೆಂಜ್ & ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!
Karnataka Heavy Rain Alert: ಚಂಡಮಾರುತ ಪ್ರಸರಣದ ಭಾಗವಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಕಳೆದ 15 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಆಗಸ್ಟ್ 21ರ ವರೆಗೆ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ರಾಜ್ಯದ ಯಾವೆಲ್ಲಾ ಭಾಗದಲ್ಲಿ ಮಳೆ ಆಗಲಿದೆ ಹಾಗೂ ಹವಾಮಾನ ವರದಿ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕದ ಮೂರು ಭಾಗಗಳಲ್ಲಿ ಅಂದರೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಸಾಧಾರಣ ಮಳೆ ಮುಂದುವರಿದಿದೆ.

ಈಶಾನ್ಯ ಅರೇಬಿಯನ್ ಸಮುದ್ರದಿಂದ ಉತ್ತರ ಮಹಾರಾಷ್ಟ್ರದಾದ್ಯಂತ ದಕ್ಷಿಣ ಛತ್ತೀಸ್‌ಗಢದ ಮೇಲಿನ ಕಡಿಮೆ ಒತ್ತಡ ರೂಪುಗೊಂಡಿದೆ. ವಾಯು ಚಂಡಮಾರುತದ ಪರಿಚಲನೆ ಸೃಷ್ಟಿಯಾಗಿದೆ. ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 4.5 ಕಿ.ಮೀ. ಎತ್ತರದೊಂದಿಗೆ ದಕ್ಷಿಣಕ್ಕೆ ತಿರುಗಿದೆ. ವಾಯುವ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಹೊಸ ಕಡಿಮೆ ಒತ್ತಡದ ಪ್ರದೇಶವು (ವಾಯುಭಾರ ಕುಸಿತವು) ಆಗಸ್ಟ್ 18ರ ಸುಮಾರಿಗೆ ರೂಪುಗೊಳ್ಳುವ ಸಾಧ್ಯತೆಯಿದೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಆರೆಂಜ್ & ಯೆಲ್ಲೋ ಅಲರ್ಟ್
ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಈ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ. ಆಗಸ್ಟ್ 16 ರಿಂದ 20ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದಲ್ಲಿ ಯೆಲ್ಲೋ & ಆರೆಂಜ್ ಅಲರ್ಟ್ ಕೊಡಲಾಗಿದೆ.
ಎಲ್ಲೆಲ್ಲಿ ಮಳೆ ಆಗಲಿದೆ ?
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಈ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹಾಸನ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮೈಸೂರು ಜಿಲ್ಲೆ, ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಭಾಗದಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.












Click it and Unblock the Notifications